ಭಾರ್ತಿ ಏರ್ಟೆಲ್ (Bharti Airtel), ರಿಲಯನ್ಸ್ ಜಿಯೋ (Reliance Jio) ಮತ್ತು ವೊಡಾಫೋನ್ ಐಡಿಯಾ (Vi) ನಂತಹ ಪ್ರಮುಖ ಟೆಲಿಕಾಂ ಆಪರೇಟರ್‌ಗಳು ಈಗೀಗ ಹೆಚ್ಚಾಗಿ ಓಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ನೀಡುವ ಯೋಜನೆಯನ್ನು ಪರಿಚಯಿಸುತ್ತಿದೆ. ಅಲ್ಲದೆ ಈಗ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಆಗಿರುವುದರಿಂದ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನೆ ಗಮನದಲ್ಲಿಟ್ಟುಕೊಂಡು ಏರ್ಟೆಲ್ ಟೆಲಿಕಾಂ ಆಕರ್ಷಕ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳನ್ನು ಜಾರಿಗೊಳಿಸಿದೆ. ಮೊನ್ನೆಯಷ್ಟೆ ಹೊಸದಾಗಿ 296 ರೂ. ಮತ್ತು 319 ರೂ. ವಿನ ಹೊಸ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆಗಳು ತಿಂಗಳ ವ್ಯಾಲಿಡಿಟಿ ಅವಧಿಯ ಪ್ರಿಪೇಯ್ಡ್ ಯೋಜನೆಗಳಾಗಿವೆ. ಸದ್ಯ ಏರ್ಟೆಲ್ನಲ್ಲಿರುವ ಡಿಸ್ನಿ+ ಹಾಟ್‌ಸ್ಟಾರ್ ಪ್ಲಾನ್ಗಳು ಯಾವುವು ಎಂಬುದನ್ನು ನೋಡೋಣ.
ಏರ್ಟೆಲ್ನ 599 ರೂ. ಪ್ರಿಪೇಯ್ಡ್ ಯೋಜನೆ ನಿಮಗೆ 28 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಹಾಗೂ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆಯಬಹುದು. ಜೊತೆಗೆ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಕೂಡ ಲಭ್ಯವಾಗಲಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಒಂದು ವರ್ಷದ ಅವಧಿಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ದೊರೆಯಲಿದೆ.
499ರೂ. ಪ್ರಿಪೇಯ್ಡ್ ಪ್ಲಾನ್‌ನಲ್ಲಿ ನಿಮಗೆ ಒಂದು ವರ್ಷದ ಅವಧಿಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಿಗಲಿದೆ. ಇದಲ್ಲದೆ ಈ ಪ್ಲಾನ್‌ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಮತ್ತು ಅನಿಯಮಿತ ಕರೆ ಪ್ರಯೋಜನ ಲಭ್ಯವಾಗಲಿದೆ. ಈ ಪ್ಲಾನ್ ನಿಮಗೆ 28 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಹಾಗೆಯೆ ಏರ್ಟೆಲ್ನ 999 ರೂ. ಯೋಜನೆಯು ತಿಂಗಳಿಗೆ 100GB ಡೇಟಾ, ಅನಿಯಮಿತ ಕರೆಗಳು ಮತ್ತು ದಿನಕ್ಕೆ 100 SMS ನೀಡುತ್ತದೆ. ಎರಡು ಕುಟುಂಬದ ಸದಸ್ಯರನ್ನು ಆಡ್-ಆನ್‌ಗಳಾಗಿ ಸೇರಿಸುವ ಆಯ್ಕೆಯನ್ನು ಸಿಗಲಿವೆ. ಇದಲ್ಲದೆ ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ಮೊಬೈಲ್, ಏರ್‌ಟೆಲ್ ಸೆಕ್ಯೂರ್, ವೈಂಕ್ ಮ್ಯೂಸಿಕ್, ಶಾ ಅಕಾಡೆಮಿ, ಫಾಸ್ಟ್‌ಟ್ಯಾಗ್, ಏರ್‌ಟೆಲ್ ವಿಐಪಿ ಸೇವೆ ಮತ್ತು ಅನಿಯಮಿತ ಬದಲಾವಣೆಗಳೊಂದಿಗೆ ಉಚಿತ ಹೆಲೋಟ್ಯೂನ್‌ಗಳನ್ನು ಸಹ ಲಭ್ಯ.
ಪೋಸ್ಟ್‌ಪೇಯ್ಡ್ ಪ್ಲಾನ್ ಬಗ್ಗೆ ನೋಡುವುದಾದರೆ, 1199 ರೂ. ವಿ ಪ್ಲಾನ್‌ನಲ್ಲಿ ಒಟ್ಟು 250GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್ ಬೇಸಿಕ್ ಅನ್ಲಿಮಿಟೆಡ್ ಪ್ರವೇಶ, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಸೌಲಭ್ಯಗಳು ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯವಾಗಲಿವೆ.
WhatsApp: 10 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ನೀವು ಎಚ್ಚರದಿಂದಿರಿ
Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಭಾರತಕ್ಕೆ ಕಾಲಿಟ್ಟ ಬಜೆಟ್ ಬೆಲೆಯ ಗ್ಯಾಲಕ್ಸಿ M33 5G