ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ (Amazon) ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಎಂದೆನಿಸಿಕೊಂಡಿದೆ. ಸದಾ ಒಂದಲ್ಲ ಒಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಸದ್ಯ ಆನ್‌ಲೈನ್ ಮಾರಾಟ ಮಳಿಗೆಯಾದ ಅಮೆಜಾನ್ನಲ್ಲಿ ಫ್ಯಾಬ್ ಫೋನ್ಸ್ ಫೆಸ್ಟ್ ಮತ್ತು ಫ್ಯಾಬ್ ಟಿವಿ ಫೆಸ್ಟ್ (Amazon Fab Top Phones Fest) ಸೇಲ್ ನಡೆಯುತ್ತಿದೆ. ಫೆಬ್ರವರಿ 25 ರಂದು ಈ ಮೇಳ ಪ್ರಾರಂಭವಾಗಿದ್ದು ನಾಳೆ (ಫೆಬ್ರವರಿ 28) ಕೊನೇ ದಿನವಾಗಿದೆ. ಇದರಲ್ಲಿ ಖರೀದಿದಾರರು ಶವೋಮಿ (Xiaomi), ಸ್ಯಾಮ್‌ಸಂಗ್, ಒನ್‌ಪ್ಲಸ್ ನಂತಹ ಬ್ರ್ಯಾಂಡೆಡ್ ಸ್ಮಾರ್ಟ್‌ಫೋನ್‌ಗಳನ್ನು ಭರ್ಜರಿ ರಿಯಾಯಿತಿಯಲ್ಲಿ ಖರೀದಿಸಬಹುದಾಗಿದೆ ಮತ್ತು ಯಾವುದೇ ವೆಚ್ಚವಿಲ್ಲದ EMI, ವಿನಿಮಯ ಕೊಡುಗೆಗಳು ಮತ್ತು ಹೆಚ್ಚಿನವುಗಳಂತಹ ಡೀಲ್‌ಗಳನ್ನು ಆನಂದಿಸಬಹುದು. ಹಾಗಾದ್ರೆ ಅತಿ ಹೆಚ್ಚು ಡಿಸ್ಕೌಂಟ್ನಲ್ಲಿ ಸೇಲ್ ಆಗುತ್ತಿರುವ ಸ್ಮಾರ್ಟ್‌ಫೋನ್ ಯಾವುದು ಎಂಬುದನ್ನು ನೋಡೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್ ಈ ಸೇಲ್‌ನಲ್ಲಿ ಕೇವಲ 36,990 ರೂ.ಗೆ ಮಾರಾಟ ಆಗುತ್ತಿದೆ. ಇದು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೇಯೇ 8GB RAM + 128 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಹಾಗೆಯೇ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಪಡೆದಿದೆ.
ಇನ್ನು ಐಕ್ಯೂ Z5 ಸ್ಮಾರ್ಟ್‌ಫೋನ್ ರಿಯಾಯಿತಿ ದರದಲ್ಲಿ ಕೇವಲ 20,990 ರೂ.ಗಳಿಗೆ ಲಭ್ಯವಾಗುತ್ತಿದೆ. ಐಕ್ಯೂ Z3 ಸ್ಮಾರ್ಟ್‌ಫೋನ್ 17,990 ರೂ. ಆರಂಭಿಕ ಬೆಲೆಯೊಂದಿಗೆ ಲಭ್ಯವಿರುತ್ತದೆ. ಈ ಎರಡೂ ಫೋನ್‌ಗಳಲ್ಲಿ 3,000 ರೂ, ಗಳ ತನಕ ರಿಯಾಯಿ ದೊರೆಯುತ್ತದೆ. ಇದಲ್ಲದೆ ಅಮೆಜಾನ್ ಸೇಲ್‌ನಲ್ಲಿ ರಿಯಲ್‌ಮಿ ನಾರ್ಜೊ 50A 10,999 ರೂ.ಗಳಿಗೆ ದೊರೆಯಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ನಿಮಗೆ 11,499 ರೂ.ಗಳಿಗೆ ಬದಲಾಗಿ ಕೇವಲ 9,499 ರೂ.ಗಳಿಗೆ ಮಾರಾಟ ಆಗುತ್ತಿದೆ.
ಶವೋಮಿ ಎಂಐ 11 ಲೈಟ್ 5G NE ಸ್ಮಾರ್ಟ್‌ಫೋನ್ ಅನ್ನು ಆಫರ್ನಲ್ಲಿ ಇದೀಗ 26,999 ರೂ. ಗೆ ಖರೀದಿಸಬಹುದು. ಇದರ MRP ಬೆಲೆ 33,999 ರೂ. ಆಗಿದೆ. ಒನ್‌ಪ್ಲಸ್ ನಾರ್ಡ್ CE 5G ಈಗ ಕೇವಲ 24,999 ರೂ. ಗೆ ಮಾರಾಟವಾಗುತ್ತಿದೆ. ರೆಡ್ಮಿ ನೋಟ್ 10 ಪ್ರೊ ಇದನ್ನು ನೀವು ಕೇವಲ 17,499 ರೂ. ಗೆ ಖರೀದಿಸಬಹುದು. ಇನ್ನು ಈ ಸೇಲ್‌ನಲ್ಲಿ ICICI ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ ಸರಣಿಯಲ್ಲಿ 8,000 ರೂ. ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಒನ್‌ಪ್ಲಸ್ 9RT ಖರೀದಿಸುವಾಗ 4,000 ರೂ. ರಿಯಾಯಿತಿ ದೊರೆಯಲಿದೆ. ಹೊಸದಾಗಿ ಬಿಡುಗಡೆ ಆದ ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ ಮೇಲೆ 1,500 ರೂ. ರಿಯಾಯಿತಿ ಸಿಗಲಿದೆ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ ಕೇವಲ 11,499 ರೂ. ಗೆ ಖರೀದಿಸಬಹುದು. ಇದು 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
WhatsApp: ವಾಟ್ಸ್ಆ್ಯಪ್ ಗ್ರೂಪ್ ಕಾಲ್ನಲ್ಲಿ ಬರುತ್ತಿದೆ ನೀವು ಊಹಿಸಲಾಗದ ಫೀಚರ್: ಏನದು ಗೊತ್ತೇ?
Redmi Note 11 Pro: ಬರುತ್ತಿದೆ 108MP ಕ್ಯಾಮೆರಾದ ಮತ್ತೊಂದು ಭರ್ಜರಿ ಸ್ಮಾರ್ಟ್‌ಫೋನ್: ಯಾವುದು?, ಯಾವಾಗ ರಿಲೀಸ್?