Amazon Prime Day Sale 2021: ರೆಡ್ಮಿ ನೋಟ್ 10T 5G ಫಸ್ಟ್ ಸೇಲ್: ಪ್ರೈಮ್ ಡೇ ಪ್ರಯುಕ್ತ ಬಂಪರ್ ಆಫರ್
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸದ್ಯ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಫೋನುಗಳ ಪೈಕಿ Redmi Note 10T 5G ಒಂದಾಗಿದೆ.
ಬಹುನಿರೀಕ್ಷಿತ ಅಮೆಜಾನ್ ಪ್ರೈಮ್ ಡೇ ಸೇಲ್ 2021 (Amazon Prime Day Sale) ಪ್ರಾರಂಭವಾಗಲಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಈ ಮಹಾ ಮೇಳ ನಡೆಯುತ್ತಿದೆ. ಈ ಸೇಲ್‌ನಲ್ಲಿ ಎಲ್ಲಾ ಮಾದರಿಯ ಆಕ್ಸಿಸರೀಸ್‌ಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ನೀಡಲಾಗುತ್ತಿದ್ದು, 60% ಕೆಳಗೆ ಎಲೆಕ್ಟ್ರಾನಿಕ್ಸ್ ಮತ್ತು ಇತರೆ ಪರಿಕರಗಳ ಮೇಲೆ ಆಫರ್ ಘೋಷಿಸಲಾಗಿದೆ. ಪ್ರಮುಖವಾಗಿ ಮೊನ್ನೆಯಷ್ಟ ಬಿಡುಗಡೆ ಆದ ರೆಡ್ಮಿ ನೋಟ್ 10ಟಿ 5ಜಿ (Redmi Note 10T 5G) ಸ್ಮಾರ್ಟ್‌ಫೋನ್ ಇಂದು ಅಮೆಜಾನ್ನಲ್ಲಿ ಮೊದಲ ಸೇಲ್ ಕಾಣುತ್ತಿದೆ.
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸದ್ಯ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಫೋನುಗಳ ಪೈಕಿ ಇದುಕೂಡ ಒಂದಾಗಿದೆ. ಒಟ್ಟು ಎರಡು ಮಾದರಿಯಲ್ಲಿ ರೆಡ್ಮಿ ನೋಟ್ 10T ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿದೆ. 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯದ ಫೋನ್ ಕೇವಲ 13,999 ರೂ. ಗೆ ಸಿಗುತ್ತಿದೆ. ಅಂತೆಯೆ 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯದ ಫೋನ್ 15,999 ರೂ. ಗೆ ಮಾರಾಟವಾಗುತ್ತಿದೆ. ಅಲ್ಲದೆ ಹೆಚ್ಡಿಎಫ್ಸಿ ಬ್ಯಾಂಕ್ ಕಾರ್ಡ್ದಾರರು 1,000 ರೂ. ಡಿಸ್ಕೌಂಟ್ನಲ್ಲಿ ಖರೀದಿಸಬಹುದು.
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ನಿಂ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲ ಪಡೆದಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್ / 1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಅಳವಡಿಸಲಾಗಿದೆ.
ರೆಡ್ಮಿ ನೋಟ್ 10ಟಿ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಬಾಕ್ಸ್ ಒಳಗಡೆ 22.5W ಫಾಸ್ಟ್ ಚಾರ್ಜರ್ ಕೂಡ ಇರಲಿದೆ.
ಇನ್ನೂ ಅಮೆಜಾನ್ ಪ್ರೈಮ್ ಡೇ ಸೇಲ್ 2021 ನಲ್ಲಿ ಎಲೆಕ್ಟ್ರಾನಿಕ್ಸ್ ಪರಿಕರಗಳ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ. ಗಮನಾರ್ಹವಾಗಿ, ಎಚ್‌ಡಿಎಫ್‌ಸಿ ಬ್ಯಾಂಕ್ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅನ್ನು ವ್ಯವಹಾರಕ್ಕಾಗಿ ನೀವು ಹೆಚ್ಚುವರಿ 10% ತ್ವರಿತ ರಿಯಾಯಿತಿ ಪಡೆಯಬಹುದು.
ಅಲ್ಲದೆ, ವಿನಿಮಯ ರಿಯಾಯಿತಿ, ಯಾವುದೇ ವೆಚ್ಚವಿಲ್ಲದ ಇಎಂಐ ಪಾವತಿ ಆಯ್ಕೆಗಳು, ಕೆಲವು ಸಾವಿರ ಕೂಪನ್ ರಿಯಾಯಿತಿಗಳು ಮತ್ತು ವಿವಿಧ ವಿಭಾಗಗಳಲ್ಲಿ ವ್ಯಾಪಕವಾದ ಉತ್ಪನ್ನಗಳ ಸಂಗ್ರಹ ಸೇರಿದಂತೆ ಇತರ ಪ್ರಯೋಜನಗಳಿವೆ. ಎಲೆಕ್ಟ್ರಾನಿಕ್ಸ್ ಮತ್ತು ಪರಿಕರಗಳ ಮೇಲೆ ಶೇ. 60 ರಷ್ಟು ರಿಯಾಯಿತಿ ಘೋಷಿಸಲಾಗಿದೆ.
OPPO A93s: ಕಡಿಮೆ ಬೆಲೆಯ ಅತ್ಯುತ್ತಮ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ಒಪ್ಪೊ
Flipkart Big Saving Days: 6000mAh ಬ್ಯಾಟರಿಯ ಈ ಸ್ಮಾರ್ಟ್‌ಫೋನ್ ಕೇವಲ 7,199 ರೂ. ಗೆ ಲಭ್ಯ
(Amazon Prime Day Sale 2021 Redmi Note 10T 5G First Sale started on Amazon with best offer)
Published On - 12:23 pm, Mon, 26 July 21