ಇಂದು ಕ್ಯಾಮೆರಾ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೇ ಈಗೀಗ ಹೆಚ್ಚಿನ ಕಂಪನಿಗಳು ಕ್ಯಾಮೆರಾಕ್ಕೆ ಫೋಕಸ್ ಮಾಡಿ ಫೋನ್ಗಳ್ನು ಅನಾವರಣ ಮಾಡುತ್ತಿದೆ. ಇಂದು ದಕ್ಷಿಣ ಕೊರಿಯಾ ಮೂಲದ ಸ್ಯಾಮ್‌ಸಂಗ್ ಭಾರತದಲ್ಲಿ 108MP ಕ್ಯಾಮೆರಾದ ಗ್ಯಾಲಕ್ಸಿ F54 5G ಎಂಬ ಸ್ಮಾರ್ಟ್ಫೋನನ್ನು ಅನಾವರಣ ಮಾಡಿದೆ. ಇದರ ಬೆನ್ನಲ್ಲೇ ಪ್ರಸಿದ್ಧ ಒನ್‌ಪ್ಲಸ್ ಕಂಪನಿ ಕೂಡ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದ್ದು, ಇದುಕೂಡ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆಯನ್ನು ಹೊಂದಿದೆ. ಹಾಗಾದರೆ ಒನ್‌ಪ್ಲಸ್ ಹೊಸ ಮೊಬೈಲ್ನ ಬೆಲೆ ಎಷ್ಟು?, ಏನೆಲ್ಲ ಫೀಚರ್ಗಳಿವೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ $299.99, ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 24,800ರೂ. ಇರಬಹುದು ಈ ಸ್ಮಾರ್ಟ್‌ಫೋನ್ ಕ್ರೊಮ್ಯಾಟಿಕ್ ಗ್ರೇ ಬಣ್ಣದ ಆಯ್ಕೆಯಲ್ಲಿ ನೀಡಲಾಗುತ್ತದೆ. ಇದು ಪ್ರಸ್ತುತ ಕಂಪನಿಯ US ಸೈಟ್‌ನಲ್ಲಿ ಪ್ರಿ ಬುಕ್ಕಿಂಗ್ ಆರ್ಡರ್‌ಗೆ ಲಭ್ಯವಿದೆ.
Redmi Note 12T Pro: ಸ್ಟೈಲಿಶ್ ಲುಕ್ ಮತ್ತು ಪ್ರೀಮಿಯಂ ಫೀಚರ್ಸ್ ರೆಡ್ಮಿ ಸ್ಮಾರ್ಟ್‌ಫೋನ್
ಫೀಚರ್ಸ್ ಏನಿದೆ?:
ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್, 391 ppi ಅನುಪಾತದ ಪಿಕ್ಸೆಲ್ ಸಾಂದ್ರತೆಯನ್ನು ಪಡೆದುಕೊಂಡಿದೆ. ಬಲಿಷ್ಠವಾದ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಬೆಂಬಲ ನೀಡಲಾಗಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ S5KHM6SX03 ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಕೊಡಲಾಗಿದೆ.
ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್ಫೋನ್ನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 50W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡುತ್ತದೆ. ಉಳಿದಂತೆ GPS, WiFi 802.11 a/b/g/n/ac, ಮತ್ತು ಬ್ಲೂಟೂತ್ v5.1 ಬೆಂಬಲಿಸಲಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ನೀಡಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ