Airtel: ಅತ್ಯಧಿಕ ಡೇಟಾ ಪ್ಲಾನ್ ಬೇಕಿದ್ದರೆ ಇದೇ ಬೆಸ್ಟ್: ಏರ್ಟೆಲ್ನ ಈ ಪ್ಲಾನ್ನಲ್ಲಿದೆ ಭರ್ಜರಿ ಡೇಟಾ
ಏರ್ಟೆಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ಡೈಲಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ 699 ರೂ. ಮತ್ತು 599 ರೂ. ಯೋಜನೆಗಳು ಆಕರ್ಷಕ ಎನಿಸಿವೆ.
ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವಣ ಪೈಪೋಟಿ ಮುಂದುವರೆದಿದೆ. ನಂಬರ್ ಒನ್ ಸ್ಥಾನಕ್ಕಾಗಿ ಹೋರಾಡುತ್ತಿರುವ ಏರ್ಟೆಲ್ ಬಳಕೆದಾರರಿಗೆ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡುತ್ತಿದೆ. ಅಲ್ಲದೆ ಹೊಸ ಬಳಕೆದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ. ಬೆಲೆ ಹೆಚ್ಚಳ ಮಾಡಿದ್ದರೂ ತನ್ನ ಪ್ಲಾನ್ನ ಜೊತೆಗೆ ಇತರೆ ವಿಶೇಷ ಆಫರ್ಗಳನ್ನು ನೀಡುತ್ತಿರುವ ಏರ್ಟೆಲ್ನ ಯೋಜನೆಗಳು ಹೆಚ್ಚಿನವರ ಗಮನ ಸೆಳೆಯುತ್ತಿವೆ. ಆ ಪೈಕಿ ಹಲವು ಪ್ಲಾನ್‌ಗಳು ಅಧಿಕ ಡೈಲಿ ಡೇಟಾ ಪಡೆದಿವೆ. ಏರ್ಟೆಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ಡೈಲಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ 699 ರೂ. ಮತ್ತು 599 ರೂ. ಯೋಜನೆಗಳು ಆಕರ್ಷಕ ಎನಿಸಿವೆ. ಈ ಎರಡೂ ಯೋಜನೆಗಳು ಹೆಚ್ಚಿನ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ.
ಏರ್ಟೆಲ್ ಜನಪ್ರಿಯ ಪ್ರಿಪೇಡ್ ಪ್ಲಾನ್‌ಗಳಲ್ಲಿ ಒಂದಾಗಿರುವ 699 ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಪಡೆಯಬಹುದು. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯವಾಗುತ್ತವೆ.
ಏರ್ಟೆಲ್ ಟೆಲಿಕಾಂನ 599 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಇನ್ನು 666 ರೂ. ಪ್ಲಾನ್ ಕೂಡ ಆಕರ್ಷಕ ಎನಿಸಿದೆ. ಇದು ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ. 449 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳನ್ನು ನೀಡಲಾಗಿದೆ.
Flipkart Big Saving Days sale: ಐಫೋನ್ಗಳ ಮೇಲೆ ಹೀಗೊಂದು ಡಿಸ್ಕೌಂಟ್: ಫ್ಲಿಪ್ಕಾರ್ಟ್ ಆಫರ್ ಮಿಸ್ ಮಾಡಲೇಬೇಡಿ
Tecno Pop 5 Pro: ಬರೋಬ್ಬರಿ 6000mAh ಬ್ಯಾಟರಿಯ ಹೊಸ ಫೋನ್ ಬಿಡುಗಡೆ ಮಾಡಿದ ಟೆಕ್ನೋ ಕಂಪನಿ