AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon: ಇಂದೇ ಕೊನೆ ದಿನ: ಅಮೆಜಾನ್​ನಲ್ಲಿ ಈ ಸ್ಮಾರ್ಟ್​ಫೋನ್​ಗಳ ಮೇಲೆ ಭರ್ಜರಿ ರಿಯಾಯಿತಿ

Amazon Great Freedom Sale: ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಇಂದೇ ಕೊನೆಯ ದಿನವಾಗಿದ್ದು ಬಂಪರ್ ಡಿಸ್ಕೌಂಟ್​ಗೆ ಲಭ್ಯವಿರುವ ಸ್ಮಾರ್ಟ್​ಫೋನ್​ಗಳು ಯಾವುವು?, ಬೆಲೆ ಎಷ್ಟು? ಎಂಬುದನ್ನು ನೋಡೋಣ…

Amazon: ಇಂದೇ ಕೊನೆ ದಿನ: ಅಮೆಜಾನ್​ನಲ್ಲಿ ಈ ಸ್ಮಾರ್ಟ್​ಫೋನ್​ಗಳ ಮೇಲೆ ಭರ್ಜರಿ ರಿಯಾಯಿತಿ
Smartphones
TV9 Web
| Edited By: |

Updated on: Aug 09, 2021 | 3:28 PM

Share

ಅಮೆಜಾನ್​ನಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್​ನಲ್ಲಿ (Amazon Great Freedom Sale) ಸ್ಮಾರ್ಟ್‌ಫೋನ್‌, ಸ್ಮಾರ್ಟ್‌ ವಾಚ್, ಸ್ಮಾರ್ಟ್‌ ಟಿವಿ ಸೇರಿದಂತೆ ಹಲವು ಗ್ಯಾಟ್ಜೆಟ್ಸ್‌ಗಳು ಭರ್ಜರಿ ರಿಯಾಯಿತಿ ಲಭ್ಯವಾಗುತ್ತಿದೆ. ಮುಖ್ಯವಾಗಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಬಿಗ್ ಡಿಸ್ಕೌಂಟ್‌ನಿಂದ ಗ್ರಾಹಕರ ಗಮನ ಸೆಳೆದಿವೆ. ಈ ಮೇಳವು ಆಗಸ್ಟ್ 5ಕ್ಕೆ ಆರಂಭವಾಗಿದ್ದು, ಇಂದು ಆಗಸ್ಟ್ 9 ಕೊನೆಯ ದಿನವಾಗಿದೆ.

ಹಾಗಾದ್ರೆ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್​ನಲ್ಲಿ ಬಂಪರ್ ಡಿಸ್ಕೌಂಟ್​ಗೆ ಲಭ್ಯವಿರುವ ಸ್ಮಾರ್ಟ್​ಫೋನ್​ಗಳು ಯಾವುವು?, ಬೆಲೆ ಎಷ್ಟು? ಎಂಬುದನ್ನು ನೋಡೋಣ…

ಎಂಐ 10i 5G: ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ಶವೋಮಿ ಕಂಪನಿಯ ಇತ್ತೀಚಿಗಿನ ಎಂಐ 10i 5G ಸ್ಮಾರ್ಟ್​ಫೋನ್ ಬಂಪರ್ ಡಿಸ್ಕೌಂಟ್​ನಲ್ಲಿ ಸಿಗುತ್ತಿದೆ. 6GB ಮತ್ತು 128GB ಸ್ಟೋರೇಜ್ ವೇರಿಯಂಟ್​ನ ಮೂಲಬೆಲೆ 24,999 ರೂ. ಆದರೆ, ಸದ್ಯ ಆಫರ್​ನಲ್ಲಿ 21,999 ರೂ. ಗೆ ಲಭ್ಯವಾಗುತ್ತಿದೆ. ಈ ಫೋನ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್ಡ್ರಾಗನ್ 750G ಪ್ರೊಸೆಸರ್ ಬಲವನ್ನು ಪಡೆದಿದ್ದು, 108 ಮೆಗಾಫಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್: ಶವೋಮಿಯ ಮತ್ತೊಂದು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ ಕೇವಲ 19,999 ರೂ. ಗೆ ಸಿಗುತ್ತಿದೆ. ಈ ಫೋನ್ ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 732 ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ

ಸ್ಯಾಮ್​ಸಂಗ್ ಗ್ಯಾಲಕ್ಸಿ M51: ಬಲಿಷ್ಠ ಬ್ಯಾಟರಿ ಬ್ಯಾಕ್ಅಪ್​ನಿಂದ ಗಮನ ಸೆಳೆದಿರುವ ಸ್ಯಾಮ್​ಸಂಗ್ ಗ್ಯಾಲಕ್ಸಿ M51 ಫೋನ್ ಸಹ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ 21,999 ರೂ.ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 7000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್​ ನಲ್ಲಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ A22 5G: ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಸ್ಯಾಮ್​ಸಂಗ್ ಗ್ಯಾಲಕ್ಸಿ A22 5G ಫೋನ್ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 6GB RAM ಮತ್ತು 128GB ಸ್ಟೋರೇಜ್ನ ವೇರಿಯಂಟ್ ಬೆಲೆಯು 19,999 ರೂ. ಆಗಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್​ನಿಂದ ಕೂಡಿದೆ.

Vivo Y53s: 64MP ಕ್ಯಾಮೆರಾ, 33W ಫಾಸ್ಟ್ ಚಾರ್ಜಿಂಗ್, ಕಡಿಮೆ ಬೆಲೆಯ ವಿವೋ Y53s ಸ್ಮಾರ್ಟ್​ಫೋನ್ ಬಿಡುಗಡೆ

Xiaomi: ಪದಕ ಗೆದ್ದ ಭಾರತೀಯರಿಗೆ ಶವೋಮಿಯಿಂದ ಸ್ಮಾರ್ಟ್​ಫೋನ್ ಗಿಫ್ಟ್: ಯಾವುದು ಗೊತ್ತಾ?

(Amazon Great Freedom Festival 2021 Sale Ends Tonight Here is the Best Offers on Mobile Phones)

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ