ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ (Flipkart) ಮತ್ತು ಅಮೆಜಾನ್ನಲ್ಲಿ (Amazon) ಬಂಪರ್ ಡಿಸ್ಕೌಂಟ್ ಮೇಳ ಆರಂಭವಾಗಿದೆ. ಅದರಲ್ಲೂ ಅಮೆಜಾನ್ನಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ನಲ್ಲಿ (Amazon Great Freedom Sale) ಸ್ಮಾರ್ಟ್‌ಫೋನ್, ಸ್ಮಾರ್ಟ್ ವಾಚ್, ಸ್ಮಾರ್ಟ್ ಟಿವಿ ಸೇರಿದಂತೆ ಹಲವು ಗ್ಯಾಟ್ಜೆಟ್ಸ್‌ಗಳು ಭರ್ಜರಿ ರಿಯಾಯಿತಿ ಲಭ್ಯವಾಗುತ್ತಿದೆ. ಮುಖ್ಯವಾಗಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಬಿಗ್ ಡಿಸ್ಕೌಂಟ್‌ನಿಂದ ಗ್ರಾಹಕರ ಗಮನ ಸೆಳೆದಿವೆ. ಈ ಮೇಳವು ಆಗಸ್ಟ್ 5ಕ್ಕೆ ಆರಂಭವಾಗಿದ್ದು, ಆಗಸ್ಟ್ 9ರ ವರೆಗೂ ಚಾಲ್ತಿಯಲ್ಲಿ ಇರಲಿವೆ.
ಹಾಗಾದ್ರೆ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ನಲ್ಲಿ ಬಂಪರ್ ಡಿಸ್ಕೌಂಟ್ಗೆ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳು ಯಾವುವು?, ಬೆಲೆ ಎಷ್ಟು? ಎಂಬುದನ್ನು ನೋಡೋಣ…
ಎಂಐ 10i 5G: ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ಶವೋಮಿ ಕಂಪನಿಯ ಇತ್ತೀಚಿಗಿನ ಎಂಐ 10i 5G ಸ್ಮಾರ್ಟ್‌ಫೋನ್ ಬಂಪರ್ ಡಿಸ್ಕೌಂಟ್ನಲ್ಲಿ ಸಿಗುತ್ತಿದೆ. 6GB ಮತ್ತು 128GB ಸ್ಟೋರೇಜ್ ವೇರಿಯಂಟ್ನ ಮೂಲಬೆಲೆ 24,999 ರೂ. ಆದರೆ, ಸದ್ಯ ಆಫರ್ನಲ್ಲಿ 21,999 ರೂ. ಗೆ ಲಭ್ಯವಾಗುತ್ತಿದೆ. ಈ ಫೋನ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್ಡ್ರಾಗನ್ 750G ಪ್ರೊಸೆಸರ್ ಬಲವನ್ನು ಪಡೆದಿದ್ದು, 108 ಮೆಗಾಫಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್: ಶವೋಮಿಯ ಮತ್ತೊಂದು ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ ಕೇವಲ 19,999 ರೂ. ಗೆ ಸಿಗುತ್ತಿದೆ. ಈ ಫೋನ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್ಡ್ರಾಗನ್ 732 ಪ್ರೊಸೆಸರ್ ಬಲವನ್ನು ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ
ಸ್ಯಾಮ್ಸಂಗ್ ಗ್ಯಾಲಕ್ಸಿ M51: ಬಲಿಷ್ಠ ಬ್ಯಾಟರಿ ಬ್ಯಾಕ್ಅಪ್ನಿಂದ ಗಮನ ಸೆಳೆದಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ M51 ಫೋನ್ ಸಹ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ 21,999 ರೂ.ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 7000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ A22 5G: ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ A22 5G ಫೋನ್ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 6GB RAM ಮತ್ತು 128GB ಸ್ಟೋರೇಜ್ನ ವೇರಿಯಂಟ್ ಬೆಲೆಯು 19,999 ರೂ. ಆಗಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ನಿಂದ ಕೂಡಿದೆ.
ಭರ್ಜರಿ ಆಫರ್ ನೀಡಿದ BSNL: 4 ತಿಂಗಳ ವಾಲಿಡಿಟಿ, 240 ಜಿಬಿ ಉಚಿತ ಡೇಟಾ..!
WhatsApp: ವಾಟ್ಸ್ಆ್ಯಪ್ ಡೆಸ್ಕ್ಟಾಪ್ನಲ್ಲಿ ವಿಡಿಯೋ ಕರೆ ಮಾಡಲು ಈ ಸಿಂಪಲ್ ಟ್ರಿಕ್ ಫಾಲೋ ಮಾಡಿ
(Amazon Here is the Best Smartphone list on Amazon Great Freedom Sale Redmi Samsung Realme)