AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon: ಪ್ರೈಮ್ ಡೇ ಸೇಲ್ ಮುಗಿದರೂ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿದೆ ರೆಡ್ಮಿಯ ಈ ಸ್ಮಾರ್ಟ್​ಫೋನ್

Amazon Mobile Savings Days: ಪ್ರಮುಖವಾಗಿ ಶವೋಮಿ ಕಂಪೆನಿಯ ರೆಡ್ಮಿ ನೋಟ್ 10S ಸ್ಮಾರ್ಟ್​ಫೋನ್ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಈ ಫೋನಿನ ಮೂಲಬೆಲೆ 16,999 ರೂ. ಆಗಿದೆ. ಆದರೆ,

Amazon: ಪ್ರೈಮ್ ಡೇ ಸೇಲ್ ಮುಗಿದರೂ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿದೆ ರೆಡ್ಮಿಯ ಈ ಸ್ಮಾರ್ಟ್​ಫೋನ್
Redmi Note 10s
TV9 Web
| Updated By: Vinay Bhat|

Updated on: Jul 28, 2021 | 1:43 PM

Share

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ ಇಂಡಿಯಾದಲ್ಲಿ ನಡೆದ ಪ್ರೈಮ್ ಡೇ ಸೇಲ್ ಮಂಗಳವಾರ ಅಂತ್ಯಕಂಡಿದೆ. ಈ ಸೇಲ್​ನಲ್ಲಿ ಸ್ಮಾರ್ಟ್​ಫೋನ್​ಗಳು ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್‌ ಪ್ರಾಡಕ್ಟ್​ಗಳನ್ನು ಬಂಪರ್ ಡಿಸ್ಕೌಂಟ್​ನಲ್ಲಿ ನೀಡಲಾಗಿತ್ತು. ಇದರ ಬೆನ್ನಲ್ಲೆ ಸದ್ಯ ಅಮೆಜಾನ್​ನಲ್ಲಿ ಮೊಬೈಲ್ ಸೇವಿಂಗ್ ಡೇಸ್ ಆರಂಭವಾಗಿದೆ. ಇಂದು ಜುಲೈ 28ಕ್ಕೆ ಈ ಮೇಳ ಆರಂಭವಾಗಿದ್ದು ಜುಲೈ 29ಕ್ಕೆ ಅಂತ್ಯಗೊಳ್ಳಲಿದೆ. ಇದರಲ್ಲಿ ಸ್ಮಾರ್ಟ್​ಫೋನುಗಳು ಭರ್ಜರಿ ರಿಯಾಯಿತಿ ದರದಲ್ಲಿ ಸಿಗುತ್ತಿದೆ.

ಪ್ರಮುಖವಾಗಿ ಶವೋಮಿ ಕಂಪೆನಿಯ ರೆಡ್ಮಿ ನೋಟ್ 10S ಸ್ಮಾರ್ಟ್​ಫೋನ್ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಈ ಫೋನಿನ ಮೂಲಬೆಲೆ 16,999 ರೂ. ಆಗಿದೆ. ಆದರೆ, ಸದ್ಯ ಮೊಬೈಲ್ ಸೇವಿಂಗ್ ಡೇಸ್ ಪ್ರಯುಕ್ತ 2000 ರೂ. ಡಿಸ್ಕೌಂಟ್​ನಲ್ಲಿ ಇದು 14,999 ರೂ. ಗೆ ಲಭ್ಯವಿದೆ. ಇದರ ಜೊತೆಗೆ ಬರೋಬ್ಬರಿ 14,000 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ.

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಿಂದ ಕೂಡಿದೆ.

ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್‌,2.2 ಅಪರ್ಚರ್ ಮತ್ತು 118 ಡಿಗ್ರಿ ಫೀಲ್ಡ್-ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರಲಿದೆ.

ಇನ್ನೂ ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಅಂತೆಯೆ ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ ಮತ್ತು ಎಐ ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

Airtel: ಪ್ರತಿದಿನ 3GB ಡೇಟಾ: ಕಡಿಮೆ ಬೆಲೆಯ ಏರ್ಟೆಲ್​ನ ಈ ಯೋಜನೆ ಗಮನಿಸಿ

Nokia XR20: ಮತ್ತೆರಡು ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ನೋಕಿಯಾ: ಏನಿದರ ವಿಶೇಷ, ಬೆಲೆ ಎಷ್ಟು?

(Amazon Mobile Savings Days started Redmi Note 10 series smartphone available with offer big discounts)

ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ