Sign In

By signing in or creating an account, you agree with Associated Broadcasting Company's Terms & Conditions and Privacy Policy.

Airtel: ನೀವು ಏರ್ಟೆಲ್ ಬಳಕೆದಾರರೇ?: ಹಾಗಿದ್ರೆ ಡಿಸ್ನಿ+ ಹಾಟ್​ಸ್ಟಾರ್​​ನ ಈ ಬಂಪರ್ ಪ್ಲಾನ್ ನೋಡಿ

Airtel Disney+ Hotstar Plan: ಈಗ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಆಗಿರುವುದರಿಂದ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನೆ ಗಮನದಲ್ಲಿಟ್ಟುಕೊಂಡು ಏರ್ಟೆಲ್ ಟೆಲಿಕಾಂ ಆಕರ್ಷಕ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳನ್ನು ಜಾರಿಗೊಳಿಸಿದೆ.

Airtel: ನೀವು ಏರ್ಟೆಲ್ ಬಳಕೆದಾರರೇ?: ಹಾಗಿದ್ರೆ ಡಿಸ್ನಿ+ ಹಾಟ್​ಸ್ಟಾರ್​​ನ ಈ ಬಂಪರ್ ಪ್ಲಾನ್ ನೋಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Vinay Bhat

Updated on: Apr 03, 2022 | 6:35 AM

ಭಾರ್ತಿ ಏರ್ಟೆಲ್ (Bharti Airtel), ರಿಲಯನ್ಸ್ ಜಿಯೋ (Reliance Jio)  ಮತ್ತು ವೊಡಾಫೋನ್ ಐಡಿಯಾ (Vi) ನಂತಹ ಪ್ರಮುಖ ಟೆಲಿಕಾಂ ಆಪರೇಟರ್‌ಗಳು ಈಗೀಗ ಹೆಚ್ಚಾಗಿ ಓಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ನೀಡುವ ಯೋಜನೆಯನ್ನು ಪರಿಚಯಿಸುತ್ತಿದೆ. ಅಲ್ಲದೆ ಈಗ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಆಗಿರುವುದರಿಂದ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನೆ ಗಮನದಲ್ಲಿಟ್ಟುಕೊಂಡು ಏರ್ಟೆಲ್ ಟೆಲಿಕಾಂ ಆಕರ್ಷಕ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳನ್ನು ಜಾರಿಗೊಳಿಸಿದೆ. ಮೊನ್ನೆಯಷ್ಟೆ ಹೊಸದಾಗಿ 296 ರೂ. ಮತ್ತು 319 ರೂ. ವಿನ ಹೊಸ ಪ್ರಿಪೇಯ್ಡ್‌ ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆಗಳು ತಿಂಗಳ ವ್ಯಾಲಿಡಿಟಿ ಅವಧಿಯ ಪ್ರಿಪೇಯ್ಡ್‌ ಯೋಜನೆಗಳಾಗಿವೆ. ಸದ್ಯ ಏರ್ಟೆಲ್​ನಲ್ಲಿರುವ ಡಿಸ್ನಿ+ ಹಾಟ್‌ಸ್ಟಾರ್‌ ಪ್ಲಾನ್​ಗಳು ಯಾವುವು ಎಂಬುದನ್ನು ನೋಡೋಣ.

ಏರ್ಟೆಲ್​ನ 599 ರೂ. ಪ್ರಿಪೇಯ್ಡ್‌ ಯೋಜನೆ ನಿಮಗೆ 28 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಹಾಗೂ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆಯಬಹುದು. ಜೊತೆಗೆ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಕೂಡ ಲಭ್ಯವಾಗಲಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಒಂದು ವರ್ಷದ ಅವಧಿಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ದೊರೆಯಲಿದೆ.

499ರೂ. ಪ್ರಿಪೇಯ್ಡ್‌ ಪ್ಲಾನ್​​ನಲ್ಲಿ ನಿಮಗೆ ಒಂದು ವರ್ಷದ ಅವಧಿಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಿಗಲಿದೆ. ಇದಲ್ಲದೆ ಈ ಪ್ಲಾನ್‌ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಮತ್ತು ಅನಿಯಮಿತ ಕರೆ ಪ್ರಯೋಜನ ಲಭ್ಯವಾಗಲಿದೆ. ಈ ಪ್ಲಾನ್‌ ನಿಮಗೆ 28 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಹಾಗೆಯೆ ಏರ್ಟೆಲ್​ನ​ 999 ರೂ. ಯೋಜನೆಯು ತಿಂಗಳಿಗೆ 100GB ಡೇಟಾ, ಅನಿಯಮಿತ ಕರೆಗಳು ಮತ್ತು ದಿನಕ್ಕೆ 100 SMS ನೀಡುತ್ತದೆ. ಎರಡು ಕುಟುಂಬದ ಸದಸ್ಯರನ್ನು ಆಡ್-ಆನ್‌ಗಳಾಗಿ ಸೇರಿಸುವ ಆಯ್ಕೆಯನ್ನು ಸಿಗಲಿವೆ. ಇದಲ್ಲದೆ ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ಮೊಬೈಲ್, ಏರ್‌ಟೆಲ್ ಸೆಕ್ಯೂರ್, ವೈಂಕ್ ಮ್ಯೂಸಿಕ್, ಶಾ ಅಕಾಡೆಮಿ, ಫಾಸ್ಟ್‌ಟ್ಯಾಗ್, ಏರ್‌ಟೆಲ್ ವಿಐಪಿ ಸೇವೆ ಮತ್ತು ಅನಿಯಮಿತ ಬದಲಾವಣೆಗಳೊಂದಿಗೆ ಉಚಿತ ಹೆಲೋಟ್ಯೂನ್‌ಗಳನ್ನು ಸಹ ಲಭ್ಯ.

ಪೋಸ್ಟ್‌ಪೇಯ್ಡ್‌ ಪ್ಲಾನ್ ಬಗ್ಗೆ ನೋಡುವುದಾದರೆ, 1199 ರೂ. ವಿ ಪ್ಲಾನ್​ನಲ್ಲಿ ಒಟ್ಟು 250GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಬೇಸಿಕ್ ಅನ್ಲಿಮಿಟೆಡ್ ಪ್ರವೇಶ, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಸೌಲಭ್ಯಗಳು ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯವಾಗಲಿವೆ.

WhatsApp: 10 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ನೀವು ಎಚ್ಚರದಿಂದಿರಿ

Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಭಾರತಕ್ಕೆ ಕಾಲಿಟ್ಟ ಬಜೆಟ್ ಬೆಲೆಯ ಗ್ಯಾಲಕ್ಸಿ M33 5G

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು