Amazon: 6000mAh ಬ್ಯಾಟರಿ, 50MP ಕ್ಯಾಮೆರಾ: ಕೇವಲ 10,499 ರೂ. ಗೆ ಮಾರಾಟ ಆಗುತ್ತಿದೆ ಈ ಫೋನ್

ಗ್ಯಾಲಕ್ಸಿ M13 4G ಸ್ಮಾರ್ಟ್​​ಫೋನ್ ಒಟ್ಟು ಎರಡು ಮಾದರಿಯಲ್ಲಿ ರಿಲೀಸ್ ಆಗಿತ್ತು. ಇದರ 4GB + 64GB ಸ್ಟೋರೆಜ್ ಮಾದರಿಗೆ 14,999 ರೂ. ಇತ್ತು. ಆದರೀಗ ಅಮೆಜಾನ್​ನಲ್ಲಿ ಈ ಫೋನ್ ಕೇವಲ 10,499 ರೂ. ಗೆ ಸೇಲ್ ಕಾಣುತ್ತಿದೆ.

Amazon: 6000mAh ಬ್ಯಾಟರಿ, 50MP ಕ್ಯಾಮೆರಾ: ಕೇವಲ 10,499 ರೂ. ಗೆ ಮಾರಾಟ ಆಗುತ್ತಿದೆ ಈ ಫೋನ್
Samsung Galaxy M13
Follow us
| Updated By: Vinay Bhat

Updated on: Oct 30, 2022 | 6:14 AM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಅನೇಕ ಹೊಚ್ಚ ಹೊಸ ಸ್ಮಾರ್ಟ್​ಫೋನ್​ಗಳು ಬಂಪರ್ ಡಿಸ್ಕೌಂಟ್​ಗೆ ಮಾರಾಟ ಆಗುತ್ತಿದೆ. ಇದರಲ್ಲಿ ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ ಎಮ್​13 (Samsung Galaxy M13) ಸ್ಮಾರ್ಟ್​​ಫೋನ್ ಕೂಡ ಇದೆ. ಇದು 4G ಮತ್ತು 5G ಎರಡು ಆವೃತ್ತಿಯಲ್ಲಿ ಕಳೆದ ಜುಲೈನಲ್ಲಿ ಅನಾವರಣಗೊಂಡಿತ್ತು. ಇದರಲ್ಲಿ ಗ್ಯಾಲಕ್ಸಿ M13 4G (Galaxy M13 4G) ಫೋನ್ ಭರ್ಜರಿ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ. 4ಜಿ ಆವೃತ್ತಿಯ ಫೋನ್​ನಲ್ಲಿ ಬರೋಬ್ಬರಿ 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಆಕರ್ಷಕ ಕ್ಯಾಮೆರಾ ಕೂಡ ಇದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಫೀಚರ್ಸ್​ ಏನು?, ಆಫರ್ ಏನಿದೆ? ಎಂಬುದನ್ನು ನೋಡೋಣ.

ಗ್ಯಾಲಕ್ಸಿ M13 4G ಸ್ಮಾರ್ಟ್​​ಫೋನ್ ಒಟ್ಟು ಎರಡು ಮಾದರಿಯಲ್ಲಿ ರಿಲೀಸ್ ಆಗಿತ್ತು. ಇದರ 4GB + 64GB ಸ್ಟೋರೆಜ್ ಮಾದರಿಗೆ 14,999 ರೂ. ಇತ್ತು. ಆದರೀಗ ಅಮೆಜಾನ್​ನಲ್ಲಿ ಈ ಫೋನ್ ಕೇವಲ 10,499 ರೂ. ಗೆ ಸೇಲ್ ಕಾಣುತ್ತಿದೆ. ಜೊತೆಗೆ 9,600 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ.

ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್​ಸಿಡಿ ಡಿಸ್​ ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್​ ಬ್ರೈಟ್​ನೆಸ್​ ಅನ್ನು ನೀಡುತ್ತದೆ. ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ಕೂಡ ಇದೆ. ಎಕ್ಸಿನೋಸ್ 850 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಅನ್ನು ಒನ್​ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ
Image
Flipkart: ಶಾಪಿಂಗ್ ಪ್ರಿಯರಿಗೆ ಶಾಕಿಂಗ್ ಸುದ್ದಿ: ಫ್ಲಿಪ್​ಕಾರ್ಟ್ ಕ್ಯಾಶ್ ಆನ್ ಡೆಲಿವರಿ ಆಯ್ಕೆಯಲ್ಲಿ ಭಾರೀ ದೊಡ್ಡ ಬದಲಾವಣೆ
Image
ತಪ್ಪು ಮಾಹಿತಿ ಹರಡುವಿಕೆ ವಿರುದ್ಧ ಹೊಸ ಐಟಿ ಕಾನೂನು ಪರಿಣಾಮಕಾರಿ: ರಾಜೀವ್ ಚಂದ್ರಶೇಖರ್
Image
Apple Watch 8: ಕಾರು ಚಾಲಕನ ಪ್ರಾಣ ಉಳಿಸಿದ ಆ್ಯಪಲ್ ವಾಚ್ 8 ಸರಣಿ: ಇದು ಹೇಗೆ ಸಾಧ್ಯವಾಯಿತು ನೋಡಿ
Image
Oppo A Series: ಧೂಳೆಬ್ಬಿಸುತ್ತಿದೆ ಒಪ್ಪೋ ಸಂಸ್ಥೆಯ ಹೊಸ ಸ್ಮಾರ್ಟ್​ಫೋನ್: 108MP ಕ್ಯಾಮೆರಾ ಫೋನುಗಳಿಗೆ ಶುರುವಾಯ್ತು ನಡುಕ

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ–ವೈಡ್ ಲೆನ್ಸ್‌ ಹೊಂದಿದ್ದು, 120 ಡಿಗ್ರಿಗಳ ಫೀಲ್ಡ್ ಆಫ್ ವ್ಯೂ ನೀಡಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, ಸ್ಯಾಮ್​ಸಂಗ್ ನಾಕ್ಸ್ ಸೆಕ್ಯೂರಿಟಿ ಜೊತೆಗೆ ಫಿಂಗರ್‌ಪ್ರಿಂಟ್ ಸೆನ್ಸಾರ್‌ ನೀಡಲಾಗಿದೆ.

ಇನ್ನು ಗ್ಯಾಲಕ್ಸಿ M13 5G ಸ್ಮಾರ್ಟ್​​ಫೋನ್ ಕೂಡ ಬಂಪರ್ ಆಫರ್​ನಲ್ಲಿ ಕಾಣಿಸಿಕೊಂಡಿದೆ. ಇದರ 4GB + 64GB ಸ್ಟೋರೆಜ್ ಮಾದರಿಗೆ 16,999 ರೂ. ಇದೆ. ಆದರೀಗ ಡಿಸ್ಕೌಂಟ್​ನಲ್ಲಿ ಇದನ್ನು ಕೇವಲ 13,999 ರೂ. ಗೆ ನಿಮ್ಮದಾಗಿಸಬಹುದು. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್​ಸಿಡಿ ಡಿಸ್​ ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ನೀಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಲ್ಲಿದ್ದರೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಇದೆ. ಅಂತೆಯೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ