ಇಂದು ಮಾತ್ರ: ಭರ್ಜರಿ ಆಫರ್​ನಲ್ಲಿ ಅತಿ ಕಡಿಮೆ ಬೆಲೆಗೆ ಸಿಗುತ್ತಿದೆ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್

Redmi Note 10 Pro Max: ಒಟ್ಟು ಐದು ಆಫರ್​ನಲ್ಲಿ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್​ಫೋನನ್ನು ನೀವು ಖರೀದಿಸಬಹುದು. ಗ್ರಾಹಕರು 1,500 ರೂ. ಡಿಸ್ಕೌಂಟ್‌ ಪಡೆಯಲು HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬೇಕಾಗುತ್ತದೆ.

ಇಂದು ಮಾತ್ರ: ಭರ್ಜರಿ ಆಫರ್​ನಲ್ಲಿ ಅತಿ ಕಡಿಮೆ ಬೆಲೆಗೆ ಸಿಗುತ್ತಿದೆ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
Redmi Note 10 Pro Max
Follow us
TV9 Web
| Updated By: Vinay Bhat

Updated on: Aug 08, 2021 | 12:45 PM

ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗಷ್ಟೆ ಬಿಡುಗಡೆಯಾದ ಶವೋಮಿ (Xiaomi) ಕಂಪೆನಿಯ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ (Redmi Note 10 Pro Max) ಸ್ಮಾರ್ಟ್​ಫೊನ್ ಸದ್ಯ ಬಂಪರ್ ಆಫರ್​ನಲ್ಲಿ ಲಭ್ಯವಾಗುತ್ತಿದೆ. ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ, ಸ್ನಾಪ್ಡ್ರಾಗನ್ ಪ್ರೊಸೆಸರ್​ನಿಂದ ಈ ಫೋನ್ ಕೂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ (Amazon) ಇಂಡಿಯಾದಲ್ಲಿ ನೋಟ್ 10 ಪ್ರೊ ಮ್ಯಾಕ್ಸ್‌ ರಿಯಾಯಿತಿ ದರದಲ್ಲಿ ಮಾರಾಟ ಆಗುತ್ತಿದೆ. ಆದರೆ, ಈ ಆಫರ್ ಇಂದು ಮಾತ್ರ ಲಭ್ಯವಿದ್ದು, ರಾತ್ರಿ 12 ಗಂಟೆಯೊಳಗೆ ಖರೀದಿ ಮಾಡಿದರೆ ಆಫರ್​ನಲ್ಲಿ ಸಿಗುತ್ತದೆ.

ಒಟ್ಟು ಐದು ಆಫರ್​ನಲ್ಲಿ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್​ಫೋನನ್ನು ನೀವು ಖರೀದಿಸಬಹುದು. ಗ್ರಾಹಕರು 1,500 ರೂ. ಡಿಸ್ಕೌಂಟ್‌ ಪಡೆಯಲು HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬೇಕಾಗುತ್ತದೆ. ಅಂತೆಯೆ ಎಸ್​ಬಿಐ ಕ್ರೆಡಿಟ್ ಕಾರ್ಡ್ ಹೊಂದಿರುವವರು 1750 ರೂ. ವರೆಗೆ ಡಿಸ್ಕೌಂಟ್ ಪಡೆಯಬಹುದು. 18,700 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ನೀಡಲಾಗಿದೆ. ಇನ್ನೂ 6 ತಿಂಗಳ ವರೆಗೆ ಫ್ರೀ ಸ್ಕ್ರೀನ್ ರಿಪ್ಲೇಸ್​ಮೆಂಟ್ ಮತ್ತು ನೋ ಕಾಸ್ಟ್ ಇಎಮ್​ಐ ಆಯ್ಕೆ ಕೂಡ ಇದೆ.

ಈ ಕೊಡುಗೆಯೊಂದಿಗೆ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ನ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಫೋನ್ 19,999 ರೂ.ಗಳಿಗೆ ಖರೀದಿಸಬಹುದು. 8GB RAM ಮತ್ತು 128GB ಸ್ಟೋರೇಜ್‌ ಸಾಮರ್ಥ್ಯದ ಫೋನ್ 21,999 ರೂ. ಗೆ ಲಭ್ಯವಾಗುತ್ತಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನೂ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

5,020mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಸೇರಿದಂತೆ ಪ್ರಮುಖ ಆಯ್ಕೆಗಳಿವೆ.

Fake App: ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಇರಬಹುದು ಫೇಕ್ ಆ್ಯಪ್: ಹೇಗೆ ಕಂಡುಹಿಡಿಯುವುದು?

ಬ್ಲೂಟೂತ್ ಹೆಡ್​ಫೋನ್ ಸ್ಪೋಟ, ಯುವಕ ಸಾವು..!

(Xiaomi Redmi Note 10 Pro Max Smartphone available with huge Discount in Amazon India)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್