Amazon Great Republic Day sale: ಕೊನೇ ದಿನದ ಅಮೆಜಾನ್ ರಿಪಬ್ಲಿಕ್ ಡೇ ಸೇಲ್​ನಲ್ಲಿ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್

ಅಮೆಜಾನ್​ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ನಡೆಯುತ್ತಿರುವ ಅಮೆಜಾನ್‌ ಗ್ರೇಟ್ ರಿಪಬ್ಲಿಕ್ ಡೇ ಸೇಲ್ (Amazon Great Republic Day Sale) ಇಂದು ಕೊನೇ ದಿನವಾಗಿದೆ. ಆ್ಯಪಲ್ ಕಂಪನಿಯ ಐಫೋನ್, ಶವೋಮಿ, ಸ್ಯಾಮ್​ಸಂಗ್ ಮೊಬೈಲ್​ಗಳ ಮೇಲೂ ಆಕರ್ಷಕ ರಿಯಾಯಿತಿ ನೀಡಲಾಗಿದೆ.

Amazon Great Republic Day sale: ಕೊನೇ ದಿನದ ಅಮೆಜಾನ್ ರಿಪಬ್ಲಿಕ್ ಡೇ ಸೇಲ್​ನಲ್ಲಿ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್
Follow us
| Edited By: Vinay Bhat

Updated on: Jan 20, 2022 | 10:37 AM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ನಡೆಯುತ್ತಿರುವ ಅಮೆಜಾನ್‌ ಗ್ರೇಟ್ ರಿಪಬ್ಲಿಕ್ ಡೇ ಸೇಲ್ (Amazon Great Republic Day Sale) ಇಂದು ಕೊನೇ ದಿನವಾಗಿದೆ. ಈ ಪ್ರಯುಕ್ತ ಸ್ಮಾರ್ಟ್​ಫೋನ್​ಗಳ ಮೇಲೆ ಬಂಪರ್ ಡಿಸ್ಕೌಂಟ್ ಘೋಷಿಸಲಾಗಿದೆ. ಐಕ್ಯೂ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು 8,000ರೂ. ವರೆಗೆ ರಿಯಾಯಿತಿ ಪಡೆದುಕೊಂಡಿರುವುದು ವಿಶೇಷ. ಹಾಗೆಯೇ ಆ್ಯಪಲ್ ಕಂಪನಿಯ ಐಫೋನ್ (Apple iPhone), ಶವೋಮಿ, ಸ್ಯಾಮ್​ಸಂಗ್ ಮೊಬೈಲ್​ಗಳ ಮೇಲೂ ಆಕರ್ಷಕ ರಿಯಾಯಿತಿ ನೀಡಲಾಗಿದೆ. ಎಕ್ಸ್‌ಚೆಂಜ್ ಆಫರ್, ನೋ ಕಾಸ್ಟ್‌ ಇಎಮ್‌ಐ, ಕೊಪನ್​ನಂತಹ ಕೊಡುಗೆಗಳು ಚಾಲ್ತಿಯಲ್ಲಿವೆ. ಇದರೊಂದಿಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ ಶೇ. 10% ತ್ವರಿತ ರಿಯಾಯಿತಿ ಇದೆ. ಹಾಗಾದರೇ ಅಮೆಜಾನ್‌ನ ಗ್ರೇಟ್ ರಿಪಬ್ಲಿಕ್ ಡೇ ಸೇಲ್​ನಲ್ಲಿ ಆಕರ್ಷಕ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡ ಬೆಸ್ಟ್ ಸ್ಮಾರ್ಟ್‌ಫೋನ್‌ ಬಗ್ಗೆ ಮಾಹಿತಿ ಇಲ್ಲಿದೆ.

ಅಮೆಜಾನ್‌ನಲ್ಲಿ ಐಫೋನ್‌ 12 14% ಡಿಸ್ಕೌಂಟ್‌ ಪಡೆದಿದೆ. ಇದರಿಂದ 64GB ಸ್ಟೋರೆಜ್ ಸಾಮರ್ಥ್ಯದ ಫೋನ್ ಇದೀಗ ಕೇವಲ 52,999 ರೂ. ಗೆ ಖರೀದಿಸಬಹುದು. 128GB ಸ್ಟೋರೆಜ್ ರೂಪಾಂತರಕ್ಕೆ 61,999 ರೂ. ಇದೆ. ಇದರ ಜೊತೆಗೆ ಸ್ಯಾಮ್​ಸಂಗ್ ಗ್ಯಾಲಕ್ಸಿ M32 (12,999 ರೂ. ) ಮತ್ತು M32 5G ಫೋನ್ (18,999 ರೂ.) ಆಕರ್ಷಕ ಡಿಸ್ಕೌಂಟ್​ನಲ್ಲಿ ಸಿಗುತ್ತಿದೆ. ಗ್ಯಾಲಕ್ಸಿ S20 FE ಈಗ ಕೇವಲ 36,990 ರೂ. ಗೆ ಮಾರಾಟ ಆಗುತ್ತಿದೆ.

ಅಮೆಜಾನ್‌ ಸೇಲ್‌ನಲ್ಲಿ ಐಕ್ಯೂ Z5 ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 23,990ರೂ.ಗಳಿಗೆ ಲಭ್ಯವಾಗಲಿದೆ. ಇದರ ಮೂಲಬೆಲೆ 29,990ರೂ ಆಗಿದ್ದು, 20% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದಲ್ಲದೆ ಅಮೆಜಾನ್ ಡಿಸ್ಕೌಂಟ್‌ ಕೂಪನ್‌ ಮೂಲಕ ಹೆಚ್ಚುವರಿಯಾಗಿ 2,000ರೂ.ಗಳ ರಿಯಾಯಿತಿ ಕೂಡ ದೊರೆಯಲಿದೆ. ಹಾಗೆಯೇ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 2,000ರೂ. ಆಫರ್‌ ಕೂಡ ದೊರೆಯಲಿದೆ. ಇದೆಲ್ಲದರ ಪರಣಾಮ ಈ ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 19,990ರೂ.ಗಳಿಗೆ ದೊರೆಯಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೇಲೆ 21,000 ರೂ.ಗಳವರೆಗೆ ಎಕ್ಸ್‌ಚೇಂಜ್‌ ಆಫರ್‌ ಕೂಡ ಲಭ್ಯವಿದೆ. ಇನ್ನು ನೋ ಕಾಸ್ಟ್‌ EMI ಆಯ್ಕೆಯ ಮೂಲಕ ಉಚಿತ ಸ್ಕ್ರೀನ್ ರಿಪ್ಲೇಸ್‌ಮೆಂಟ್‌ನ ಬಂಡಲ್ ಆಫರ್‌ಗಳನ್ನು ಪಡೆದುಕೊಳ್ಳ ಬಹುದಾಗಿದೆ.

ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 8% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ 39,999 ರೂ. ಬದಲಿಗೆ 36,999 ರೂ.ಬೆಲೆಗೆ ಲಭ್ಯವಾಗಲಿದೆ.  ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 27% ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ ಅನ್ನು ನೀವು ಇದೀಗ 12,959 ರೂ. ಬದಲಿಗೆ 9,499 ರೂ.ಗಳಿಗೆ ಖರೀದಿಸಬಹುದಾಗಿದೆ. ಅಂತೆಯೆ ಶವೋಮಿ ಕಂಪನಿಯ ರೆಡ್ಮಿ ನೋಟ್ 10S ಶೇ. 19 ರಷ್ಟು ರಿಯಾಯಿತಿ ಪಡೆದುಕೊಂಡಿದ್ದರೆ, ರೆಡ್ಮಿ ನೋಟ್ 10 ಪ್ರೊ ಶೇ. 14 ರಷ್ಟು ಡಿಸ್ಕೌಂಟ್​ನಲ್ಲಿ ಸಿಗುತ್ತಿದೆ. ರೆಡ್ಮಿ ನೋಟ್ 10 5G ಬೆಲೆ 13,999 ರೂ. ಗೆ ನಿಮ್ಮದಾಗಿಸಬಹುದು. ಎಂಐ 11X 5G ಕೇವಲ 27,999 ರೂ. ಗೆ ಸೇಲ್ ಕಾಣುತ್ತಿದೆ. ಈ ಎಲ್ಲ ಆಫರ್ ಇಂದು ಅಂತ್ಯ ಕಾಣಲಿದೆ.

Realme 9i: ಭಾರತದಲ್ಲಿ ರಿಯಲ್‌ಮಿ 9i ಸ್ಮಾರ್ಟ್​ಫೋನ್ ಬಿಡುಗಡ: ಬಜೆಟ್ ಪ್ರಿಯರು ಫುಲ್ ಫಿದಾ

ತಾಜಾ ಸುದ್ದಿ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ