Amazon: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಘೋಷಣೆ: ಈ ಬಾರಿ ಏನು ಆಫರ್?, ಎಷ್ಟು ಡಿಸ್ಕೌಂಟ್

Amazon Great Indian Festival sale 2022: ಅಮೆಜಾನ್‌ ಕೂಡ ತನ್ನ ವಾರ್ಷಿಕ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಆರಂಭಿಸುವುದಾಗಿ ಘೋಷಿಸಿದೆ. ಖಚಿತ ದಿನಾಂಕವನ್ನು ಅಮೆಜಾನ್ ಇನ್ನೂ ಬಹಿರಂಗ ಪಡಿಸಿಲ್ಲ

Amazon: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಘೋಷಣೆ: ಈ ಬಾರಿ ಏನು ಆಫರ್?, ಎಷ್ಟು ಡಿಸ್ಕೌಂಟ್
Amazon Great Indian Festival sale
Follow us
TV9 Web
| Updated By: Vinay Bhat

Updated on: Sep 07, 2022 | 6:19 AM

ಆನ್​ಲೈನ್ ಇ ಕಾಮರ್ಸ್​ ತಾಣಗಳನ್ನು ಹೆಚ್ಚಾಗಿ ಬಳಸುವ ಬಳಕೆದಾರರಿಗೆ ಭರ್ಜರಿ ಸುದ್ದಿಯೊಂದು ಹೊರಬಿದ್ದಿದೆ. ಫ್ಲಿಪ್​ಕಾರ್ಟ್​ (Flipkart) ತನ್ನ ಬಿಗ್ ಬಿಲಿಯನ್ ಡೇ ಸೇಲ್ ಆಯೋಜನೆ ಮಾಡುವ ಬಗ್ಗೆ ತಿಳಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಮುಖ ಇಕಾಮರ್ಸ್ ತಾಣ ಅಮೆಜಾನ್‌ (Amazon) ಕೂಡ ತನ್ನ ವಾರ್ಷಿಕ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ (Amazon Great Indian Festival sale) ಆರಂಭಿಸುವುದಾಗಿ ಘೋಷಿಸಿದೆ. ಖಚಿತ ದಿನಾಂಕವನ್ನು ಅಮೆಜಾನ್ ಇನ್ನೂ ಬಹಿರಂಗ ಪಡಿಸಿಲ್ಲ. ಮೂಲಗಳ ಪ್ರಕಾರ ಅಕ್ಟೋಬರ್ 4 ರಂದು ಆರಂಭವಾಗಲಿದೆ ಎಂದು ಹೇಳಲಾಗಿದೆ. ಹಬ್ಬದ ಸಂದರ್ಭದಲ್ಲಿ ಈ ಸೇಲ್‌ ಹೆಚ್ಚು ಆಕರ್ಷಕ ಎನಿಸಲಿದ್ದು, ಎಲ್ಲ ಬಗೆಯ ಉತ್ಪನ್ನಗಳಿಗೆ ಭರ್ಜರಿ ಡಿಸ್ಕೌಂಟ್‌ ಸಿಗಲಿದೆ.

ಈ ಸೇಲ್‌ನಲ್ಲಿ ಹಲವು ಗ್ಯಾಜೆಟ್ಸ್‌ಗಳು, ಸ್ಮಾರ್ಟ್‌ ಡಿವೈಸ್‌ಗಳ ಮೇಲೆ ಹೆಚ್ಚಿನ ಡಿಸ್ಕೌಂಟ್‌ ದೊರೆಯಲಿದೆ. ಇದರಲ್ಲಿ ಕ್ಯಾಶ್‌ಬ್ಯಾಕ್‌ ಮತ್ತು ಎಕ್ಸ್‌ಚೇಂಜ್‌ ಆಫರ್‌ಗಳು, ನೋ ಕಾಸ್ಟ್‌ ಇಎಂಐ ಆಫರ್‌ಗಳು ಸೇರಿದಂತೆ ಹಲವು ರೀತಿಯಲ್ಲಿ ರಿಯಾಯಿತಿ ಪಡೆಯಬಹುದು. ಜೊತೆಗೆ ಕೆಲವು ಬ್ಯಾಂಕ್​ಗಳು ಕೂಡ ಕೈಜೋಡಿಸಿದ್ದು, ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳೊಂದಿಗೆ ಗ್ರಾಹಕರು ಹೆಚ್ಚುವರಿ ತ್ವರಿತ ರಿಯಾಯಿತಿಯನ್ನು ನೀಡಲು ಅಮೆಜಾನ್‌ನೊಂದಿಗೆ ಪಾಲುದಾರಿಕೆ ಹೊಂದಿದೆ.

ಈ ಬಾರಿಯ ಸೇಲ್​ನಲ್ಲಿ ಎಸ್​ಬಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 10% ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅಲ್ಲದೆ ಅಮೆಜಾನ್‌ನಲ್ಲಿ ಮೊದಲ ಬಾರಿಗೆ ಶಾಪಿಂಗ್ ಮಾಡುವವರು 10% ಪ್ಲಾಟ್‌ ಕ್ಯಾಶ್‌ಬ್ಯಾಕ್‌ ಆಫರ್‌ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ. ಪ್ರತಿಬಾರಿಯಂತೆ ಈ ಬಾರಿ ಕೂಡ ಪ್ರೈಮ್ ಸದಸ್ಯರಿಗೆ ಆರಂಭಿಕ ಪ್ರವೇಶ ಕೂಡ ದೊರೆಯಲಿದೆ.

ಇದನ್ನೂ ಓದಿ
Image
Redmi A1: ಶವೋಮಿಯಿಂದ ಊಹಿಸಲಾದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 ಬಿಡುಗಡೆ
Image
Realme C33: 50MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 9,000 ರೂ. ಗೆ ರಿಲೀಸ್ ಆಯ್ತು ಹೊಸ ಸ್ಮಾರ್ಟ್​ಫೋನ್
Image
ನಿಮ್ಮ ಧ್ವನಿಯಿಂದ ಕೋವಿಡ್-19 ಸೋಂಕನ್ನು ನಿಖರವಾಗಿ ಪತ್ತೆ ಮಾಡುತ್ತ ಈ ಸ್ಮಾರ್ಟ್​ಫೋನ್ ಆ್ಯಪ್
Image
Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್

ಇನ್ನು ಈ ಸೇಲ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳು ಲಾಂಚ್‌ ಆಗಲಿವೆ ಎಂದು ಹೇಳಲಾಗಿದೆ. ಲಾಂಚ್‌ ಆಫರ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಬೆಲೆಯಲ್ಲಿ ಖರೀದಿಸುವುದಕ್ಕೆ ನಿಮಗೆ ಅವಕಾಶ ಸಿಗಲಿದೆ. ಹಾಗೆಯೇ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಉತ್ತಮ ರಿಯಾಯಿತಿ ದೊರೆಯಲಿದೆ ಎಂದು ಅಂದಾಜಿಸಲಾಗಿದೆ.

ಪ್ರಸಿದ್ಧ ಐಕ್ಯೂ, ಒನ್‌ಪ್ಲಸ್‌, ಶವೋಮಿ ಮತ್ತು ರಿಯಲ್‌ ಮಿ ಬ್ರ್ಯಾಂಡ್‌ಗಳ ಫೋನ್‌ಗಳು ಭರ್ಜರಿ ಡಿಸ್ಕೌಂಟ್​ನಲ್ಲಿ ಖರೀದಿಗೆ ಸಿಗಲಿದೆಯಂತೆ. ಇದಲ್ಲದೆ ಹೆಚ್ಚುವರಿಯಾಗಿ ಅಮೆಜಾನ್ ತಾಣದಲ್ಲಿ 60 ಕ್ಕೂ ಹೆಚ್ಚು ಹೊಸ ಡಿವೈಸ್‌ಗಳು ಲಾಂಚ್‌ ಆಗಲಿದೆ ಎನ್ನಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್ ಪರಿಕರಗಳು, ಸ್ಮಾರ್ಟ್ ವಾಚ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಸ್ಮಾರ್ಟ್ ಟಿವಿಗಳು ಸೇರಿದಂತೆ ಗೃಹೋಪಯೋಗಿ ಉಪಕರಣಗಳ ಮೇಲೆ ರಿಯಾಯಿತಿಗಳು ದೊರೆಯಲಿವೆ.

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಸಮಯದಲ್ಲಿ ಸ್ಮಾರ್ಟ್ ಟಿವಿಗಳು ಮತ್ತು ಇತರ ಗೃಹೋಪಯೋಗಿ ಉಪಕರಣಗಳಂತಹ ಉತ್ಪನ್ನಗಳು ಭಾರೀ ರಿಯಾಯಿತಿಯೊಂದಿಗೆ ದೊರೆಯಲಿದ್ದು, ವಿವಿಧ ಎಲೆಕ್ಟ್ರಾನಿಕ್ಸ್ ಪರಿಕರಗಳು ಶೇ. 40 ರಷ್ಟು ರಿಯಾಯಿತಿಯೊಂದಿಗೆ ಲಭ್ಯವಿರುತ್ತವೆ ಎಂದು ಹೇಳಲಾಗಿದೆ. ಈ ಮಾರಾಟದ ಸಮಯದಲ್ಲಿ ವಿಶೇಷ ಬಿಡುಗಡೆಗಳೊಂದಿಗೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಲ್ಲಿ ಎಕೋ, ಕಿಂಡಲ್ ಮತ್ತು ಫೈರ್ ಟಿವಿಯಂತಹ ಶ್ರೇಣಿಯ ಮೇಲೆ ದರ ಕಡಿತ ಮತ್ತು ರಿಯಾಯಿತಿ ಬೆಲೆಯಲ್ಲಿ ಖರೀದಿಸುವ ಅವಕಾಶ ಕಲ್ಪಿಸಲಾಗುತ್ತಿದೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ