ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಪ್ರಸಿದ್ಧ ಮೊಬೈಲ್ ಬ್ರ್ಯಾಂಡ್ಗಳು ಪೈಪೋಟಿಗೆ ಬಿದ್ದಂತೆ ಕ್ಯಾಮೆರಾ ಫೋನ್ಗಳನ್ನು ಲಾಂಚ್ ಮಾಡುತ್ತಿದೆ. ಮೊನ್ನೆಯಷ್ಟೆ ಭಾರತದಲ್ಲಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಸ್ಮಾರ್ಟ್‌ಫೋನ್ ಲಾಂಚ್ ಆಗಿತ್ತು. ಇದು ಮೊದಲ ದಿನವೇ ದಾಖಲೆಯ ಮಾರಾಟ ಕಂಡಿತ್ತು. ಇದೀಗ ಮತ್ತೊಂದು ಹೆಸರಾಂತ ಕಂಪನಿ ಏಸಸ್ (Asus) 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಹೊಸ ಮೊಬೈಲ್ ಅನಾವರಣ ಮಾಡಲು ಸಜ್ಜಾಗಿದೆ. ಅದುವೇ ಏಸಸ್ ಜೆನ್‌ಫೋನ್ 10 (Asus Zenfone 10). ಈ ಫೋನ್ ಜೂನ್ 29 ರಂದು ಮಾರುಕಟ್ಟೆಗೆ ಅಪ್ಪಳಿಸಲಿದೆ. ವಿಶೇಷ ಎಂದರೆ ಇದು ಕ್ಯಾಮೆರಾ ಜೊತೆಗೆ ಬಲಿಷ್ಠ ಪ್ರೊಸೆಸರ್ ಕೂಡ ನೀಡುತ್ತಿದ್ದು, ಗೇಮಿಂಗ್ ಪ್ರಿಯರಿಗಾಗಿಯೂ ಇದು ಸಿದ್ಧವಾಗಿದೆ.
ಏಸಸ್ ಜೆನ್‌ಫೋನ್ 10 ಫೋನ್ ಎಷ್ಟು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಮೂಲಗಳ ಪ್ರಕಾರ ಇದರ 16GB RAM + 256GB ವೇರಿಯಂಟ್‌ಗೆ ಭಾರತದಲ್ಲಿ ಬೆಲೆ ಅಂದಾಜು 62,000 ರೂ. ಇರಬಹುದು. ಈ ಫೋನ್ ಮೂನ್‌ಲೈಟ್ ವೈಟ್, ಮಿಡ್‌ನೈಟ್ ಬ್ಲಾಕ್, ಸ್ಟಾರಿ ಬ್ಲೂ ಮತ್ತು ಸನ್‌ಸೆಟ್ ರೆಡ್ ಬಣ್ಣಗಳಲ್ಲಿ ಲಭ್ಯ ಆಗಲಿದೆ ಎನ್ನಲಾಗಿದೆ.
Fridge Door: ಫ್ರಿಡ್ಜ್ ಡೋರ್ನ ರಬ್ಬರ್ನಲ್ಲಿ ಕೊಳೆ ಇದ್ದರೆ ಈ ಸರಳ ವಿಧಾನದಿಂದ ನಿಮಿಷಗಳಲ್ಲಿ ಕ್ಲೀನ್ ಮಾಡಿ
ಜೆನ್‌ಫೋನ್ 10 ಸ್ಮಾರ್ಟ್‌ಫೋನ್ 6.3 ಇಂಚಿನ AMOLED ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಇದು 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇದರ ಜೊತೆಗೆ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಹೊಂದಿದೆ. ಅತ್ಯಂತ ಬಲಿಷ್ಠವಾದ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದುಕೊಂಡಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಮುಖ್ಯ ಕ್ಯಾಮೆರಾವು ಬರೋಬ್ಬರಿ 200 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿರಲಿದೆ. ಇನ್ನೊಂದು ಕ್ಯಾಮೆರಾವು ಅಲ್ಟ್ರಾ-ವೈಡ್ 8 ಮೆಗಾ ಪಿಕ್ಸಾಲ್ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದೆ. ಅಂತೆಯೆ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾ ಪಿಕ್ಸಾಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ಅಳವಡಿಸಲಾಗಿದೆ.
ಈ ಹಿಂದಿನ ಸೀರಿಸ್ನಂತೆ ಇದರಲ್ಲಿ ಕೂಡ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದೆ. ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರಲಿದೆ. ಉಳಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ನೀಡಲಾಗಿದೆ. 4G LTE ಸಪೋರ್ಟ್ ಮಾಡುತ್ತದೆ. Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ