AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Airtel: ಭರ್ಜರಿ ಡೇಟಾ, ಹೆಚ್ಚು ದಿನಗಳ ವ್ಯಾಲಿಡಿಟಿ: ಏರ್ಟೆಲ್ ಗ್ರಾಹಕರಿಗೆ ಇಲ್ಲಿದೆ ಬೆಸ್ಟ್ ಪ್ಲಾನ್

ಪ್ರಮುಖವಾಗಿ ಏರ್‌ಟೆಲ್‌ನ 379 ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ.

Airtel: ಭರ್ಜರಿ ಡೇಟಾ, ಹೆಚ್ಚು ದಿನಗಳ ವ್ಯಾಲಿಡಿಟಿ: ಏರ್ಟೆಲ್ ಗ್ರಾಹಕರಿಗೆ ಇಲ್ಲಿದೆ ಬೆಸ್ಟ್ ಪ್ಲಾನ್
ಏರ್‌ಟೆಲ್‌ 399 ರೂ. ಪ್ಲ್ಯಾನ್: ಏರ್​ಟೆಲ್​ 399 ರೂ. ಪ್ರಿಪೇಯ್ಡ್ ಪ್ಲ್ಯಾನ್​ನಲ್ಲೂ ಪ್ರತಿದಿನ 1.5 ಜಿಬಿ ಡೇಟಾ ಮತ್ತು ಅನಿಯಮಿತ ಕರೆಗಳ ಸೌಲಭ್ಯವಿದೆ. ಇದರ ಜೊತೆಗೆ ದಿನಕ್ಕೆ 100 SMS, ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿ, ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಮತ್ತು ವಿಂಕ್ ಮ್ಯೂಸಿಕ್‌ಗೆ ಚಂದಾದಾರಿಕೆಯನ್ನು ಪಡೆಯಬಹುದು. ಆದರೆ ಇದರ ವಾಲಿಡಿಟಿ 56 ದಿನಗಳು ಎಂಬುದು ವಿಶೇಷ.
TV9 Web
| Updated By: Vinay Bhat|

Updated on: Aug 28, 2021 | 2:48 PM

Share

ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವಣ ಪೈಪೋಟಿ ಮುಂದುವರಿಯುತ್ತಲೇ ಇದೆ. ನಂಬರ್ ಒನ್ ಸ್ಥಾನಕ್ಕಾಗಿ ಹೋರಾಡುತ್ತಿರುವ ಏರ್ಟೆಲ್ ತನ್ನ ಬಳಕೆದಾರರಿಗೆ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡುತ್ತಿದೆ. ಅಲ್ಲದೆ ಹೊಸ ಬಳಕೆದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ. ತನ್ನ ಪ್ಲಾನ್​ನ ಜೊತೆಗೆ ಇತರೆ ವಿಶೇಷ ಆಫರ್​ಗಳನ್ನು ನೀಡುತ್ತಿರುವ ಏರ್ಟೆಲ್​ನ ಈ ಯೋಜನೆಯಲ್ಲಿ ಭರ್ಜರಿ ಡೇಟಾ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇದ್ದು ಗಮನ ಸೆಳೆದಿದೆ.

ಪ್ರಮುಖವಾಗಿ ಏರ್ಟೆಲ್​ನ 379 ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳದಗಿಸಲಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆಯಬಹುದು.

ಇನ್ನೂ 598 ರೂ. ಪ್ರಿಪೇಯ್ಡ್ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್‌ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

ಏರ್‌ಟೆಲ್‌ 558 ರೂ. ಪ್ರಿಪೇಯ್ಡ್‌ ಪ್ಲಾನ್​ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಪ್ರತಿದಿನ 3GB ಉಚಿತ ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಇದರ ಜೊತೆಗೆ ಈ ಪ್ಲಾನ್​ನಲ್ಲಿ ನೀವು ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್​ಟ್ಯಾಗ್​ ಕ್ಯಾಶ್‌ಬ್ಯಾಕ್ ಆಫರ್​ಗಳನ್ನು ಪಡೆಯಬಹುದು.

ಭಾರ್ತಿ ಏರ್‌ಟೆಲ್‌ನ ಮತ್ತೊಂದು 698 ರೂಪಾಯಿಯ ಪ್ರಿಪೇಡ್‌ ಪ್ಲಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

Price Hike: ಭಾರತದಲ್ಲಿ ಭರ್ಜರಿ ಸೇಲ್: ಈ ಎರಡು ಸ್ಮಾರ್ಟ್​ಫೋನ್​ಗಳ ಬೆಲೆಯಲ್ಲಿ ಏರಿಕೆ

ನಿಮ್ಮ ಸ್ಮಾರ್ಟ್‌ಫೋನಿನಲ್ಲಿರುವ ಡುಪ್ಲಿಕೇಟ್ ಕಾಂಟೆಕ್ಟ್‌ಗಳನ್ನು ಒಮ್ಮೆಲೇ ಡಿಲೀಟ್ ಮಾಡಲು ಇಲ್ಲಿದೆ ಟ್ರಿಕ್

(Airtel gives 6GB data and 84 days validity with just Rs 379 prepaid plan check other plans)

ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್