ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಆಸುಸ್ ತನ್ನದೇ ಸ್ಥಾನವನ್ನು ಹೊಂದಿದ್ದು, ಈಗಾಗಲೇ ಝೆನ್ಫೋನ್ (Zen Phone) ಸರಣಿಯಲ್ಲಿ ಮೊಬೈಲ್ ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಇದೀಗ ಭಾರತದಲ್ಲಿ ತನ್ನ ಹೊಸ ಆಸುಸ್ 8z (Asus 8z) ಸ್ಮಾರ್ಟ್ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್ಫೋನ್ (Smartphone) ಕಾಂಪ್ಯಾಕ್ಟ್ ಫ್ಲ್ಯಾಗ್ಶಿಪ್ಗಾಗಿ ನೋಡುತ್ತಿರುವ ಗ್ರಾಹಕರನ್ನು ಕೇಂದ್ರೀಕರಿಸಿ ವಿನ್ಯಾಸಗೊಳಿಸಲಾಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡು ಸಾಕಷ್ಟು ಬಲಿಷ್ಠವಾಗಿದೆ. ವಿಶೇಷವಾಗಿ ಇದು ವಿಡಿಯೋ ರೆಕಾರ್ಡಿಂಗ್ ಸಮಯದಲ್ಲಿ ಆಂಬಿಯೆಂಟ್ ನಾಯ್ಸ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುವ ನಾಯ್ಸ್ ರೆಡ್ಯೂಕ್ಷನ್ ಟೆಕ್ನಾಲಜಿಯನ್ನು ಹೊಂದಿದೆ. ಹಾಗಾದ್ರೆ ಈ ಫೋನಿನ ಇತರೆ ವಿಶೇಷತೆ ಏನು?, ಬೆಲೆ ಎಷ್ಟು ಎಂಬ ಬಗೆಗಿನ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?:
ಭಾರತದಲ್ಲಿ ಆಸುಸ್ 8z ಸ್ಮಾರ್ಟ್ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 42,999 ರೂ. ನಿಗದಿ ಮಾಡಲಾಗಿದೆ. ಇದು ಹೊರೈಜಾನ್ ಸಿಲ್ವರ್ ಮತ್ತು ಅಬ್ಸಿಡಿಯನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಈ ಫೋನ್ ಮಾರ್ಚ್ 7 ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ. ಈ ಸ್ಮಾರ್ಟ್ಫೋನ್ ಅಂಡರ್ ಡಿಸ್ ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ, ಸ್ಟಿರಿಯೊ ಸ್ಪೀಕರ್ಗಳು ಮತ್ತು ಟ್ರಿಪಲ್ ಮೈಕ್ರೊಫೋನ್ಗಳೊಂದಿಗೆ ಬರುತ್ತದೆ.
ಏನು ವಿಶೇಷತೆ?:
ಆಸುಸ್ 8z ಸ್ಮಾರ್ಟ್ಫೋನ್ 5.9 ಇಂಚಿನ ಫುಲ್ HD+ ಸ್ಯಾಮ್ಸಂಗ್ E4 ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದ್ದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ZenUI 8 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಮೈಕ್ರೋ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಬಹುದು.
ಇನ್ನು ಈ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX363 ಸೆನ್ಸಾರ್ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೋನಿ IMX663 ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಲೆನ್ಸ್ ಹೊಂದಿದೆ.
4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ಕ್ವಿಕ್ ಚಾರ್ಜ್ 4.0 ಮತ್ತು ಪವರ್ ಡೆಲಿವರಿ ಬೆಂಬಲವನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ.
WhatsApp: ವಾಟ್ಸ್ಆ್ಯಪ್ನಲ್ಲಿ ಬರುತ್ತಿದೆ ಒಂದಲ್ಲ ಎರಡಲ್ಲ ಬರೋಬ್ಬರಿ 10 ಹೊಸ ಫೀಚರ್ಸ್: ಯಾವುವು?