ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಇಂಡಿಯಾದಲ್ಲಿ ಪ್ರೈಮ್ ಡೇ ಸೇಲ್ (Amazon Prime Day) ನಡೆಯುತ್ತಿದ್ದು ಇಂದು ಕೊನೆಯ ದಿನವಾಗಿದೆ. ಬಂಪರ್ ಡಿಸ್ಕೌಂಟ್ನಲ್ಲಿ ಅನೇಕ ಪ್ರಾಡಕ್ಟ್ಗಳು ಮಾರಾಟವಾಗುತ್ತಿದೆ. ಅದರಲ್ಲೂ ಆಕರ್ಷಕ ಸ್ಮಾರ್ಟ್ಫೋನ್ಗಳು ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿದೆ. ಸಾಕಷ್ಟು ಜನರು ಅನೇಕ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ನೀವೆಲ್ಲಾದರು ಹೊಸ ಸ್ಮಾರ್ಟ್‌ಫೋನ್ (Smartphone) ಖರೀದಿ ಮಾಡಬೇಕು ಎಂಬ ಯೋಚನೆಯಲ್ಲಿದ್ದರೆ ಇದಕ್ಕಿಂತ ಒಳ್ಳೆಯ ಸಮಯ ಮತ್ತೆ ಬರಲು ಸಾಧ್ಯವಿಲ್ಲ.
ಹೌದು, ಅಮೆಜಾನ್ ಪ್ರೈಮ್ ಡೇ ಸೇಲ್ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಬರೋಬ್ಬರಿ 9,000 ರೂ. ತನಕ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಪ್ರಮುಖವಾಗಿ ಸ್ಯಾಮ್ಸಂಗ್ನ ಗ್ಯಾಲಕ್ಸಿ M51 ಫೋನ್ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಸಿಗುತ್ತಿದೆ.
ಸ್ಯಾಮ್ಸಂಗ್ನ ಗ್ಯಾಲಕ್ಸಿ M51 ಸ್ಮಾರ್ಟ್ಫೋನಿನ ಮೂಲಬೆಲೆ 28,999 ರೂ. ಆಗಿದೆ. ಆದರೆ ಪ್ರೈಮ್ ಡೇ ಪ್ರಯುಕ್ತ ಇಂದು ಮಾತ್ರ ಇದು ಕೇವಲ 19,999 ರೂ. ಗೆ ಲಭ್ಯವಾಗುತ್ತಿದೆ. ಇದರ ಜೊತೆಗೆ 18,700 ರೂ. ವರೆಗೆ ಎಕ್ಸ್ಚೇಂಜ್ ಆಫರ್ ಕೂಡ ನೀಡಲಾಗಿದೆ. 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯದ ಫೋನ್ 19,999 ರೂ. ಗೆ ಸಿಗುತ್ತಿದ್ದರೆ, 8GB RAM ಮತ್ತು 128GB ಸ್ಟೋರೆಜ್ನ ಬೆಲೆ 21,999 ರೂ. ನಿಗದಿ ಮಾಡಲಾಗಿದೆ.
ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಸೂಪರ್ AMOLED ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಒನ್UI ಜೊತೆ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಈ ಸ್ಮಾರ್ಟ್‌ಫೋನ್ ಬರೋಬ್ಬರಿ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಕ್ವಿಕ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್ ಮೌಂಟ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಆಂಡ್ರಾಯ್ಡ್ 10 ಓಎಸ್, 4G VoLTE, ವೈಫೈ, ಬ್ಲೂಟೂತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಪ್ರಮುಖ ಫೀಚರ್ಸ್‌ಗಳಿಂದ ಕೂಡಿದೆ.
Poco F3 GT: ಪೊಕೊ 8 ಜಿಬಿ + 256 ಸ್ಟೊರೇಜ್ ಸ್ಮಾರ್ಟ್‌ಫೋನ್: ಕಡಿಮೆ ಬೆಲೆಗೆ ಆಕರ್ಷಕ ಮೊಬೈಲ್