Amazon: ರೆಡ್ಮಿ ಫೋನ್ ಖರೀದಿಸುವ ಪ್ಲಾನ್ನಲ್ಲಿದ್ದರೆ ಈ ಬಂಪರ್ ಆಫರ್ ಮಿಸ್ ಮಾಡಲೇ ಬೇಡಿ
Xiaomi Phone: ಅಮೇಜಾನ್ನಲ್ಲಿ ಶವೋಮಿ ಕಂಪನಿಯ ಫೋನ್‌ಗಳು ಬಂಪರ್ ರಿಯಾಯಿತಿ ದರದಲ್ಲಿ ಸೇಲ್ ಆಗುತ್ತಿದೆ. ಯಾವುದೇ ವಿಶೇಷ ಸೇಲ್ ಇಲ್ಲದೇ ವೇಳೆಯು ಅಮೆಜಾನ್ ಪ್ಲಾಟ್‌ಫಾರ್ಮ್ ಆಯ್ದ ಶವೋಮಿ ಫೋನ್‌ಗಳು ಡಿಸ್ಕೌಂಟ್ನಲ್ಲಿ ಮಾರಾಟವಾಗುತ್ತಿದೆ.
ಶವೋಮಿ (Xiaomi) ಕಂಪನಿಯ ರೆಡ್ಮಿ ಸ್ಮಾರ್ಟ್ಫೋನ್ಗಳಿಗೆ ಭಾರತದಲ್ಲಿ ಎಲ್ಲಿಲ್ಲದ ಬೇಡಿಕೆ ಇದೆ. ಚೀನಾಕ್ಕಿಂತಲೂ ಭಾರತದಲ್ಲಿ ರೆಡ್ಮಿ ಫೋನುಗಳು (Redmi Phone) ಹೆಚ್ಚು ಸೇಲ್ ಕಾಣುತ್ತವೆ. ಇದಕ್ಕಾಗಿಯೆ ಈ ಕಾಮರ್ಸ್ ತಾಣಗಳು ಶವೋಮಿ ಕಂಪನಿಯ ಸ್ಮಾರ್ಟ್ಫೋನ್ಗಳ ಮೇಲೆ ಆಫರ್ಗಳನ್ನು ಬಿಡುತ್ತಿರುತ್ತವೆ. ಇದೀಗ ಅಮೇಜಾನ್ನಲ್ಲಿ (Amazon) ಶವೋಮಿ ಕಂಪನಿಯ ಫೋನ್‌ಗಳು ಬಂಪರ್ ರಿಯಾಯಿತಿ ದರದಲ್ಲಿ ಸೇಲ್ ಆಗುತ್ತಿದೆ. ಯಾವುದೇ ವಿಶೇಷ ಸೇಲ್ ಇಲ್ಲದೇ ವೇಳೆಯು ಅಮೆಜಾನ್ ಪ್ಲಾಟ್‌ಫಾರ್ಮ್ ಆಯ್ದ ಶವೋಮಿ ಫೋನ್‌ಗಳು ಡಿಸ್ಕೌಂಟ್ನಲ್ಲಿ ಮಾರಾಟವಾಗುತ್ತಿದೆ. ಹಾಗಾದರೇ ಅಮೆಜಾನ್ ತಾಣ ದಲ್ಲಿ ಆಕರ್ಷಕ ರಿಯಾಯಿತಿ ಪಡೆದ ಶವೋಮಿ ಕಂಪನಿಯ ಆಯ್ದ ಫೋನ್‌ಗಳ ಯಾವುವು ಎಂಬುದನ್ನು ನೋಡೋಣ.
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ ಇದರ ಆರಂಭಿಕ ಬೆಲೆ 13,999 ರೂ.
ಶವೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಇದರ ಬೆಲೆ 26,999 ರೂ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64 GB, 6GB + 128 GB ಮತ್ತು 8GB RAM + 128 GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64 GB , 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಬೆಲೆ 14,999 ರೂ.
Moto G71 5G: ಬಿಡುಗಡೆಗೆ ಸಜ್ಜಾದ ಮೋಟೋ G71 5G ಸ್ಮಾರ್ಟ್‌ಫೋನ್: ಇದರ ಬೆಲೆ ಕೇವಲ 18,999 ರೂ.