AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Airtel: ಬೆಲೆ ಹೆಚ್ಚಿಸಿ ಶಾಕ್ ನೀಡಿದ್ದ ಏರ್ಟೆಲ್​ನಿಂದ ಇದೀಗ ಬಂಪರ್ ಆಫರ್: ನಿಟ್ಟುಸಿರು ಬಿಟ್ಟ ಗ್ರಾಹಕರು

Airtel recharge price hike:: ತನ್ನ ಬಳಕೆದಾರರಿಗೆ ಇತ್ತೀಚೆಗಷ್ಟೆ ಬೆಲೆ ಏರಿಕೆಯ ಘೋಷಣೆ ಮಾಡಿ ಆಘಾತ ನೀಡಿದ್ದ ಭಾರ್ತಿ ಏರ್ಟೆಲ್ ಇದೀಗ ಬಂಪರ್ ಆಫರ್ ಒಂದನ್ನು ಬಿಡುಗಡೆ ಮಾಡಿದೆ. ಇದರೆ ಪ್ರಕಾರ ಈ ಯೋಜನೆಗಳನ್ನು ರೀಚಾರ್ಜ್ ಮಾಡುವ ಬಳಕೆದಾರರು ಪ್ರತಿದಿನ 500MB ಡೇಟಾವನ್ನು ಉಚಿತವಾಗಿ ಪಡೆಯಬಹುದು.

Airtel: ಬೆಲೆ ಹೆಚ್ಚಿಸಿ ಶಾಕ್ ನೀಡಿದ್ದ ಏರ್ಟೆಲ್​ನಿಂದ ಇದೀಗ ಬಂಪರ್ ಆಫರ್: ನಿಟ್ಟುಸಿರು ಬಿಟ್ಟ ಗ್ರಾಹಕರು
Airtel recharge price hike
TV9 Web
| Updated By: Vinay Bhat|

Updated on: Nov 26, 2021 | 3:14 PM

Share

ಇತ್ತೀಚೆಗಷ್ಟೆ ಬೆಲೆ ಏರಿಕೆ ಘೋಷಣೆ ಮಾಡಿ ಬಳಕೆದಾರರಿಗೆ ದೊಡ್ಡ ಆಘಾತ ನೀಡಿದ್ದ ಭಾರ್ತಿ ಏರ್ಟೆಲ್ (Airtel) ಇದೀಗ ಬಂಪರ್ ಆಫರ್ ಒಂದನ್ನು ಪರಿಚಿಯಿಸಿದೆ. ಮೊನ್ನೆಯಷ್ಟೆ ಏರ್ಟೆಲ್ ನವೆಂಬರ್ 26 ರಿಂದ ತನ್ನ ಪ್ರಿಪೇಯ್ಡ್‌ ಪ್ಲಾನ್‌ಗಳ (Airtel Prepaid Plan) ದರ ಹೆಚ್ಚಳ ಮಾಡುವುದಾಗಿ ಹೇಳಿತ್ತು. ಅದರಂತೆ ಇಂದಿನಿಂದ ಹೊಸ ಬೆಲೆಗಳು ಅನ್ವಯ ಆಗಲಿವೆ. ಹೀಗಿರುವಾಗ ಏರ್ಟೆಲ್​ನ ಪ್ರಿಪೇಯ್ಟ್‌ ಯೋಜನೆಗಳು ದರ ಏರಿಕೆ ಕಂಡ ಬೆನ್ನಲ್ಲೇ ಇದೀಗ ತನ್ನ ಗ್ರಾಹಕರಿಗೆ ಉಚಿತವಾಗಿ ಹೆಚ್ಚುವರಿ ಡೇಟಾ ನೀಡಲು ಮುಂದಾಗಿದೆ. ಹೌದು, ಏರ್ಟೆಲ್ ಪ್ರಿಪೇಯ್ಡ್‌ ಯೋಜನೆಗಳು ರೀಚಾರ್ಜ್ ಮಾಡುವ ಬಳಕೆದಾರರು ಪ್ರತಿದಿನ 500MB ಡೇಟಾವನ್ನು ಕಂಪನಿಯಿಂದ ಉಚಿತವಾಗಿ ಪಡೆಯಬಹುದು. ಆದರೆ, ಕಂಪನಿ ಇದಕ್ಕೊಂದು ಟ್ವಿಸ್ಟ್ ನೀಡಿದೆ. ಹಾಗಾದ್ರೆ ಆ ರಿಚಾರ್ಜ್ ಪ್ಲಾನ್​ಗಳು (Airtel Data Plan) ಯಾವುವು ಏನದು ಟ್ವಿಸ್ಟ್ ಎಂಬುದನ್ನು ನೋಡೋಣ.

ಏರ್ಟೆಲ್ ತನ್ನ ನಾಲ್ಕು ಪ್ರಿಪೇಯ್ಡ್ ಯೋಜನೆಗಳ ಡೇಟಾ ಪ್ರಯೋಜನಗಳನ್ನು 500MB ಉಚಿತ ಡೇಟಾದೊಂದಿಗೆ ನವೀಕರಿಸಿದೆ. ಅಂದರೆ, ಏರ್ಟೆಲ್​ನ ರೂ. 719, ರೂ. 299, ರೂ. 265 ಮತ್ತು ರೂ. 839 ಪ್ಲಾನ್‌ಗಳೊಂದಿಗೆ ರೀಚಾರ್ಜ್ ಮಾಡುವ ಬಳಕೆದಾರರು ಪ್ರತಿದಿನ 500MB ಡೇಟಾವನ್ನು ಕಂಪನಿಯಿಂದ ಉಚಿತವಾಗಿ ಪಡೆಯಲು ಸಾಧ್ಯವಾಗುತ್ತದೆ. ಆದರೆ, ಈ 500MB ಡೇಟಾ ಆಫರ್ ಅನ್ನು ಗ್ರಾಹಕರು ರಿಡೀಮ್ ಮಾಡಿಕೊಳ್ಳಬೇಕಿದೆ. ಅಂದರೆ ಈ ನಾಲ್ಕು ಯೋಜನೆಗಳಲ್ಲಿ ಒಂದು ಯೋಜನೆಯನ್ನು ರೀಚಾರ್ಜ್ ಮಾಡಿಕೊಂಡ ನಂತರ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಆಗ ಈ ಆ್ಯಪ್‌ನಲ್ಲಿ 500MB ಉಚಿತ ಡೇಟಾವನ್ನು ರಿಡೀಮ್ ಮಾಡಿಕೊಳ್ಳುವ ಅಯ್ಕೆ ಕಾಣಿಸಲಿದೆ. ಈ ಮೂಲಕ ಉಚಿತವಾಗಿ 500MB ಹೆಚ್ಚುವರಿ ದೈನಂದಿನ ಡೇಟಾವನ್ನು ಪಡೆಯಬಹುದಾಗಿದೆ.

ಏರ್ಟೆಲ್​​ನ ಜನಪ್ರಿಯ ಪ್ರಿಪೇಯ್ಡ್‌ ಪ್ಯಾನ್‌ಗಳಲ್ಲಿ 719 ರೂ. ಪ್ಲಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಪ್ರತಿದಿನ 500GB ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ಏರ್ಟೆಲ್​​ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್​ಟ್ಯಾಗ್​ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಇನ್ನು 299 ರೂ. ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಪ್ರತಿದಿನ 500GB ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ಏರ್ಟೆಲ್​​ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

839 ರೂಪಾಯಿಗಳ ಯೋಜನೆಯು ಬಳಕೆದಾರರಿಗೆ 2GB ದೈನಂದಿನ ಡೇಟಾವನ್ನು ನೀಡುತ್ತದೆ. ಜೊತೆಗೆ ಏರ್ಟೆಲ್​​ ಥ್ಯಾಂಕ್ಸ್ ಅಪ್ಲಿಕೇಶನ್‌ನಿಂದ 500MB ಹೆಚ್ಚುವರಿ ದೈನಂದಿನ ಡೇಟಾದೊಂದಿಗೆ, ಬಳಕೆದಾರರು ಒಟ್ಟು 2.5GB ದೈನಂದಿನ ಡೇಟಾವನ್ನು ಪಡೆಯುತ್ತಾರೆ. ಇನ್ನು 265 ರೂ ಯೋಜನೆಯು 1GB ದೈನಂದಿನ ಡೇಟಾದೊಂದಿಗೆ ಲಭ್ಯವಿದೆ. ಜೊತೆಗ ಬೋನಸ್ 500MB ಡೇಟಾದೊಂದಿಗೆ ಪ್ರತಿದಿನ 1.5GB ದೈನಂದಿನ ಡೇಟಾದೊಂದಿಗೆ ಈ ಯೋಜನೆ ಲಭ್ಯವಿದೆ. ಈ ಎರಡೂ ಯೋಜನೆಗಳಲ್ಲಿಯೂ ಅನಿಯಮಿತ ಧ್ವನಿ ಕರೆ ಮತ್ತು ಪ್ರತಿದಿನ 100 ಎಸ್‌ಎಂಎಸ್‌ಗಳನ್ನು ಹೊಂದಿರುವುದನ್ನು ನಾವು ನೋಡಬಹುದು.

WhatsApp: ಕೆಲವೇ ದಿನಗಳಲ್ಲಿ ಬರುತ್ತಿದೆ ವಾಟ್ಸ್​ಆ್ಯಪ್​ ಹೊಸ ಅಪ್ಡೇಟ್: ನಿಮಗೆ ಸಿಗಲಿದೆ ಈ ಅಚ್ಚರಿಯ ಫೀಚರ್

Black Friday Sale 2021: ಭಾರತದಲ್ಲಿ ಬ್ಲ್ಯಾಕ್ ಫ್ರೈಡೇ ಸೇಲ್: ಸ್ಮಾರ್ಟ್​ಫೋನ್, ಲ್ಯಾಪ್​​ಟಾಪ್ ಮೇಲೆ ಭರ್ಜರಿ ಡಿಸ್ಕೌಂಟ್

(Airtel brings along benefits in the form of 500MB of additional data per day)

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ