AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon Great Freedom Sale: ಅಮೆಜಾನ್​ನಲ್ಲಿ ಬಂಪರ್ ಡಿಸ್ಕೌಂಟ್ ಮೇಳ: ನೀವು ಹೊಸ ಸ್ಮಾರ್ಟ್​ಫೋನ್ ಮೇಲೆ ಕಣ್ಣಿದ್ದರೆ ಇಲ್ಲಿ ನೋಡಿ

ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್​ನಲ್ಲಿ ಬಂಪರ್ ಡಿಸ್ಕೌಂಟ್​ಗೆ ಲಭ್ಯವಿರುವ ಸ್ಮಾರ್ಟ್​ಫೋನ್​ಗಳು ಯಾವುವು?, ಬೆಲೆ ಎಷ್ಟು? ಎಂಬುದನ್ನು ನೋಡೋಣ…

Amazon Great Freedom Sale: ಅಮೆಜಾನ್​ನಲ್ಲಿ ಬಂಪರ್ ಡಿಸ್ಕೌಂಟ್ ಮೇಳ: ನೀವು ಹೊಸ ಸ್ಮಾರ್ಟ್​ಫೋನ್ ಮೇಲೆ ಕಣ್ಣಿದ್ದರೆ ಇಲ್ಲಿ ನೋಡಿ
Amazon Great Freedom Sale
TV9 Web
| Updated By: Vinay Bhat|

Updated on: Aug 06, 2021 | 12:12 PM

Share

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ (Flipkart) ಮತ್ತು ಅಮೆಜಾನ್​ನಲ್ಲಿ (Amazon) ಬಂಪರ್ ಡಿಸ್ಕೌಂಟ್​ ಮೇಳ ಆರಂಭವಾಗಿದೆ. ಅದರಲ್ಲೂ ಅಮೆಜಾನ್​ನಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್​ನಲ್ಲಿ (Amazon Great Freedom Sale) ಸ್ಮಾರ್ಟ್‌ಫೋನ್‌, ಸ್ಮಾರ್ಟ್‌ ವಾಚ್, ಸ್ಮಾರ್ಟ್‌ ಟಿವಿ ಸೇರಿದಂತೆ ಹಲವು ಗ್ಯಾಟ್ಜೆಟ್ಸ್‌ಗಳು ಭರ್ಜರಿ ರಿಯಾಯಿತಿ ಲಭ್ಯವಾಗುತ್ತಿದೆ. ಮುಖ್ಯವಾಗಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಬಿಗ್ ಡಿಸ್ಕೌಂಟ್‌ನಿಂದ ಗ್ರಾಹಕರ ಗಮನ ಸೆಳೆದಿವೆ. ಈ ಮೇಳವು ಆಗಸ್ಟ್ 5ಕ್ಕೆ ಆರಂಭವಾಗಿದ್ದು, ಆಗಸ್ಟ್ 9ರ ವರೆಗೂ ಚಾಲ್ತಿಯಲ್ಲಿ ಇರಲಿವೆ.

ಹಾಗಾದ್ರೆ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್​ನಲ್ಲಿ ಬಂಪರ್ ಡಿಸ್ಕೌಂಟ್​ಗೆ ಲಭ್ಯವಿರುವ ಸ್ಮಾರ್ಟ್​ಫೋನ್​ಗಳು ಯಾವುವು?, ಬೆಲೆ ಎಷ್ಟು? ಎಂಬುದನ್ನು ನೋಡೋಣ…

ಎಂಐ 10i 5G: ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ಶವೋಮಿ ಕಂಪನಿಯ ಇತ್ತೀಚಿಗಿನ ಎಂಐ 10i 5G ಸ್ಮಾರ್ಟ್​ಫೋನ್ ಬಂಪರ್ ಡಿಸ್ಕೌಂಟ್​ನಲ್ಲಿ ಸಿಗುತ್ತಿದೆ. 6GB ಮತ್ತು 128GB ಸ್ಟೋರೇಜ್ ವೇರಿಯಂಟ್​ನ ಮೂಲಬೆಲೆ 24,999 ರೂ. ಆದರೆ, ಸದ್ಯ ಆಫರ್​ನಲ್ಲಿ 21,999 ರೂ. ಗೆ ಲಭ್ಯವಾಗುತ್ತಿದೆ. ಈ ಫೋನ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್ಡ್ರಾಗನ್ 750G ಪ್ರೊಸೆಸರ್ ಬಲವನ್ನು ಪಡೆದಿದ್ದು, 108 ಮೆಗಾಫಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್: ಶವೋಮಿಯ ಮತ್ತೊಂದು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ ಕೇವಲ 19,999 ರೂ. ಗೆ ಸಿಗುತ್ತಿದೆ. ಈ ಫೋನ್ ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 732 ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ

ಸ್ಯಾಮ್​ಸಂಗ್ ಗ್ಯಾಲಕ್ಸಿ M51: ಬಲಿಷ್ಠ ಬ್ಯಾಟರಿ ಬ್ಯಾಕ್ಅಪ್​ನಿಂದ ಗಮನ ಸೆಳೆದಿರುವ ಸ್ಯಾಮ್​ಸಂಗ್ ಗ್ಯಾಲಕ್ಸಿ M51 ಫೋನ್ ಸಹ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ 21,999 ರೂ.ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 7000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್​ ನಲ್ಲಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ A22 5G: ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಸ್ಯಾಮ್​ಸಂಗ್ ಗ್ಯಾಲಕ್ಸಿ A22 5G ಫೋನ್ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 6GB RAM ಮತ್ತು 128GB ಸ್ಟೋರೇಜ್ನ ವೇರಿಯಂಟ್ ಬೆಲೆಯು 19,999 ರೂ. ಆಗಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್​ನಿಂದ ಕೂಡಿದೆ.

ಭರ್ಜರಿ ಆಫರ್ ನೀಡಿದ BSNL: 4 ತಿಂಗಳ ವಾಲಿಡಿಟಿ, 240 ಜಿಬಿ ಉಚಿತ ಡೇಟಾ..!

WhatsApp: ವಾಟ್ಸ್​ಆ್ಯಪ್​ ಡೆಸ್ಕ್​ಟಾಪ್​ನಲ್ಲಿ ವಿಡಿಯೋ ಕರೆ ಮಾಡಲು ಈ ಸಿಂಪಲ್ ಟ್ರಿಕ್ ಫಾಲೋ ಮಾಡಿ

(Amazon Here is the Best Smartphone list on Amazon Great Freedom Sale Redmi Samsung Realme)

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ