Tecno Camon 18: 48MP ಸೆಲ್ಫೀ ಕ್ಯಾಮೆರಾ, 5000mAh ಬ್ಯಾಟರಿ: ಭಾರತದಲ್ಲಿ ಧೂಳೆಬ್ಬಿಸುತ್ತಿದೆ ಬಜೆಟ್ ಬೆಲೆಯ ಈ ಫೋನ್

| Updated By: Vinay Bhat

Updated on: Dec 24, 2021 | 1:42 PM

48 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ, ಮೀಡಿಯಾ ಟೆಕ್ ಹಿಲಿಯೋ ಪ್ರೊಸೆಸರ್‌, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ಕೂಡಿದೆ. ಜೊತೆಗೆ ಇದು ಬಜೆಟ್ ಬೆಲೆಗೆ ಲಭ್ಯವಿದೆ.

Tecno Camon 18: 48MP ಸೆಲ್ಫೀ ಕ್ಯಾಮೆರಾ, 5000mAh ಬ್ಯಾಟರಿ: ಭಾರತದಲ್ಲಿ ಧೂಳೆಬ್ಬಿಸುತ್ತಿದೆ ಬಜೆಟ್ ಬೆಲೆಯ ಈ ಫೋನ್
Tecno Camon 18
Follow us on

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ (Tecno) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈ ಪೈಕಿ ಕಂಪನಿಯು ಇದೀಗ ತನ್ನ ಕ್ಯಾಮನ್ (Camon) ಸರಣಿಯಲ್ಲಿ ಹೊಸ ಫೋನ್​ವೊಂದನ್ನು ಅನಾವರಣ ಮಾಡಿದೆ. ಟೆಕ್ನೋ ಕ್ಯಾಮನ್ 18 (Tecno Camon 18) ಸ್ಮಾರ್ಟ್‌ಫೋನ್‌ ಇದೀಗ ಭಾರತದಲ್ಲಿ ಲಾಂಚ್ ಆಗಿದೆ. 48 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ, ಮೀಡಿಯಾ ಟೆಕ್ ಹಿಲಿಯೋ ಪ್ರೊಸೆಸರ್‌, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಈ ಸ್ಮಾರ್ಟ್​ಫೋನ್ ಕೂಡಿದೆ. ಜೊತೆಗೆ ಇದು ಬಜೆಟ್ ಬೆಲೆಗೆ ಲಭ್ಯವಿದೆ.

ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಇಂಚಿನ ಫುಲ್‌ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಅನ್ನು ಅಳವಡಿಸಲಾಗಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಈ ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ ಬೇಸಿಕ್ ಮೆಗಾ ಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ ಹೊಂದಿದೆ. ಇದರೊಂದಿಗೆ ಫೋಟೊ ಎಡಿಟಿಂಗ್ ಆಯ್ಕೆಗಳು ಇವೆ. ಹಾಗೆಯೇ TAIVOS ತಂತ್ರಜ್ಞಾನದೊಂದಿಗೆ ಕಡಿಮೆ ಬೆಳಕಿನ ಛಾಯಾಗ್ರಹಣ ಮೋಡ್ ಜೊತೆಗೆ 2K ವೀಡಿಯೊ ರೆಕಾರ್ಡಿಂಗ್ ಅನ್ನು ಸ್ಮಾರ್ಟ್‌ಫೋನ್ ಹೊಂದಿದೆ.

5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE ಕನೆಕ್ಷನ್ ನೀಡಲಾಗಿದೆ. ಭಾರತದಲ್ಲಿ ಈ ಫೋನಿನ 4GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಮಾದರಿಗೆ 14,999 ರೂ. ನಿಗದಿ ಮಾಡಲಾಗಿದೆ. ಇದೇ ಡಿಸೆಂಬರ್ 27 ರಂದು ಆನ್‌ಲೈನ್ ಹಾಗೂ ಆಫ್‌ಲೈನ್‌ ಸ್ಟೋರ್‌ಗಳಲ್ಲಿ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ಖರೀದಿಗೆ ಸಿಗಲಿದೆ.

Most Searched Smartphones: 2021 ರಲ್ಲಿ ಜನರು ಅತಿ ಹೆಚ್ಚು ಹುಡುಕಿದ ಸ್ಮಾರ್ಟ್​ಫೋನ್​ ಯಾವುದು ಗೊತ್ತಾ?

(48-megapixel selfie camera Tecno Camon 18 launched in India its new budget smartphone)