AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flagship Smartphones 2022: ​ಫೋನ್ ಖರೀದಿಸುವ ಪ್ಲಾನ್​ನಲ್ಲಿದ್ದರೆ ಸ್ವಲ್ಪ ಕಾಯಿರಿ: 2022ಕ್ಕೆ ರಿಲೀಸ್ ಆಗಲಿದೆ ಹುಬ್ಬೇರಿಸುವ ಸ್ಮಾರ್ಟ್​ಫೋನ್

Smartphones 2022: ಮುಂದಿನ ವರ್ಷ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿವೆ. ಈಗಾಗಲೇ ಅನೇಕ ಫೋನ್‌ಗಳು ಬಿಡುಗಡೆ ದಿನಾಂಕವನ್ನು ಘೊಷಣೆ ಮಾಡಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರ ಕುತೂಹಲವನ್ನು ಕೆರಳಿಸಿವೆ.

Flagship Smartphones 2022: ​ಫೋನ್ ಖರೀದಿಸುವ ಪ್ಲಾನ್​ನಲ್ಲಿದ್ದರೆ ಸ್ವಲ್ಪ ಕಾಯಿರಿ: 2022ಕ್ಕೆ ರಿಲೀಸ್ ಆಗಲಿದೆ ಹುಬ್ಬೇರಿಸುವ ಸ್ಮಾರ್ಟ್​ಫೋನ್
flagship smartphones 2022
TV9 Web
| Updated By: Vinay Bhat|

Updated on: Dec 13, 2021 | 3:40 PM

Share

ಹೊಸ ವರ್ಷಕ್ಕೆ (New Year 2022) ಇನ್ನೇನು ಕೆಲವೇ ದಿನಗಳಷ್ಟೆ ಬಾಕಿಯಿದೆ. ವರ್ಷಾಂತ್ಯಕ್ಕೆ ಪ್ರಸಿದ್ಧ ಇ ಕಾಮರ್ಸ್​ ತಾಣ, ರಿಟೇಲ್ ಸ್ಟೋರ್​ಗಳನ್ನು ಭರ್ಜರಿ ಆಫರ್​ಗಳಿಗೆ ಸ್ಮಾರ್ಟ್​ಫೋನ್​ಗಳು (Smartphone) ಸಿಗುತ್ತವೆ. ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಈಗಾಗಲೇ ಹೊಸ ಮಾದರಿಯ ಮೊಬೈಲ್​ಗಳ ಭರಾಟೆ ಜೋರಾಗಿದೆ. ಹೀಗಾಗಿ ಕ್ರಿಸ್ ಮಸ್, ಹೊಸ ವರ್ಷ ಸಂದರ್ಭ ಹೊಸ ಸ್ಮಾರ್ಟ್​ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಸ್ವಲ್ಪ ದಿನ ಕಾಯಿರಿ. ಯಾಕಂದ್ರೆ ಮುಂದಿನ ವರ್ಷ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿವೆ. ಈಗಾಗಲೇ ಅನೇಕ ಫೋನ್‌ಗಳು ಬಿಡುಗಡೆ ದಿನಾಂಕವನ್ನು ಘೊಷಣೆ ಮಾಡಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರ ಕುತೂಹಲವನ್ನು ಕೆರಳಿಸಿವೆ. ಅದರಲ್ಲೂ ಇತ್ತೀಚಿಗೆ ಬಿಡುಗಡೆಯಾದ ಹೊಸ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 ಒಳಗೊಂಡ ಸ್ಮಾರ್ಟ್‌ಫೋನ್‌ಗಳು 2022 ರಲ್ಲಿ ಬಿಡುಗಡೆ ಆಗಲಿವೆ. ಹಾಗಾದ್ರೆ 2022ರಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ನೋಡೋಣ.

ಒನ್‌ಪ್ಲಸ್‌ 10 ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ. ಈ ಫೋನ್ ಕೂಡ ಸ್ನಾಪ್‌ಡ್ರಾಗನ್ 8 ಜನ್ 1 ಚಿಪ್ ಹೊಂದಿರುವ ಸಾದ್ಯತೆ ಇದೆ. ಇನ್ನು ಈ ಫೋನ್‌ OnePlus ನ OxygenOS ಸ್ಕಿನ್‌ಗಳನ್ನು ಏಕೀಕರಿಸುವ ಮೊದಲ ಫೋನ್ ಎಂದು ಹೊಂದಿಸಲಾಗಿದೆ. ಹೊಸ ಸ್ಕಿನ್ ನಂತರ ಇನ್ನೂ ಅಪ್‌ಡೇಟ್ ವೇಳಾಪಟ್ಟಿಯಲ್ಲಿರುವ ಎಲ್ಲಾ ಇತರ OnePlus ಫೋನ್‌ಗಳಿಗೆ ಬರುತ್ತದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್ ಕಂಪನಿ ತನ್ನ ಗ್ಯಾಲಕ್ಸಿ ಎಸ್-ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಇದರಲ್ಲಿ ಬಹುನಿರೀಕ್ಷಿತ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ಮುಂದಿನ ವರ್ಷ ಬಿಡುಗಡೆ ಆಗುಬುದು ಖಚಿತವಾಗಿದೆ. ಜನವರಿ ಅಂತ್ಯದಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಇದು ಮಾರುಕಟ್ಟೆಯಲ್ಲಿ ದೂಳೆಬ್ಬಿಸಲು ಬರಲಿದೆ. ಈ ಸ್ಮಾರ್ಟ್‌ಫೋನ್‌ ಸರಣಿ ಗ್ಯಾಲಕ್ಸಿ S22, S22 Plus ಮತ್ತು Uಅಲ್ಟ್ರಾ ರೂಪಾಂತರಗಳೊಂದಿಗೆ ಬರುವ ಸಾಧ್ಯತೆ ಇದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 120hz ರಿಪ್ರೇಶ್‌ ರೇಟ್‌ ಬೆಂಬಲಿಸುವ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಅಲ್ಲದೆ ಕ್ವಾಡ್-ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎನ್ನಲಾಗಿದೆ.

ಇನ್ನು ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕೂಡ ಮುಂದಿನ ವರ್ಷ ಬಿಡುಗಡೆ ಆಗಲಿರುವ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸರಣಿಯ ಅತ್ಯುನ್ನತ ರೂಪಾಂತರವಾಗಿದೆ ಎಂದು ನಿರೀಕ್ಷಿಸಲಾಗಿದೆ. ವಿಶೇಷ ಎಂದರೆ ಇದು ಸ್ನಾಪ್‌ಡ್ರಾಗನ್‌ 8 Gen 1 ಚಿಪ್‌ನಿಂದ ಚಾಲಿತವಾಗಲಿದೆ. ಇದಲ್ಲದೆ ಈ ಫೋನ್ ಪಂಚ್-ಹೋಲ್ ಫ್ರಂಟ್ ಕ್ಯಾಮೆರಾ, ಸೇರಿದಂತೆ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಕೂಡ ಪಡೆದಿದೆ. ಇದು 144Hz ರಿಫ್ರೆಶ್ ರೇಟ್ ಬೆಂಬಲಿಸುವ 6.6-ಇಂಚಿನ OLED ಡಿಸ್‌ಪ್ಲೇ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಶವೋಮಿ ಕಂಪನಿ ಮುಂದಿನ ವರ್ಷ ಶವೋಮಿ 12 ಹೊಸ ಸ್ನಾಪ್‌ಡ್ರಾಗನ್‌ 8 Gen 1 ಪ್ರೊಸೆಸರ್‌ ಹೊಂದಿರುವ ಮೊದಲ ಫೋನ್‌ಗಳಲ್ಲಿ ಒಂದಾಗಿದೆ. ಈ ಸರಣಿಯು ಬಹು ಶೇಖರಣಾ ರೂಪಾಂತರಗಳನ್ನು ಒಳಗೊಂಡಿರುತ್ತದೆ. ಇದು ಬಿಗ್‌ ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, 100W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ. ಈ ಫೋನ್‌ ಕ್ವಾಡ್-ರಿಯರ್ ಕ್ಯಾಮೆರಾ ಮತ್ತು ಅಂಡರ್-ಡಿಸ್ಪ್ಲೇ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದಿನ ವರ್ಷ ಬಿಡುಗಡೆ ಆಗುವ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ iQOO 9 ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್‌ ಸರಣಿಯು ಉನ್ನತ-ಮಟ್ಟದ ಪ್ರೊ ರೂಪಾಂತರವನ್ನು ಒಳಗೊಂಡಂತೆ ಎರಡು ರೂಪಾಂತರಗಳಲ್ಲಿ ಬರಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್‌ ರೇಟ್‌ ಸಾಮರ್ಥ್ಯದ ಡಿಸ್‌ಪ್ಲೇ, ಹೊಸ ಶಾಖ ಪ್ರಸರಣ ವ್ಯವಸ್ಥೆ, ಮೈಕ್ರೋ-ಹೆಡ್ ಗಿಂಬಲ್ ಸ್ಟೆಬಿಲೈಸೇಶನ್ ಸಿಸ್ಟಮ್ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಡ್ಯುಯಲ್ ಸ್ಪೀಕರ್‌ಗಳು ಮತ್ತು ಸ್ಪರ್ಧಾತ್ಮಕ ಗೇಮಿಂಗ್‌ಗಾಗಿ ಪ್ರೆಶರ್ ಸೆನ್ಸಿಟಿವ್ ಶೋಲ್ಡರ್ ಬಟನ್‌ಗಳನ್ನು ಕೂಡ ಹೊಂದಿರುವ ಸಾದ್ಯತೆ ಇದೆ.

Infinix Note: ಇನ್ಫಿನಿಕ್ಸ್​ನಿಂದ ಎರಡು ಬಜೆಟ್ ಬೆಲೆಯ ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ: ಹೇಗಿದೆ?

ನಿಮ್ಮ ಫೋನ್​ನಲ್ಲಿ ಸ್ಟೋರೇಜ್ ಫುಲ್ ಸಮಸ್ಯೆ ಎದುರಾಗಿದೆಯೇ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ

(2022 Smartphone Here is the five flagship smartphones to watch out for in 2022)

ಕ್ರೌಡ್ ನಿಭಾಯಿಸಲಾಗದೆ ಮಾಲೀಕನಿಂದ ಅಂಗಡಿ ಕ್ಲೋಸ್!
ಕ್ರೌಡ್ ನಿಭಾಯಿಸಲಾಗದೆ ಮಾಲೀಕನಿಂದ ಅಂಗಡಿ ಕ್ಲೋಸ್!
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್