Galaxy S20 FE 5G: ಫ್ಲಿಪ್​ಕಾರ್ಟ್ ಆಯ್ತು ಈಗ ಅಮೆಜಾನ್ ಸರದಿ: 75,000 ರೂ. ಫೋನನ್ನು 32,000 ರೂ. ಗೆ ಖರೀದಿಸಿ

ಅಮೆಜಾನ್ ಇಂಡಿಯಾದಲ್ಲಿ ಗ್ಯಾಲಕ್ಸಿ S20 FE 5ಜಿ ಸ್ಮಾರ್ಟ್​ಫೋನ್ ಆಕರ್ಷಕ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ. ಸ್ಯಾಮ್​ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್​ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯು ಶೇ. 57 ರಷ್ಟು ರಿಯಾಯಿತಿ ಪಡೆದುಕೊಂಡಿದೆ.

Galaxy S20 FE 5G: ಫ್ಲಿಪ್​ಕಾರ್ಟ್ ಆಯ್ತು ಈಗ ಅಮೆಜಾನ್ ಸರದಿ: 75,000 ರೂ. ಫೋನನ್ನು 32,000 ರೂ. ಗೆ ಖರೀದಿಸಿ
Samsung Galaxy S20 FE
Follow us
Vinay Bhat
|

Updated on: Jul 03, 2023 | 11:53 AM

ನೀವು ದುಬಾರಿ ಬೆಲೆಯ ಅತ್ಯುತ್ತಮ ಪ್ರೀಮಿಯಂ ಸ್ಮಾರ್ಟ್​ಫೋನ್ ಮೇಲೆ ಕಣ್ಣಿಟ್ಟಿದ್ದರೆ ಇಲ್ಲೊಂದು ಅದ್ಭುತ ಆಯ್ಕೆ ಇದೆ. ಇತ್ತೀಚೆಗಷ್ಟೆ ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್​ಕಾರ್ಟ್ ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ S20 FE (Galaxy S20 FE) ಸ್ಮಾರ್ಟ್​ಫೋನ್ ಮೇಲೆ ಬಂಪರ್ ರಿಯಾಯಿತಿ ಘೋಷಿಸಿತ್ತು. 74,999 ರೂ. ಮೂಲಬೆಲೆ ಹೊಂದಿರುವ ಈ ಫೋನನ್ನು ಕೇವಲ 27,650 ರೂ. ಗೆ ಖರೀದಿಸುವ ಅವಕಾಶ ಮಾಡಿಕೊಟ್ಟಿತ್ತು. ಇದೀಗ ಅಮೆಜಾನ್ ಸರದಿ. ಅಮೆಜಾನ್ ಇಂಡಿಯಾದಲ್ಲಿ ಗ್ಯಾಲಕ್ಸಿ S20 FE 5ಜಿ ಸ್ಮಾರ್ಟ್​ಫೋನ್ ಆಕರ್ಷಕ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ.

ಆಫರ್ ಏನಿದೆ?:

ಸ್ಯಾಮ್​ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್​ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯು ಅಮೆಜಾನ್​ನಲ್ಲಿ ಶೇ. 57 ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಈ ಮೂಲಕ ಕೇವಲ 31,999 ರೂ. ಗೆ ಈ ಸ್ಮಾರ್ಟ್​ಫೋನ್ ಸೇಲ್ ಕಾಣುತ್ತಿದೆ. ಇದರ ಜೊತೆಗೆ ಬ್ಯಾಂಕ್ ಆಫರ್, ಎಕ್ಸ್​ಚೇಂಜ್ ಆಫರ್ ಕೂಡ ಲಭ್ಯವಿದೆ. 22,950 ರೂ. ವರೆಗೆ ಎಕ್ಸ್​ಚೇಂಜ್ ದರ ನಿಗದಿ ಮಾಡಲಾಗಿದೆ. ನೀವು ಕಡಿಮೆ ಬೆಲೆಗೆ ಒಂದೊಳ್ಳೆ ಕ್ಯಾಮೆರಾ, ಪ್ರೊಸೆಸರ್​ನ ಪ್ರೀಮಿಯಂ ಸ್ಮಾರ್ಟ್​ಫೋನ್ ಬೇಕಿದ್ದರೆ ಗ್ಯಾಲಕ್ಸಿ S20 FE ಅತ್ಯುತ್ತಮ ಆಯ್ಕೆ ಆಗಿದೆ.

ಇದನ್ನೂ ಓದಿ
Image
ಹ್ಯಾಂಗ್ ಆಗುತ್ತಿರುವ ಸ್ಮಾರ್ಟ್​ಫೋನನ್ನು ಸೂಪರ್ ಸ್ಪೀಡ್ ಮಾಡುವುದು ಹೇಗೆ?
Image
WhatsApp Ban: ಮೇ ತಿಂಗಳಲ್ಲಿ ಭಾರತದ 65 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
Image
Samsung Odyssey OLED G9: ಸೂಪರ್ ಗೇಮಿಂಗ್​ ಪ್ರಿಯರಿಗೆ ಸ್ಯಾಮ್​ಸಂಗ್ ಮಾನಿಟರ್
Image
Insta360 Go 3: ಪ್ರವಾಸದ ಸುಂದರ ಕ್ಷಣಗಳ ಸೆರೆಹಿಡಿಯಲು ಇನ್​ಸ್ಟಾ360 ಕ್ಯಾಮೆರಾ

Tech Tips: ನಿಮ್ಮ ಹಳೆಯ ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ

ಫೀಚರ್ಸ್ ಏನಿದೆ?:

ಗ್ಯಾಲಕ್ಸಿ S20 FE 5ಜಿ ಸ್ಮಾರ್ಟ್‌ಫೋನ್​ನಲ್ಲಿ 1,080*2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ನೀಡಲಾಗಿದೆ. ಇದು ಬಲಿಷ್ಠವಾದ ಕ್ವಾಲ್ಕಾಂ ಸ್ನಾಪ್​ಡ್ರಾಗನ್ 865 ಆಕ್ಟಾ-ಕೋರ್ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಸ್ಟೋರೇಜ್ ಸಾಕಾಗುತ್ತಿಲ್ಲ ಎಂದಾದರೆ 1ಟಿಬಿ ವರೆಗೆ ಮೆಮೋರಿಯನ್ನು ಹೆಚ್ಚಿಸಬಹುದು.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್​ನಲ್ಲಿದೆ. ಇದರ ಜೊತೆಗೆ ಮುಂಭಾಗ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಮತ್ತು ವಿಡಿಯೋ ಕ್ಯಾಮೆರಾ ಅಳವಡಿಸಲಾಗಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್​ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವೈಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವೈಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಯನ್ನು ಬೆಂಬಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು