ಗೇಮಿಂಗ್ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಏಸಸ್ (Asus) ಸದ್ಯ ಹೊಸ ಮೊಬೈಲ್ನೊಂದಿಗೆ ಮತ್ತೆ ಬಂದಿದೆ. ಕಂಪ್ಯೂಟರ್ ಗೇಮಿಂಗ್ ವೈಶಿಷ್ಟ್ಯಗಳನ್ನು ಸ್ಮಾರ್ಟ್ಫೋನ್ಗಳಲ್ಲಿ ಪರಿಚಯಿಸಿ ಸೈ ಎನಿಸಿರುವ ಏಸಸ್ ಇದೀಗ ಹೊಸದಾಗಿ ರಾಗ್ ಫೋನ್ 6 ಸರಣಿಯನ್ನು ಭಾರತದಲ್ಲಿ ಅನಾವರಣ ಮಾಡಿದೆ. ಇದರಲ್ಲಿ ಒಟ್ಟು ಎರಡು ಫೋನ್ಗಳಿದ್ದು ಏಸಸ್ ರಾಗ್ ಫೋನ್ 6 ಮತ್ತು ರಾಗ್ ಫೋನ್ 6 ಪ್ರೊ (Asus ROG Phone 6 and ROG Phone 6 Pro) ಅನ್ನು ದೇಶದಲ್ಲಿ ದೇಶದಲ್ಲಿ ಬಿಡುಗಡೆ ಮಾಡಿದೆ. ಈ ಎರಡೂ ಸ್ಮಾರ್ಟ್ಫೋನ್ಗಳು (Smartphone) 5G ಬೆಂಬಲ ಪಡೆದುಕೊಂಡಿದ್ದು ಏಸಸ್ ರಾಗ್ ಫೋನ್ 5 ಸರಣಿಯ ಮುಂದಿನ ಆವೃತ್ತಿಯಾಗಿದೆ. ಅಚ್ಚರಿಗೊಳ್ಳುವಂತಹ ಫೀಚರ್ಗಳು ಈ ಹೊಸ ಫೋನ್ನಲ್ಲಿದ್ದು, ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿದೆ. ಈ ಫೋನ್ ಬಗೆಗಿನ ಎಲ್ಲ ಮಾಹಿತಿ ಇಲ್ಲಿದೆ ನೋಡಿ.
ಏಸಸ್ ರಾಗ್ ಫೋನ್ 6:
ಈ ಸ್ಮಾರ್ಟ್‌ಫೋನ್ 6.78 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್‌ಗಳಲ್ಲಿನ ಡಿಸ್‌ಪ್ಲೇ ರಿಫ್ರೆಶ್ ರೇಟ್ ಅನ್ನು 60Hz, 90Hz, 120Hz, 144Hz ಮತ್ತು 165Hz ನಡುವೆ ಆಯ್ಕೆ ಮಾಡುವ ಅವಕಾಶವನ್ನು ನೀಡಲಾಗಿದೆ. ಇದು ವಿಶ್ವದ ನಂಬರ್ ಒನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಹೊಂದಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
Best Laptops: ಭಾರತದಲ್ಲಿ 40,000 ರೂ. ಒಳಗೆ ಲಭ್ಯವಿರುವ ಬೆಸ್ಟ್ ಲ್ಯಾಪ್ಟಾಪ್ಗಳು ಇಲ್ಲಿದೆ ನೋಡಿ
ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 6,000mAh ಡ್ಯುಯಲ್-ಸೆಲ್ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 71,999 ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ.
ಏಸಸ್ ರಾಗ್ ಫೋನ್ 6 ಪ್ರೊ:
ಈ ಸ್ಮಾರ್ಟ್‌ಫೋನ್ ಕೂಡ 6.78 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಗೆ ಕಾರ್ನಿಂಗ್ ಗ್ಲಾಸ್ ವಿಕ್ಷಸ್ ಪ್ರೊಟೆಕ್ಷನ್ ನೀಡಲಾಗಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ವಿಶೇಷವಾಗಿ ರೈಟ್ ಸ್ಪೈನ್ ಮೇಲೆ ಏರ್‌ಟ್ರಿಗ್ಗರ್ ಅಲ್ಟ್ರಾಸಾನಿಕ್ ಬಟನ್‌ಗಳನ್ನು ನೀಡಿದೆ. ಇದು ಗೇಮ್‌ಳಿಂದ ವಿಭಿನ್ನ ಕಂಟ್ರೋಲ್‌ಗಳನ್ನು ಮ್ಯಾಪ್ ಮಾಡಲು ನಿಮಗೆ ಅನುಮತಿಸುತ್ತದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಡ್ಯುಯಲ್-ಸೆಲ್ ಬ್ಯಾಟರಿಯನ್ನು (3,000 + 3,000mAh) ಹೊಂದಿದೆ. ಇದು 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ 18GB RAM + 512GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ 89,999 ರೂ. ಆಗಿದೆ. ಈ ಫೋನ್ ಯಾವಾಗ ಸೇಲ್ ಆಗಲಿದೆ ಎಂಬ ಬಗ್ಗೆ ಕಂಪನಿ ಇನ್ನೂ ದಿನಾಂಕ ಪ್ರಕಟಿಸಿಲ್ಲ.
Instagram, Facebook messenger down: ಸ್ಥಗಿತಗೊಂಡ ಇನ್ಸ್ಟಾಗ್ರಾಮ್-ಫೇಸ್ಬುಕ್ ಮೆಸೇಜಿಂಗ್ ಆ್ಯಪ್