AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy F13: ಆಫರ್ ಅಂದ್ರೆ ಇದು: 6000mAh ಬ್ಯಾಟರಿಯ ಗ್ಯಾಲಕ್ಸಿ F13 ಈಗ ಕೇವಲ 9499 ರೂ. ಗೆ ಲಭ್ಯ

Flipkart: ಜೂನ್​ನಲ್ಲಿ ಸ್ಯಾಮ್​ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 (Samsung Galaxy F13) ಫೋನನ್ನು ಲಾಂಚ್‌ ಮಾಡಿತ್ತು. 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಫ್ಲಿಪ್​ಕಾರ್ಟ್​ನಲ್ಲಿ​ ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ.

Galaxy F13: ಆಫರ್ ಅಂದ್ರೆ ಇದು: 6000mAh ಬ್ಯಾಟರಿಯ ಗ್ಯಾಲಕ್ಸಿ F13 ಈಗ ಕೇವಲ 9499 ರೂ. ಗೆ ಲಭ್ಯ
Samsung Galaxy F13
TV9 Web
| Updated By: Vinay Bhat|

Updated on:Oct 10, 2022 | 1:20 PM

Share

ನೀವು ದೊಡ್ಡ ಬ್ಯಾಟರಿ, ಉತ್ತಮ ಡಿಸ್ ಪ್ಲೇ, ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಹುಡುಕುತ್ತಿದ್ದರೆ ಇಲ್ಲೊಂದು ಆಯ್ಕೆಯಿದೆ. ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುವ ಸ್ಯಾಮ್​ಸಂಗ್ (Samsung) ಇದೀಗ ತನ್ನ ಫೋನೊಂದನ್ನು 10,000 ರೂ. ಒಳಗೆ ಮಾರಾಟ ಮಾಡುತ್ತಿದೆ. ಕಳೆದ ಜೂನ್​ನಲ್ಲಿ ಭಾರತದಲ್ಲಿ ಸ್ಯಾಮ್​ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 (Samsung Galaxy F13) ಫೋನನ್ನು ಲಾಂಚ್‌ ಮಾಡಿತ್ತು. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart)​ ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ. ಈ ಫೋನು ಈಗ ಶೇ. 33 ರಷ್ಟು ರಿಯಾಯಿತಿ ಪಡೆದುಕೊಂಡು ಸೇಲ್ ಕಾಣುತ್ತಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಭಾರತದಲ್ಲಿ 14,999 ರೂ. ಗೆ ಬಿಡುಗಡೆ ಆಗಿತ್ತು. ಇದೀಗ 5,000 ರೂ. ಗಳ ಡಿಸ್ಕೌಂಟ್ ಪಡೆದುಕೊಂಡಿರುವ ಈ ಫೋನ್ ಕೇವಲ 9999 ರೂ. ಗೆ ಮಾರಾಟ ಆಗುತ್ತಿದೆ. ಹೆಚ್​ಡಿಎಫ್​ಸಿ ಬ್ಯಾಂಕ್ ಕಾರ್ಡ್​ ಮೂಲಕ ಖರೀದಿಸಿದರೆ ಪುನಃ 500 ರೂ. ರಿಯಾಯಿತಿ ಪಡೆಯಬಹುದು.

ಈ ಫೋನ್‌ 6.6 ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದರಿಂದ ನಿಮ್ಮ ಸ್ಮಾರ್ಟ್‌ಫೋನ್‌ ಗೀರುಗಳಿಂದ ರಕ್ಷಣೆಯನ್ನು ಪಡೆಯಲಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ RAM ಪ್ಲಸ್‌ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್‌ ಅನ್ನು ಬಳಸಲಿದೆ.

ಇದನ್ನೂ ಓದಿ
Image
Tech Tips: ನಿಮಗೆ ಬಂದ ವಾಟ್ಸ್​ಆ್ಯಪ್ ಸಂದೇಶವನ್ನು ಕಳುಹಿಸಿದವರಿಗೆ ತಿಳಿಯದಂತೆ ಸೀಕ್ರೆಟ್ ಆಗಿ ಓದುವುದು ಹೇಗೆ?: ಇಲ್ಲಿದೆ ಟ್ರಿಕ್ಸ್
Image
Google Pixel 6a: ಫ್ಲಿಪ್​ಕಾರ್ಟ್​ನಿಂದ ಧಮಾಕ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ
Image
WhatsApp: ನಿಮ್ಮನ್ನು ಹೈಡ್ ಮಾಡಿ ಯಾರೇ ಸ್ಟೇಟಸ್ ಹಾಕಿದ್ದರೂ ಈ ಟ್ರಿಕ್ ಮೂಲಕ ನೋಡಿ
Image
OnePlus 10R: ಈ ಆಫರ್ ಮತ್ತೆ ಬರಲ್ಲ: 30 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗೋ ಒನ್‌ಪ್ಲಸ್‌ 10R 5G ಅತಿ ಕಡಿಮೆ ಬೆಲೆಗೆ ಲಭ್ಯ

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ದೀರ್ಘ ಸಮಯ ಬಾಳಿಕೆ ಬರುವ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌ v5.0, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ.

Published On - 1:20 pm, Mon, 10 October 22

ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ