Amazon Mobile Savings Days Sale: ಅಮೆಜಾನ್​ನಲ್ಲಿ ಹೊಸ ಹೊಸ ಸ್ಮಾರ್ಟ್​ಫೋನ್​ಗಳ ಮೇಲೆ ಬಂಪರ್ ಡಿಸ್ಕೌಂಟ್

Mobile Savings Days: ಅಮೆಜಾನ್‌ ಮೊಬೈಲ್‌ ಸೇವಿಂಗ್‌ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಬಂಪರ್ ರಿಯಾಯಿತಿ ದರದಲ್ಲಿ ಸಿಗುತ್ತಿದೆ ಎಂಬುದನ್ನು ನೋಡುವುದಾದರೆ…

Amazon Mobile Savings Days Sale: ಅಮೆಜಾನ್​ನಲ್ಲಿ ಹೊಸ ಹೊಸ ಸ್ಮಾರ್ಟ್​ಫೋನ್​ಗಳ ಮೇಲೆ ಬಂಪರ್ ಡಿಸ್ಕೌಂಟ್
Amazon Mobile Savings Days Sale
Follow us
TV9 Web
| Updated By: Vinay Bhat

Updated on: Aug 17, 2021 | 3:19 PM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ (Amazon) ಇತ್ತೀಚೆಗಷ್ಟೆ ಪ್ರೈಮ್ ಡೇ ಸೇಲ್ ಹಮ್ಮಿಕೊಂಡು ದೊಡ್ಡ ಯಶಸ್ಸು ಕಂಡಿತ್ತು. ಸದ್ಯ ಇದರ ಬೆನ್ನಲ್ಲೆ ಅಮೆಜಾನ್​ ಮೊಬೈಲ್ ಸೇವಿಂಗ್ ಡೇಸ್ (Mobile Savings Days Sale) ಹಮ್ಮಿಕೊಂಡಿದೆ. ಆಗಸ್ಟ್ 16ಕ್ಕೆ ಈ ಮೇಳ ಪ್ರಾರಂಭವಾಗಿದ್ದು ಆಗಸ್ಟ್ 19 ರವರೆಗೆ ನಡೆಯಲಿದೆ. ಸ್ಮಾರ್ಟ್​ಫೋನ್ ಪ್ರಿಯರು ಹೊಸ ಫೋನ್ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸುವ ಪ್ಲಾನ್​ನಲ್ಲಿದ್ದರೆ ಇದು ಉತ್ತಮ ಸಮಯ. ಫೋನುಗಳ ಮೇಲೆ ಶೇ. 40ರಷ್ಟು ರಿಯಾಯಿತಿ ನೀಡುತ್ತಿದೆ. ಗ್ರಾಹಕರು ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್​ಗಳು, ಎಕ್ಸ್​ಚೇಂಜ್ ಆಫರ್​ಗಳು, ನೋ-ಕಾಸ್ಟ್ ಇಎಂಐ ಆಯ್ಕೆಯಲ್ಲೂ ಖರೀದಿಸುವ ಅವಕಾಶ ನೀಡಲಾಗಿದೆ.

ಅಮೆಜಾನ್‌ ಮೊಬೈಲ್‌ ಸೇವಿಂಗ್‌ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಬಂಪರ್ ರಿಯಾಯಿತಿ ದರದಲ್ಲಿ ಸಿಗುತ್ತಿದೆ ಎಂಬುದನ್ನು ನೋಡುವುದಾದರೆ…

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್: ಭಾರತದಲ್ಲಿ ಭರ್ಜರಿ ಸೇಲ್ ಕಾಣುತ್ತಿರುವ 108 ಮೆಗಾಫಿಕ್ಸೆಲ್​ನ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ 6GB RAM ಮತ್ತು 128GB ಸ್ಟೋರೆಜ್ ಮಾದರಿಯನ್ನು 19,999 ರೂ.ಗೆ ಮಾರಾಟ ಮಾಡುತ್ತಿದೆ. 6.67-ಇಂಚಿನ ಫುಲ್-ಎಚ್ಡಿ+ ಡಿಸ್ಪ್ಲೇಯೊಂದಿಗೆ 120Hz ರಿಫ್ರೆಶ್ ರೇಟ್ ಹೊಂದಿದೆ. ಜತೆಗೆ ಕ್ವಾಡ್ ರಿಯರ್ ಕ್ಯಾಮೆರಾಗಳನ್ನು ಅಳವಡಿಸಿದೆ. ಹಿಂದಿನ ಕ್ಯಾಮೆರಾ ಸೆಟಪ್ 108 ಮೆಗಾಪಿಕ್ಸೆಲ್ ಶೂಟರ್ ಅನ್ನು ಹೊಂದಿದ್ದು, 5,020mAh ಬ್ಯಾಟರಿ ಆನ್​ಬೋರ್ಡ್​ನಲ್ಲಿ 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ. HDFC ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ 1500 ರೂ ರಿಯಾಯಿತಿ ನೀಡಲಾಗಿದೆ.

ಇದರ ಜೊತೆಗೆ ಎಂಐ X11 ಸ್ಮಾರ್ಟ್‌ಫೋನ್‌ ಅನ್ನು ಎಕ್ಸಚೇಂಜ್‌ ಆಫರ್‌ನಲ್ಲಿ 5,000 ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ರೆಡ್ಮಿ ನೋಟ್ 10 ಸರಣಿಯನ್ನು ಹೆಚ್ಚಿನ ಬ್ಯಾಂಕ್ ಕೊಡುಗೆಗಳೊಂದಿಗೆ ಪಟ್ಟಿ ಮಾಡಲಾಗಿದೆ. ಶವೋಮಿ ಸ್ಮಾರ್ಟ್‌ಫೋನ್‌ಗಳು 18 ತಿಂಗಳವರೆಗೆ ಯಾವುದೇ ವೆಚ್ಚವಿಲ್ಲದ EMI ಆಯ್ಕೆಗಳನ್ನು ನೋಡುತ್ತವೆ.

iQoo Z3 5G: ಅಮೆಜಾನ್​ ಮೊಬೈಲ್ ಸೇವಿಂಗ್ ಡೇಸ್​ನಲ್ಲಿ ಈ ಸ್ಮಾರ್ಟ್​ಫೊನಿನ​ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯು ಕೇವಲ 19,990 ರೂ.ಗೆ ಮಾರಾಟ ಮಾಡುತ್ತಿದೆ. ಇದರಲ್ಲಿ ಕ್ವಾಲ್ಕ್ಯಾಮ್ ಸ್ನಾಪ್ಡ್ರಾಗನ್ 768G SoC ಪ್ರೊಸೆಸರ್ ಇದ್ದು 6.58-ಇಂಚಿನ ಪೂರ್ಣ-HD+ LCD ಡಿಸ್ಪ್ಲೇಯನ್ನು 120Hz ರಿಫ್ರೆಶ್ ದರ ಹೊಂದಿದೆ. ಹಿಂಭಾಗದಲ್ಲಿ 64-ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ, ಮತ್ತು 4,400mAh ಬ್ಯಾಟರಿಯನ್ನು ಅಳವಡಿಸಲಾಗಿದೆ. 55W ಫಾಸ್ಟ್ ಚಾರ್ಜಿಂಗ್​ಗೆ ಬೆಂಬಲವನ್ನು ನೀಡುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಸ್ಮಾರ್ಟ್‌ಫೋನ್‌ ಕೂಡ ಹೆಚ್ಚಿನ ರಿಯಾಯಿತಿ ಪಡೆದುಕೊಂಡಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M31, ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಖರೀದಿದಾರರು ಆರು ತಿಂಗಳವರೆಗೆ ಯಾವುದೇ ವೆಚ್ಚವಿಲ್ಲದ EMI ಆಯ್ಕೆಗಳನ್ನು ಪಡೆಯಬಹುದು. ಪ್ರೈಮ್ ಗ್ರಾಹಕರು ಹೆಚ್ಚುವರಿಯಾಗಿ ಒಂಬತ್ತು ತಿಂಗಳವರೆಗೆ ಯಾವುದೇ ವೆಚ್ಚವಿಲ್ಲದ EMI ಆಯ್ಕೆಗಳನ್ನು ಮತ್ತು ಆರು ತಿಂಗಳ ಉಚಿತ ಸ್ಕ್ರೀನ್ ಬದಲಿ ಪಡೆಯುತ್ತಾರೆ. ಅಮೆಜಾನ್ ರಿಯಲ್‌ಮಿ ಎಕ್ಸ್ 7, ಐಕ್ಯೂ 7 ಮತ್ತು ಐಫೋನ್ ಎಕ್ಸ್‌ಆರ್ ಅನ್ನು ಬ್ಯಾಂಕ್ ಕೊಡುಗೆಗಳ ಮೂಲಕ 10 ಪ್ರತಿಶತದಷ್ಟು ತ್ವರಿತ ರಿಯಾಯಿತಿಯೊಂದಿಗೆ ಪಟ್ಟಿ ಮಾಡಿದೆ.

Oppo F19: ಒಪ್ಪೊ F19 ಅಲ್ಟ್ರಾ-ಸ್ಲೀಕ್ ಬಾಡಿಯೊಂದಿಗೆ ಬರುತ್ತದೆ ಮತ್ತು 6.43 ಇಂಚಿನ ಫುಲ್-ಎಚ್ಡಿ+ ಅಮೊಲ್ಡ್ ಡಿಸ್ಪ್ಲೇ ಒಳಗೊಂಡಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಹೊಂದಿರುವ ಈ ಸ್ಮಾರ್ಟ್​ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ 48 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು ನೀಡಲಾಗಿದೆ. ಅಮೆಜಾನ್​ನಲ್ಲಿ 6GB RAM ಮತ್ತು 128GB ಆಯ್ಕೆಯ ಬೆಲೆ 18,990 ರೂ. ಇನ್ನೂ HDFC ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ರೂ. 2,000 ಮೌಲ್ಯದ ರಿಯಾಯಿತಿ ಘೋಷಿಸಲಾಗಿದೆ.

Motorola Edge 20: ಮಾರುಕಟ್ಟೆಗೆ 108MP ಕ್ಯಾಮೆರಾದ ಮತ್ತೊಂದು ಹೊಸ ಸ್ಮಾರ್ಟ್​ಫೋನ್: ಬೆಲೆ ಕೇವಲ 22,999 ರೂ.

Galaxy Z Fold 3: ಸ್ಯಾಮ್​ಸಂಗ್​ನಿಂದ ಅಂಡರ್‌ ಡಿಸ್‌ಪ್ಲೇ ಇರುವ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?

(Amazon Mobile Savings Days Sale 2021 Check BEST deals and discounts on Samsung Xiaomi Oppo Mi Redmi Smartphones)

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್