Asus 8z: ಇಷ್ಟೊಂದು ಬೆಲೆಗೆ ಹೊಸ ಆಸುಸ್‌ 8z ಸ್ಮಾರ್ಟ್​ಫೋನ್ ಖರೀದಿಸಬಹುದೇ?

| Updated By: Vinay Bhat

Updated on: Mar 08, 2022 | 6:18 AM

ಭಾರತದಲ್ಲಿ ಮೊನ್ನೆಯಷ್ಟೆ ಹೊಸ ಆಸುಸ್‌ 8z (Asus 8z) ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿತ್ತು. ಕಾಂಪ್ಯಾಕ್ಟ್ ಫ್ಲ್ಯಾಗ್‌ಶಿಪ್‌ಗಾಗಿ ನೋಡುತ್ತಿರುವ ಗ್ರಾಹಕರನ್ನು ಕೇಂದ್ರೀಕರಿಸಿ ವಿನ್ಯಾಸಗೊಳಿಸಿರುವ ಈ ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಆರಂಭವಾಗಿದೆ.

Asus 8z: ಇಷ್ಟೊಂದು ಬೆಲೆಗೆ ಹೊಸ ಆಸುಸ್‌ 8z ಸ್ಮಾರ್ಟ್​ಫೋನ್ ಖರೀದಿಸಬಹುದೇ?
Asus 8z
Follow us on

ಸ್ಮಾರ್ಟ್‌ಫೋನ್‌  ಮಾರುಕಟ್ಟೆಯಲ್ಲಿ ತನ್ನದೇ ಸ್ಥಾನವನ್ನು ಹೊಂದಿರುವ ಆಸುಸ್ ಕಂಪನಿ ತನ್ನ ಝೆನ್‌ಫೋನ್ (Zen Phone) ಸರಣಿಯಲ್ಲಿ ಮೊಬೈಲ್​​ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಇದಕ್ಕಾಗಿಯೆ ಭಾರತದಲ್ಲಿ ಮೊನ್ನೆಯಷ್ಟೆ ಕಂಪನಿ ಹೊಸ ಆಸುಸ್‌ 8z (Asus 8z) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಕಾಂಪ್ಯಾಕ್ಟ್ ಫ್ಲ್ಯಾಗ್‌ಶಿಪ್‌ಗಾಗಿ ನೋಡುತ್ತಿರುವ ಗ್ರಾಹಕರನ್ನು ಕೇಂದ್ರೀಕರಿಸಿ ವಿನ್ಯಾಸಗೊಳಿಸಿರುವ ಈ ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ (Flipkart) ತಾಣದಲ್ಲಿ ಆರಂಭವಾಗಿದೆ. ನೀವು ಗೇಮಿಂಗ್ ಪ್ರಿಯರಾಗಿದ್ದರೆ ಈ ಫೋನನ್ನು ಕಣ್ಣುಮುಚ್ಚು ಖರೀದಿಸಬಹುದು. ಈ ಫೋನ್ ಸ್ಪೂತ್ ಆಗಿ ಕಾರ್ಯನಿರ್ವಹಿಸುತ್ತದೆ, ಪಾಕೆಟ್ ಫ್ರೆಂಡ್ಲಿ ಸ್ಮಾರ್ಟ್​ಫೋನ್ ಆಗಿದ್ದು ಹೈ ರೇಂಜ್ ಮೊಬೈಲ್ ಎದುರು ನೋಡುತ್ತಿರುವವರು ಇದನ್ನು ಖರೀದಿಸಬಹುದು.

ಬೆಲೆ ಎಷ್ಟು-ಆಫರ್?:

ಭಾರತದಲ್ಲಿ ಆಸುಸ್‌ 8z ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗುತ್ತಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 42,999 ರೂ. ನಿಗದಿ ಮಾಡಲಾಗಿದೆ. ಇದು ಹೊರೈಜಾನ್ ಸಿಲ್ವರ್ ಮತ್ತು ಅಬ್ಸಿಡಿಯನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್‌ ಅಂಡರ್ ಡಿಸ್ ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ, ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಟ್ರಿಪಲ್ ಮೈಕ್ರೊಫೋನ್‌ಗಳೊಂದಿಗೆ ಬರುತ್ತದೆ. ನೀವು ಖರೀದಿಸಿದರೆ ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಕ್ರೆಡಿಟ್ ಕಾರ್ಡ್ ಮೂಲಕ ಶೇ. 5 ರಷ್ಟು ಕ್ಯಾಶ್​ಬ್ಯಾಕ್ ಸಿಗುತ್ತದೆ. ಇದರ ಜೊತೆಗೆ 6000 ರೂ. ರಿಯಾಯಿತಿ ಕೂಡ ನೀಡಲಾಗುತ್ತಿದೆ. 1, 470 ರೂ. ಯಿಂದ ತಿಂಗಳ ಇಎಮ್​ಐ ಆಯ್ಕೆ ಸಿಗಲಿದೆ.

ಏನು ವಿಶೇಷತೆ?:

ಆಸುಸ್‌ 8z ಸ್ಮಾರ್ಟ್‌ಫೋನ್‌ 5.9 ಇಂಚಿನ ಫುಲ್‌ HD+ ಸ್ಯಾಮ್‌ಸಂಗ್‌ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದ್ದು 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ZenUI 8 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಬಹುದು.

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX363 ಸೆನ್ಸಾರ್ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೋನಿ IMX663 ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಲೆನ್ಸ್ ಹೊಂದಿದೆ.

4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ಕ್ವಿಕ್ ಚಾರ್ಜ್ 4.0 ಮತ್ತು ಪವರ್ ಡೆಲಿವರಿ ಬೆಂಬಲವನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

Realme C35: ಬಜೆಟ್ ಫೋನ್ ಎಂದರೆ ಹೀಗಿರಬೇಕು: ಭಾರತದಲ್ಲಿ ಆಕರ್ಷಕ ಫೀಚರ್ಸ್​ನ ರಿಯಲ್‌ ಮಿ C35 ಬಿಡುಗಡೆ

Poco M4 Pro: ಹೊಸ ಫೋನ್ ಖರೀದಿಸುವವರು ಇಲ್ಲಿ ನೋಡಿ: ಕೇವಲ 13,999 ರೂ. ಗೆ ಸೇಲ್ ಕಾಣುತ್ತಿದೆ ಪೋಕೋ M4 ಪ್ರೊ