AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asus 8z: ಭಾರತದಲ್ಲಿ ಅತ್ಯಂತ ಬಲಿಷ್ಠವಾದ ಆಸುಸ್‌ 8z ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?

Asus 8z Price in India: ಭಾರತದಲ್ಲಿ ಹೊಸ ಆಸುಸ್‌ 8z ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡು ಸಾಕಷ್ಟು ಬಲಿಷ್ಠವಾಗಿದೆ.

Asus 8z: ಭಾರತದಲ್ಲಿ ಅತ್ಯಂತ ಬಲಿಷ್ಠವಾದ ಆಸುಸ್‌ 8z ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?
Asus 8z
TV9 Web
| Edited By: |

Updated on: Feb 28, 2022 | 3:03 PM

Share

ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ಆಸುಸ್ ತನ್ನದೇ ಸ್ಥಾನವನ್ನು ಹೊಂದಿದ್ದು, ಈಗಾಗಲೇ ಝೆನ್‌ಫೋನ್ (Zen Phone) ಸರಣಿಯಲ್ಲಿ ಮೊಬೈಲ್ ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಇದೀಗ ಭಾರತದಲ್ಲಿ ತನ್ನ ಹೊಸ ಆಸುಸ್‌ 8z (Asus 8z) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್‌ (Smartphone) ಕಾಂಪ್ಯಾಕ್ಟ್ ಫ್ಲ್ಯಾಗ್‌ಶಿಪ್‌ಗಾಗಿ ನೋಡುತ್ತಿರುವ ಗ್ರಾಹಕರನ್ನು ಕೇಂದ್ರೀಕರಿಸಿ ವಿನ್ಯಾಸಗೊಳಿಸಲಾಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡು ಸಾಕಷ್ಟು ಬಲಿಷ್ಠವಾಗಿದೆ. ವಿಶೇಷವಾಗಿ ಇದು ವಿಡಿಯೋ ರೆಕಾರ್ಡಿಂಗ್ ಸಮಯದಲ್ಲಿ ಆಂಬಿಯೆಂಟ್‌ ನಾಯ್ಸ್‌ ಅನ್ನು ಕಡಿಮೆ ಮಾಡಲು ಸಹಾಯ ಮಾಡುವ ನಾಯ್ಸ್‌ ರೆಡ್ಯೂಕ್ಷನ್ ಟೆಕ್ನಾಲಜಿಯನ್ನು ಹೊಂದಿದೆ. ಹಾಗಾದ್ರೆ ಈ ಫೋನಿನ ಇತರೆ ವಿಶೇಷತೆ ಏನು?, ಬೆಲೆ ಎಷ್ಟು ಎಂಬ ಬಗೆಗಿನ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಭಾರತದಲ್ಲಿ ಆಸುಸ್‌ 8z ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 42,999 ರೂ. ನಿಗದಿ ಮಾಡಲಾಗಿದೆ. ಇದು ಹೊರೈಜಾನ್ ಸಿಲ್ವರ್ ಮತ್ತು ಅಬ್ಸಿಡಿಯನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನ್ ಮಾರ್ಚ್ 7 ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ. ಈ ಸ್ಮಾರ್ಟ್‌ಫೋನ್‌ ಅಂಡರ್ ಡಿಸ್ ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ, ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಟ್ರಿಪಲ್ ಮೈಕ್ರೊಫೋನ್‌ಗಳೊಂದಿಗೆ ಬರುತ್ತದೆ.

ಏನು ವಿಶೇಷತೆ?:

ಆಸುಸ್‌ 8z ಸ್ಮಾರ್ಟ್‌ಫೋನ್‌ 5.9 ಇಂಚಿನ ಫುಲ್‌ HD+ ಸ್ಯಾಮ್‌ಸಂಗ್‌ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದ್ದು 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ZenUI 8 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಬಹುದು.

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX363 ಸೆನ್ಸಾರ್ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೋನಿ IMX663 ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಲೆನ್ಸ್ ಹೊಂದಿದೆ.

4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ಕ್ವಿಕ್ ಚಾರ್ಜ್ 4.0 ಮತ್ತು ಪವರ್ ಡೆಲಿವರಿ ಬೆಂಬಲವನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

WhatsApp: ವಾಟ್ಸ್ಆ್ಯಪ್​ನಲ್ಲಿ ಬರುತ್ತಿದೆ ಒಂದಲ್ಲ ಎರಡಲ್ಲ ಬರೋಬ್ಬರಿ 10 ಹೊಸ ಫೀಚರ್ಸ್: ಯಾವುವು?

Follow Us
TV9 Web
TV9 Web

TV9 Kannada

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?