Jio- Airtel: ಪ್ರತಿದಿನ 2GB ಡೇಟಾ, ಕಡಿಮೆ ಬೆಲೆಯ ಆಫರ್​ ಬೇಕಿದ್ದರೆ ಇಲ್ಲಿ ಗಮನಿಸಿ

ಏರ್ಟೆಲ್​ನ 298 ರೂ. ಪ್ರಿಪೇಡ್‌ ಪ್ಲಾನ್​​ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ.

Jio- Airtel: ಪ್ರತಿದಿನ 2GB ಡೇಟಾ, ಕಡಿಮೆ ಬೆಲೆಯ ಆಫರ್​ ಬೇಕಿದ್ದರೆ ಇಲ್ಲಿ ಗಮನಿಸಿ
Airtel
Follow us
TV9 Web
| Updated By: Vinay Bhat

Updated on: Oct 02, 2021 | 3:27 PM

ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್‌ ಜಿಯೋ (Jio), ಭಾರ್ತಿ ಏರ್ಟೆಲ್ (Airtel) ಎರಡನೇ ಸ್ಥಾನದಲ್ಲಿದೆ. ವಿ ಟೆಲಿಕಾಂ (ವೊಡಾಪೋನ್- ಐಡಿಯಾ Vi) ಇವರಿಬ್ಬರನ್ನು ಹಿಂದಿಕ್ಕಲು ಹೋರಾಟ ನಡೆಸುತ್ತಲೇ ಇದೆ. ಈ ಟೆಲಿಕಾಂ ಕಂಪನಿಗಳೆಲ್ಲ ಚಂದಾದಾರರನ್ನು ಆಕರ್ಷಿಸಲು ಅತ್ಯುತ್ತಮ ಡೇಟಾ ಯೋಜನೆಗಳನ್ನು (Data Pack) ಪರಿಚಯಿಸಿವೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ ಸೌಲಭ್ಯವನ್ನು ಪಡೆದಿರುವ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನವನ್ನು ಹೊಂದಿವೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ (Unlimited Voice Call) ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ನೀಡಿವೆ.

ಹೌದು, ಏರ್ಟೆಲ್​ನ 298 ರೂ. ಪ್ರಿಪೇಡ್‌ ಪ್ಲಾನ್​​ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲಾನ್​​ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಇತ್ತ ವಿ ಟೆಲಿಕಾಂನ 229 ರೂ. ಪ್ಲಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲಾನ್​​ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಇನ್ನು ಜಿಯೋದ ಈ 249 ರೂ. ಪ್ಲಾನ್​​ನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಇದರ ಜೊತೆಗೆ ಜಿಯೋದ 599 ರೂ. ಪ್ರಿಪೇಯ್ಡ್‌ ಪ್ಲಾನ್​ ಕೂಡ ಇದೆ. ಇದು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲಾನ್​ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟ್​ವರ್ಕ್​ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

WhatsApp: ನೀವು ವಾಟ್ಸ್​ಆ್ಯಪ್​ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸುತ್ತೀರಾ?: ಹಾಗಿದ್ರೆ ತಪ್ಪದೇ ಈ ಸ್ಟೋರಿ ಓದಿ

Amazon: ವಾವ್… ದುಬಾರಿ ಬೆಲೆಯ ಸ್ಮಾರ್ಟ್​ಫೋನ್​ಗಳು ಬಜೆಟ್ ಬೆಲೆಗೆ: ಅಮೆಜಾನ್​ನಲ್ಲಿ ಭರ್ಜರಿ ಆಫರ್

(Airtel Jio and Vi offer prepaid plans that give various benefits Here is the details)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ