Apple: ಶೀಘ್ರದಲ್ಲೇ ಕರ್ನಾಟಕದಲ್ಲಿ ಆ್ಯಪಲ್ ತಯಾರಿಕಾ ಘಟಕ: ಇನ್ನುಂದೆ ರಾಜ್ಯದಲ್ಲೇ ತಯಾರಾಗುತ್ತೆ ಐಫೋನ್​ಗಳು

ಪ್ರಧಾನಿ ನರೇಂದ್ರ ಮೋದಿಯವರ (Narendra Modi) ದೂರದೃಷ್ಟಿಯ ನೇತೃತ್ವದಲ್ಲಿ 5 ಟ್ರಿಲಿಯನ್ ಆರ್ಥಿಕತೆಗೆ ರಾಜ್ಯ ಸರ್ಕಾರ ಕೂಡ ಪಾಲು ನೀಡಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Apple: ಶೀಘ್ರದಲ್ಲೇ ಕರ್ನಾಟಕದಲ್ಲಿ ಆ್ಯಪಲ್ ತಯಾರಿಕಾ ಘಟಕ: ಇನ್ನುಂದೆ ರಾಜ್ಯದಲ್ಲೇ ತಯಾರಾಗುತ್ತೆ ಐಫೋನ್​ಗಳು
Apple Company
Follow us
Vinay Bhat
|

Updated on:Mar 03, 2023 | 2:13 PM

ಭಾರತದಲ್ಲಿ ಆ್ಯಪಲ್ ಐಫೋನ್ (Apple iPhone) ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸುವ ಅತಿದೊಡ್ಡ ಘಟಕವು ಕರ್ನಾಟಕದಲ್ಲಿ ಆರಂಭವಾಗಲಿದೆ. ಈ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್​ಗೆ ರಿಟ್ವೀಟ್ ಮಾಡಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಸುಮಾರು ಒಂದು ಲಕ್ಷ ಉದ್ಯೋಗ ಸೃಷ್ಟಿಯ ಜೊತೆಗೆ ರಾಜ್ಯದಲ್ಲಿ ಸಾಕಷ್ಟು ಅವಕಾಶಗಳು ತೆರೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ದೂರದೃಷ್ಟಿಯ ನೇತೃತ್ವದಲ್ಲಿ 5 ಟ್ರಿಲಿಯನ್ ಆರ್ಥಿಕತೆಗೆ ರಾಜ್ಯ ಸರ್ಕಾರ ಕೂಡ ಪಾಲು ನೀಡಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಆ್ಯಪಲ್​ ಕಂಪನಿಯು ಕ್ರಮೇಣ ಭಾರತದಲ್ಲಿ ವಿಸ್ತರಿಸುತ್ತದೆ. ಇದಲ್ಲದೆ ಈಗಾಗಲೇ ಚೀನಾದಲ್ಲಿರುವಂತಹ ಉತ್ಪಾದನೆ ಮಟ್ಟವನ್ನು ಕಡಿಮೆ ಮಾಡುವ ನಿರ್ಧಾರವನ್ನು ಕೈಗೊಂಡು ನಂತರದಲ್ಲಿ ಭಾರತದಲ್ಲೇ ಆ್ಯಪಲ್ ಸಾಧನಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ. 2017ರ ಮೇನಲ್ಲಿ ಬೆಂಗಳೂರಿನಲ್ಲಿ ತನ್ನ ಗುತ್ತಿಗೆ ತಯಾರಿಕಾ ಕಂಪನಿ ವಿಸ್ಟ್ರಾನ್ಸ್‌ ಫೆಸಿಲಿಟಿನಲ್ಲಿ ಐಪೋನ್‌ ಎಸ್‌ಪಿ ಮೊಬೈಲ್‌ ಮೂಲಕ ಆ್ಯಪಲ್‌ ಭಾರತದಲ್ಲಿ ಐಫೋನ್‌ಗಳನ್ನು ತಯಾರಿಸಲು ಆರಂಭಿಸಿತು. ನಂತರ ಬಂದ ಆ್ಯಪಲ್‌ನ ಇತರೆ ನಾಲ್ಕು ಮಾಡೆಲ್‌ಗ‌ಳು ಕೂಡ ಭಾರತದಲ್ಲಿ ತಯಾರಾಗಿದೆ.

ಇದನ್ನೂ ಓದಿ
Image
Huawei Nova 10 SE: 108MP ಕ್ಯಾಮೆರಾ ಫೋನ್ ಸಾಲಿಗೆ ಮತ್ತೊಂದು ಸೇರ್ಪಡೆ: ಯಾವ ಸ್ಮಾರ್ಟ್​ಫೋನ್?, ಬೆಲೆ ಎಷ್ಟು?
Image
Moto G73 5G: ಭಾರತೀಯ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಇದರ ಫೀಚರ್ಸ್ ನೋಡಿ
Image
Tech Tips: ನಿಮ್ಮ ಸ್ಮಾರ್ಟ್​ಫೋನ್ ಸೂಪರ್ ಫಾಸ್ಟ್ ಆಗ್ಬೇಕಾ?: ಮೊದಲು ಈ ಕೆಲಸ ಮಾಡಿ
Image
Battery Phones: ಈ ಸ್ಮಾರ್ಟ್​ಫೋನ್​ನಲ್ಲಿ ಒಮ್ಮೆ ಬ್ಯಾಟರಿ ಫುಲ್ ಮಾಡಿದ್ರೆ 100 ದಿನ ಚಾರ್ಜ್ ಬರುತ್ತದೆ

Realme GT 3: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿಶ್ವದ ಅತಿ ವೇಗದ ಚಾರ್ಜಿಂಗ್ ಫೋನ್ ರಿಯಲ್‌ ಮಿ GT 3: ಬೆಲೆ ಎಷ್ಟು ಗೊತ್ತೇ?

ಭಾರತದಲ್ಲಿ ಆ್ಯಪಲ್ ಐಫೋನ್ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸುವ ಅತಿದೊಡ್ಡ ಘಟಕವು ಬೆಂಗಳೂರು ನಗರದ ಸಮೀಪವಿರುವ ಹೊಸೂರಿನಲ್ಲಿ ಆರಂಭವಾಗಲಿದೆ ಎಂದು ಇತ್ತೀಚೆಗಷ್ಟೆ ಟೆಲಿಕಾಂ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದರು. ಜಂಜಾಟಿಯಾ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ಅವರು, ಬೆಂಗಳೂರು ಸಮೀಪವಿರುವ ತಮಿಳುನಾಡಿಗೆ ಸೇರಿದ ಹೊಸೂರಿನಲ್ಲಿ ಭಾರತದ ಅತಿದೊಡ್ಡ ಸ್ಥಾವರವನ್ನು ಪ್ರಾರಂಭಿಸಲಾಗುತ್ತಿದೆ. ಭಾರತದಲ್ಲಿ ಆ್ಯಪಲ್ ಐಫೋನ್‌ಗಳ ತಯಾರಿಕೆಗಾಗಿ ಟಾಟಾ ಎಲೆಕ್ಟ್ರಾನಿಕ್ಸ್‌ ಸಂಸ್ಥೆಯು ಹೊರಗುತ್ತಿಗೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಐಫೋನ್‌ಗಳನ್ನು ತಯಾರಿಲಿದೆ. ಈ ಒಂದೇ ಕಾರ್ಖಾನೆಯಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ಹೇಳಿದ್ದರು.

ಇನ್ನು ಆ್ಯಪಲ್ ಇಂಕ್​ನ ಐಫೋನ್ ಅನ್ನು ಬೆಂಗಳೂರಿನಲ್ಲಿ ತಯಾರಿಸುವ ತೈವಾನ್​ನ ತೈಪೆಯಿಯ ವಿಸ್ಟ್ರಾನ್​ ಕಂಪನಿಯ ಘಟಕವನ್ನು ಖರೀದಿಸಲು ಟಾಟಾ ಸಮೂಹ ಮುಂದಾಗಿದ್ದು, ಒಪ್ಪಂದ ಬಹುತೇಕ ಅಂತಿಮಗೊಂಡಿದೆ. ಮಾರ್ಚ್​ ಅಂತ್ಯದ ವೇಳೆಗೆ ಖರೀದಿ ಪ್ರಕ್ರಿಯೆ ಕೊನೆಗೊಳ್ಳುವ ನಿರೀಕ್ಷೆ ಇದೆ.

ಆ್ಯಪಲ್ ಇಂಕ್​ನ ಐಫೋನ್​ಗಳನ್ನು ಭಾರತದಲ್ಲಿ ಮುಖ್ಯವಾಗಿ ತೈವಾನ್​ನ ವಿಸ್ಟ್ರಾನ್ ಮತ್ತು ಫಾಕ್ಸ್​ಕಾನ್ ಟೆಕ್ನಾಲಜಿ ಸಮೂಹಗಳು ತಯಾರಿಸುತ್ತಿವೆ. ಚೀನಾದಲ್ಲಿಯೂ ಇದೇ ಕಂಪನಿಗಳು ಐಫೋನ್ ತಯಾರಿಸುತ್ತಿವೆ. ಇದೀಗ ಟಾಟಾ ಸಮೂಹ ಐಫೋನ್ ಉತ್ಪಾದನೆ ಆರಂಭಿಸಿದರೆ ಚೀನಾಕ್ಕೆ ಸ್ಪರ್ಧೆಯೊಡ್ಡುವ ಭಾರತದ ಯತ್ನಕ್ಕೆ ಯಶಸ್ಸು ದೊರೆಯಲಿದೆ. ಚೀನಾದಲ್ಲಿ ಹೆಚ್ಚುತ್ತಿರುವ ಅಸ್ಥಿರತೆ ಹಾಗೂ ಅನಿಶ್ಚಿತತೆಯ ಈ ಸಂದರ್ಭದಲ್ಲಿ ಜಾಗತಿಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್‌ಗಳು ಭಾರತದ ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳುವಂತೆ ಮನವೊಲಿಸುವಲ್ಲಿ ಈ ಒಪ್ಪಂದ ಪೂರಕವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Fri, 3 March 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್