ಪ್ರಸಿದ್ಧ ಇ ಕಾಮರ್ಸ್ ದೈತ್ಯ ಅಮೆಜಾನ್ (Amazon) ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಎಂದೆನಿಸಿಕೊಂಡಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಇದೀಗ ಆನ್‌ಲೈನ್ ಮಾರಾಟ ಮಳಿಗೆಯಾದ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ (Amazon Fab Phones Fest) ಸೇಲ್ ಅನ್ನು ಅನ್ನು ಭಾರತದಲ್ಲಿ ಆಯೋಜಿಸಿದೆ. ಈಗಾಗಲೇ ಈ ಸೇಲ್ ಲೈವ್ ಆಗಲಿದ್ದು, ಏಪ್ರಿಲ್ 14ರ ವರೆಗೆ ನಡೆಯಲಿದೆ. ಈ ಸಂದರ್ಭ ಖರೀದಿದಾರರು ಶವೋಮಿ (Xiaomi), ಸ್ಯಾಮ್ಸಂಗ್, ಒನ್ ಪ್ಲಸ್ ನಂತಹ ಬ್ರ್ಯಾಂಡೆಡ್ ಸ್ಮಾರ್ಟ್‌ಫೋನ್‌ಗಳನ್ನು ಭರ್ಜರಿ ರಿಯಾಯಿತಿಯಲ್ಲಿ ಖರೀದಿಸಬಹುದಾಗಿದೆ.
ಈ ಸೇಲ್ನಲ್ಲಿ ಫೋನ್ಗಳ ಮೇಲೆ ಬರೋಬ್ಬರಿ ಶೇ. 40 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಜೊತೆಗೆ ಸ್ಮಾರ್ಟ್ ಟಿವಿ ಇತರೆ ಎಲೆಕ್ಟ್ರಾನಿಕ್ ಸಲಕರಣಗಳ ಮೇಲೂ ಶೇ. 55 ರಷ್ಟು ರಿಯಾಯಿತಿ ನೀಡಲಾಗಿದೆ. ಹಾಗಾದ್ರೆ ಅತ್ಯಂತ ಕಡಿಮೆ ಬೆಲೆಗೆ ಸೇಲ್ ಆಗುತ್ತಿರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳು ಯಾವುವು? ಅದರ ಫೀಚರ್ಸ್ ಏನು ಎಂಬುದನ್ನು ನೋಡೋಣ.
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್ನಲ್ಲಿ ಕೇವಲ 6,299 ರೂ. ಗೆ ಸೇಲ್ ಆಗುತ್ತದೆ. ಇದು 720×1,560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್ಪ್ಲೇ ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ f/2.0 ಲೆನ್ಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಮೈಕ್ರೋ ಸ್ಲಿಟ್ ಫ್ಲ್ಯಾಶ್‌ಲೈಟ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರಿಯಲ್ ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 11,499 ರೂ. ಗೆ ಮಾರಾಟ ಕಾಣುತ್ತಿದೆ. ಇದು 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 53 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.
ಇನ್ನು ರೆಡ್ಮಿ 9A ಸ್ಪೋರ್ಟ್ ಫೋನ್ ಬೆಲೆ ಕೇವಲ 7,4999 ರೂ.. ಇದು 6.53-ಇಂಚಿನ HD+ LCD ಡಿಸ್ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್ ಶಕ್ತಿಯನ್ನು ಹೊಂದಿದ್ದು, 13 ಮೆಗಾಪಿಕ್ಸೆಲ್ ಸೆನ್ಸಾರ್ ಫೋನ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
10,999 ರೂ. ಗೆ ಮಾರಾಟ ಆಗುತ್ತಿರುವ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್ 1,080×2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ f/1.79 ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸರ್ ಮತ್ತು AI ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಡ್ಯುಯಲ್-LED ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಇತ್ತೀಚೆಗಷ್ಟೆ ಬಿಡುಗಡೆ ಆದ ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್ನಲ್ಲಿ ಕೇವಲ 23,999 ರೂ. ಗೆ ನಿಮ್ಮದಾಗಿಸಬಹುದು. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 65W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Realme 9 4G: 108MP ಕ್ಯಾಮೆರಾ, ಕೇವಲ 17,999 ರೂ.: ರಿಯಲ್ ಮಿ 9 ಫೋನ್ ಈಗ ಖರೀದಿಗೆ ಲಭ್ಯ
WhatsApp: ಫೈಲ್ ಶೇರ್ ಮಾಡುವಾಗ ಕಾಣಿಸುತ್ತೆ ಹೊಸ ಆಯ್ಕೆ: ವಾಟ್ಸ್ಆ್ಯಪ್ನಿಂದ ನೂತನ ಫೀಚರ್
Published On - 1:45 pm, Tue, 12 April 22