Amazon: ಅಮೇಜಾನ್ ಫ್ಯಾಬ್ ಫೋನ್ ಫೆಸ್ಟ್​ನಲ್ಲಿ ಶವೋಮಿ, ಒನ್​ಪ್ಲಸ್​, ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್

Amazon Fab Phones Fest: ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಅನ್ನು ಭಾರತದಲ್ಲಿ ಆಯೋಜಿಸಿದೆ. ನವೆಂಬರ್ 28 ರವರೆಗೆ ಇದು ನಡೆಯಲಿದ್ದು, ಈ ಸಂದರ್ಭ ಖರೀದಿದಾರರು ಶವೋಮಿ, ಸ್ಯಾಮ್​ಸಂಗ್, ಒನ್​ಪ್ಲಸ್ ನಂತಹ ಬ್ರ್ಯಾಂಡೆಡ್​ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಡಿಸ್ಕೌಂಟ್​ನಲ್ಲಿ ಲಭ್ಯವಿದೆ.

Amazon: ಅಮೇಜಾನ್ ಫ್ಯಾಬ್ ಫೋನ್ ಫೆಸ್ಟ್​ನಲ್ಲಿ ಶವೋಮಿ, ಒನ್​ಪ್ಲಸ್​, ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್
Amazon Fab Phones Fest sale
Follow us
TV9 Web
| Updated By: Vinay Bhat

Updated on: Nov 25, 2021 | 1:04 PM

ಇ ಕಾಮರ್ಸ್ ದೈತ್ಯ ಅಮೆಜಾನ್ (Amazon) ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ  ಎಂದೇನಿಸಿಕೊಂಡಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಇದೀಗ ಆನ್​ಲೈನ್​ ಮಾರಾಟ ಮಳಿಗೆಯಾದ ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ (Amazon Fab Top Phones Fest) ಅನ್ನು ಭಾರತದಲ್ಲಿ ಆಯೋಜಿಸಿದೆ. ನವೆಂಬರ್ 28 ರವರೆಗೆ ಇದು ನಡೆಯಲಿದ್ದು, ಈ ಸಂದರ್ಭ ಖರೀದಿದಾರರು ಶವೋಮಿ (Xiaomi), ಸ್ಯಾಮ್​ಸಂಗ್ (Samsung), ಒನ್​ಪ್ಲಸ್​ (OnePlus) ನಂತಹ ಬ್ರ್ಯಾಂಡೆಡ್​ ಸ್ಮಾರ್ಟ್‌ಫೋನ್‌ಗಳನ್ನು ಶೇಕಡಾ 40 ರಷ್ಟು ರಿಯಾಯಿತಿಯಲ್ಲಿ ಖರೀದಿಸಬಹುದಾಗಿದೆ ಮತ್ತು ಯಾವುದೇ ವೆಚ್ಚವಿಲ್ಲದ EMI, ವಿನಿಮಯ ಕೊಡುಗೆಗಳು ಮತ್ತು ಹೆಚ್ಚಿನವುಗಳಂತಹ ಡೀಲ್‌ಗಳನ್ನು ಆನಂದಿಸಬಹುದು. ಹಾಗಾದ್ರೆ ಈ ಬ್ರ್ಯಾಂಡೆಡ್ ಕಂಪನಿಯ ಯಾವ ಫೋನ್ ಹೆಚ್ಚು ಸೇಲ್ ಆಗುತ್ತಿದೆ ಎಂಬುದನ್ನು ನೋಡೋಣ.

ಶವೋಮಿ ಎಂಐ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಆಫರ್​ನಲ್ಲಿ ಇದೀಗ 25,749 ರೂ. ಗೆ ಖರೀದಿಸಬಹುದು. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256 GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಈ ಫೋನ್ ಈಗ ಕೇವಲ 24,999 ರೂ. ಗೆ ಮಾರಾಟವಾಗುತ್ತಿದೆ.

ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 31,999 ರೂ. ಗೆ ಸೇಲ್ ಕಾಣುತ್ತಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದ್ದು, 6.55-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯ ವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಹೊಂದಿದೆ. ಹಾಗೆಯೇ ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 65 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ.‌ ಹಾಗೆಯೇ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್‌ ನೈಟ್‌, ಗ್ಲಾಸಿಲ್‌ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ. ಇದನ್ನು ನೀವು ಕೇವಲ 18,999 ರೂ. ಗೆ ಖರೀದಿಸಬಹುದು.

ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್​ಫೋನ್ 14,999 ರೂ. ಗೆ ಮಾರಾಟವಾಗುತ್ತಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿರುವ ಅಗತ್ಯ ಮೆಸೇಜ್​ಗಳನ್ನು ಸೇವ್ ಮಾಡಿಕೊಳ್ಳಬಹುದು: ಹೇಗೆ ಗೊತ್ತೇ?

(Amazon Fab Phones Fest sale phones from OnePlus Samsung and Xiaomi are available at best offer price)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ