ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ (Asia Cup 2022) ಶನಿವಾರ ಚಾಲನೆ ಸಿಕ್ಕಿದೆ. ಇಂದು ಎರಡನೇ ಪಂದ್ಯ ನಡೆಯಲಿದ್ದು, ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳ ನಡುವೆ ಮುಖಾಮುಖಿ ಆಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅಭಿಮಾನಿಗಳಂತು ಈ ಹೈವೋಲ್ಟೇಜ್ ಪಂದ್ಯ ವೀಕ್ಷಿಸಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈಗ ಏಷ್ಯಾಕಪ್ ಸೀಸನ್ ಆಗಿರುವುದರಿಂದ ಅದರಲ್ಲೂ ಭಾರತ–ಪಾಕ್ ಪಂದ್ಯ ಇರುವುದರಿಂದ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಗೆ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಪಂದ್ಯ ವೀಕ್ಷಿಸಲು ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ಜಿಯೋದಲ್ಲಿ ಆಕರ್ಷಕವಾದ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಇದೆ. ಇದರಿಂದ ಜಿಯೋ (JIO) ಗ್ರಾಹಕರಿಗೆ ಮತ್ತಷ್ಟು ಲಾಭವಾಗಿದೆ. ಜಿಯೋದಲ್ಲಿರುವ ಡಿಸ್ನಿ ಪ್ಲಸ್ ಹಾಟ್ಸ್ಟಾರ್ನ ಅತ್ಯುತ್ತಮ ಪ್ಲಾನ್ಗಳು ಯಾವುವು ಎಂಬುದನ್ನು ನೋಡೋಣ.
ಕ್ರಿಕೆಟ್ ಪ್ರಿಯರಿಗಾಗಿ ಜಿಯೋದಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಹೊಂದಿರುವ 555 ರೂಪಾಯಿಗಳ ಡೇಟಾ ಆಡ್ ಆನ್ ಪ್ಲಾನ್ ಇದೆ. ಈಗಾಗಲೇ ಜಿಯೋವಿನ ರೀಚಾರ್ಜ್ ಪ್ಲಾನ್ ಹೊಂದಿದ್ದು, ಕ್ರಿಕೆಟ್ ಪಂದ್ಯ ವೀಕ್ಷಣೆಗಾಗಿ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಮಾತ್ರ ಎದುರುನೋಡುತ್ತಿರುವ ಗ್ರಾಹಕರಿಗೆ ಇದು ಭರ್ಜರಿ ಕೊಡುಗೆಯಾಗಿದೆ. ಇದ ಜೊತೆಗೆ ಗ್ರಾಹಕರು ಭಾರೀ ಡೇಟಾ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ. ಇದು ಒಟ್ಟು 55GB ಡೇಟಾದೊಂದಿಗೆ ಬರುತ್ತದೆ. ಜಿಯೋ ಗ್ರಾಹಕರು ತಮ್ಮ ಪ್ರಸ್ತುತ ರೀಚಾರ್ಜ್ ಯೋಜನೆಯ ಜೊತೆಗೆ ಈ ಯೋಜನೆಯನ್ನು ಆಯ್ದುಕೊಳ್ಳಬಹುದಾಗಿದ್ದು, ಒಟ್ಟು 55 ದಿನಗಳ ವ್ಯಾಲಿಡಿಟಿಯನ್ನು ಹೊಂದಿರುವ ಈ ಯೋಜನೆಯು ಧ್ವನಿ ಕರೆ ಅಥವಾ SMS ಪ್ರಯೋಜನಗಳೊಂದಿಗೆ ಬರುವುದಿಲ್ಲ.
ರಿಲಯನ್ಸ್ ಜಿಯೋದ 799 ರೂ. ಪ್ಲಾನ್ ನಿಮಗೆ 56 ದಿನಗಳ ತನಕ ಡಿಸ್ನಿ + ಹಾಟ್‌ಸ್ಟಾರ್ ಪ್ರೀಮಿಯಂ ಚಂದಾದಾರಿಕೆಯನ್ನು ನೀಡುತ್ತದೆ. ದೈನಂದಿನ 2GB ಡೇಟಾವನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಅನಿಯಮಿತ ಕರೆ ಹಾಗೂ ದಿನಕ್ಕೆ 100 SMS ಸೌಲಭ್ಯ ದೊರೆಯಲಿದೆ. ಹೆಚ್ಚಿವರಿಯಾಗಿ ಜಿಯೋ ಅಪ್ಲಿಕೇಶನ್‌ಗಳಿಗೆ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ.
ಇನ್ನು ಜಿಯೋ 301 ರೂ. ಪ್ರಿಪೇಯ್ಡ್ ಪ್ಲಾನ್ 3ತಿಂಗಳ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ನೀಡಲಿದೆ. ಇದು ಒಟ್ಟು 50GB ಹೈ–ಸ್ಪೀಡ್ ಡೇಟಾವನ್ನು ನೀಡುತ್ತದೆ. ಇದರ ವ್ಯಾಲಿಡಿಟಿ 30 ದಿನದ ವರೆಗೆ ಇರಲಿದೆ. ನೀವು ಒಂದು ವರ್ಷದವರೆಗೆ ಉಚಿತ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಯೋಜನೆ ಎದುರು ನೋಡುತ್ತಿದ್ದರೆ 4199 ರೂ. ಪ್ರಿಪೇಯ್ಡ್ ಪ್ಲಾನ್ ಉತ್ತಮವಾಗಿದೆ. ಇದು ಅನಿಯಮಿತ ಕರೆಗಳು, 3GB ದೈನಂದಿನ ಡೇಟಾ ಮಿತಿಯೊಂದಿಗೆ, ದಿನಕ್ಕೆ 100 ಎಸ್ಎಂಎಸ್ ಮತ್ತು ಅನಿಯಮಿತ ಕರೆ, ಜಿಯೋ ಸೂಟ್‌ಗೆ ಉಚಿತ ಪ್ರವೇಶವನ್ನು ನೀಡುತ್ತದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ.
ರಿಲಯನ್ಸ್ ಜಿಯೋದ 333 ರೂ. ಪ್ಲಾನ್ ನಿಮಗೆ 28 ದಿನಗಳ ತನಕ ಡಿಸ್ನಿ + ಹಾಟ್‌ಸ್ಟಾರ್ ಪ್ರೀಮಿಯಂ ಚಂದಾದಾರಿಕೆಯನ್ನು ನೀಡುತ್ತದೆ. ದೈನಂದಿನ 1.5GB ಡೇಟಾವನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಅನಿಯಮಿತ ಕರೆ ಹಾಗೂ ದಿನಕ್ಕೆ 100 SMS ಸೌಲಭ್ಯ ದೊರೆಯಲಿದೆ. ಹೆಚ್ಚಿವರಿಯಾಗಿ ಜಿಯೋ ಅಪ್ಲಿಕೇಶನ್‌ಗಳಿಗೆ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ.