ಭಾರತದಲ್ಲಿ 200MP ಕ್ಯಾಮೆರಾದ ಮೋಟೋ ಎಡ್ಜ್ 30 ಆಲ್ಟ್ರಾಕ್ಕೆ ಭರ್ಜರಿ ಬೇಡಿಕೆ: ಮತ್ತೊಂದು ಹೊಸ ವೇರಿಯೆಂಟ್ ರಿಲೀಸ್

ಇತ್ತೀಚೆಗಷ್ಟೆ ಮೋಟೋರೊಲಾ ಕಂಪನಿ ಇದೇ ಮೊದಲ ಬಾರಿಗೆ ಭಾರತದಲ್ಲಿ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೋಟೋರೊಲಾ ಎಡ್ಜ್ 30 ಅಲ್ಟ್ರಾ 5ಜಿ (Motorola Edge 30 Ultra 5G) ಫೋನನ್ನು ಅನಾವರಣ ಮಾಡಿತ್ತು.

ಭಾರತದಲ್ಲಿ 200MP ಕ್ಯಾಮೆರಾದ ಮೋಟೋ ಎಡ್ಜ್ 30 ಆಲ್ಟ್ರಾಕ್ಕೆ ಭರ್ಜರಿ ಬೇಡಿಕೆ: ಮತ್ತೊಂದು ಹೊಸ ವೇರಿಯೆಂಟ್ ರಿಲೀಸ್
Edge 30 Ultra
Follow us
TV9 Web
| Updated By: Vinay Bhat

Updated on: Oct 21, 2022 | 6:21 AM

ಭಾರತದಲ್ಲಿ ವೇಗವಾಗಿ ಚಾರ್ಜ್ ಆಗುವ ಹಾಗೂ ಆಕರ್ಷಕ ಕ್ಯಾಮೆರಾ ಕ್ವಾಲಿಟಿ ಇರುವ ಸ್ಮಾರ್ಟ್​ಫೋನ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಈರೀತಿಯ ಫೋನುಗಳು ಬಿಡುಗಡೆ ಆದಷ್ಟೇ ವೇಗದಲ್ಲಿ ಸೋಲ್ಡ್ ಆಗಿ ಬಿಡುತ್ತಿದೆ. ಇತ್ತೀಚೆಗಷ್ಟೆ ಮೋಟೋರೊಲಾ ಕಂಪನಿ ಇದೇ ಮೊದಲ ಬಾರಿಗೆ ಭಾರತದಲ್ಲಿ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೋಟೋರೊಲಾ ಎಡ್ಜ್ 30 ಅಲ್ಟ್ರಾ 5ಜಿ (Motorola Edge 30 Ultra 5G) ಫೋನನ್ನು ಅನಾವರಣ ಮಾಡಿತ್ತು. ಇದು ದುಬಾರಿ ಬೆಲೆಯ ಫೋನಾದರೂ ದೇಶದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿಸಿಕೊಂಡಿದೆ. ಇದೀಗ ಈ ಫೋನಿನ ನೂತನ ಸ್ಟೋರೇಜ್ ಆಯ್ಕೆ ರಿಲೀಸ್ ಆಗಿದೆ. ಈ ಫೋನಿನಲ್ಲಿ ಆಕರ್ಷಕ ಕ್ಯಾಮೆರಾ ಜೊತೆಗೆ ಅತ್ಯಂತ ವೇಗದ 125W ಫಾಸ್ಟ್ ಚಾರ್ಜರ್ ಅಳವಡಿಸಲಾಗಿದೆ.

ಕಳೆದ ತಿಂಗಳು ಮೋಟೋ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆ ಆಗಿತ್ತು. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 59,999 ರೂ. ಇದೆ. ಇದೀಗ ಈ ಫೋನಿನ ಹೊಸ 12GB RAM + 256GB ಸ್ಟೋರೇಜ್ ಆಯ್ಕೆ ಬಿಡುಗಡೆ ಆಗಿದ್ದು, 64,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನ್ ಖರೀದಿಗೆ ಸಿಗುತ್ತಿದೆ.

ಮೋಟೋ ಎಡ್ಜ್‌ 30 ಅಲ್ಟ್ರಾ ಫೀಚರ್​ಗಳ ಬಗ್ಗೆ ನೋಡುವುದಾದರೆ, ಇದು 6.67 ಇಂಚಿನ ಫುಲ್ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ರೇಟ್​ನಿಂದ ಕೂಡಿದ್ದು ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ನೀಡಲಾಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ನಾಪ್‌ಡ್ರಾಗನ್ ಎಲೈಟ್ ಗೇಮಿಂಗ್ ಫೀಚರ್ ಕೂಡ ಅಳವಡಿಸಲಾಗಿದೆ.

ಇದನ್ನೂ ಓದಿ
Image
Tech Tips: ನಿಮ್ಮಲ್ಲಿ ಉಪಯೋಗಿಸದ ಹಳೆಯ ಸ್ಮಾರ್ಟ್​​ಫೋನಿದ್ದರೆ ಅದನ್ನು ಸಿಸಿಟಿವಿ ಮಾಡಿ: ಹೇಗೆ ಗೊತ್ತೇ?
Image
Fake Message: ಉಚಿತ ದೀಪಾವಳಿ ಉಡುಗೊರೆ: ಈ ಮೆಸೇಜ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಣ ಖಾಲಿ ಖಾಲಿ
Image
Galaxy F13: ಮೆಗಾ ದಿವಾಳಿ ಸೇಲ್​ನಲ್ಲಿ ಧಮಾಕ ಆಫರ್: ಗ್ಯಾಲಕ್ಸಿ F13 ಮೇಲೆ ಊಹಿಸಲಾಗದಷ್ಟು ಡಿಸ್ಕೌಂಟ್
Image
Oppo A17K: ಬಜೆಟ್ ಪ್ರಿಯರು ಫುಲ್ ಫಿದಾ: ಒಪ್ಪೋದಿಂದ ಕೇವಲ 10,499 ರೂ. ಗೆ ಆಕರ್ಷಕ ಫೋನ್ ಬಿಡುಗಡೆ

Tech Tips: ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ, ರೀಲ್ಸ್ ಎಷ್ಟು ಗಂಟೆಗೆ ಹಾಕಿದರೆ ಹೆಚ್ಚು ಲೈಕ್ಸ್ ಬರುತ್ತೆ?: ಇಲ್ಲಿದೆ ನೋಡಿ

ವಿಶೇಷವಾಗಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್ ಸ್ಯಾಮ್​ಸಂಗ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದು f/1.9 ಅಪಾರ್ಚರ್ ಲೆನ್ಸ್​ನಿಂದ ಕೂಡಿದೆ. ಎರಡನೇ ಕ್ಯಾಮೆರಾ 50 ಮೆಗಾಫಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಬೃಹತ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.ಇದರಲ್ಲಿ ಪ್ರಾಥಮಿಕ ಕ್ಯಾಮರಾ OIS ಬೆಂಬಲವನ್ನು ಪಡೆದುಕೊಂಡಿದೆ. ಸೆಲ್ಪೀ ಕ್ಯಾಮೆರಾವು 4K ವಿಡಿಯೋ ರೆಕಾರ್ಡ್ ಮಾಡುತ್ತದೆ

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠ 4610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 125W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಪಡೆದುಕೊಂಡಿದೆ. ಈ ಮೂಲಕ ಕೆಲವೇ ನಿಮಿಷಗಳಲ್ಲಿ ಫುಲ್‌ ಚಾರ್ಜ್‌ ಮಾಡಲು ಸಾಧ್ಯವಾಗಲಿದೆ. ಕಂಪನಿ ಹೇಳಿರುವ ಪ್ರಕಾರ 7 ನಿಮಿಷ ಚಾರ್ಜ್ ಮಾಡಿದರೆ 12 ಗಂಟೆಗಳ ಕಾಲ ಉಪಯೋಗಿಸಬಹುದಂತೆ. ಇದರ ಜೊತೆಗೆ 50W ವೈಯರ್​ಲೆಸ್ ಚಾರ್ಜಿಂಗ್ ಸಪೋರ್ಟ್ ಕೂಡ ಪಡೆದುಕೊಂಡಿದೆ.

ಮತ್ತಷ್ಟು ಟೆಕ್ನಾಲಜಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್