Asus Zenfone 10: ಗೇಮಿಂಗ್ ಪ್ರಿಯರಿಗೆ ಸಂತಸದ ಸುದ್ದಿ: ಬರುತ್ತಿದೆ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್​​ನ ಹೊಸ ಫೋನ್

ನೂತನ ಏಸಸ್‌ ಜೆನ್‌ಫೋನ್‌ 10 ಜೂನ್ 29 ರಂದು ಮಾರುಕಟ್ಟೆಗೆ ಅಪ್ಪಳಿಸಲಿದೆ. ಇದು ಈ ಹಿಂದಿನ ಜೆನ್‌ಫೋನ್‌ಗಳಿಗಿಂತ ಸಾಕಷ್ಟು ಅಪ್‌ಡೇಟ್‌ ಆಗಿದ್ದು, ಆಕರ್ಷಕ ಫೀಚರ್​ಗಳಿಂದ ಕೂಡಿದೆ.

Asus Zenfone 10: ಗೇಮಿಂಗ್ ಪ್ರಿಯರಿಗೆ ಸಂತಸದ ಸುದ್ದಿ: ಬರುತ್ತಿದೆ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್​​ನ ಹೊಸ ಫೋನ್
Asus Zenfone 10
Follow us
Vinay Bhat
|

Updated on: Jun 10, 2023 | 6:55 AM

ಗೇಮಿಂಗ್ ಪ್ರಿಯರ ನೆಚ್ಚಿನ ಸ್ಮಾರ್ಟ್​ಫೋನ್ ಬ್ರ್ಯಾಂಡ್ ಏಸಸ್ (Asus) ಸದ್ಯ ಹೊಸ ಮೊಬೈಲ್​ನೊಂದಿಗೆ ಮತ್ತೆ ಬಂದಿದೆ. ಕಂಪ್ಯೂಟರ್ ಗೇಮಿಂಗ್ ವೈಶಿಷ್ಟ್ಯಗಳನ್ನು ಸ್ಮಾರ್ಟ್​ಫೋನ್​ಗಳಲ್ಲಿ ಪರಿಚಯಿಸಿ ಸೈ ಎನಿಸಿರುವ ಏಸಸ್ ಇತ್ತೀಚೆಗಷ್ಟೆ ಭಾರತದಲ್ಲಿ ತನ್ನ ರೋಗ್ ಸರಣಿಯ ಒಂದು ಫೋನನ್ನು ಅನಾವರಣ ಮಾಡಿತ್ತು. ಇದೀಗ ಜೆನ್‌ಫೋನ್‌ (Asus Zenfone) ಸರಣಿಯಲ್ಲಿ ವಿನೂತನ ಫೋನ್‌ ಅನ್ನು ಲಾಂಚ್ ಮಾಡಲು ಸಜ್ಜಾಗಿದೆ. ಅದುವೇ ಜೆನ್‌ಫೋನ್‌ 10 (Asus Zenfone 10). ನೂತನ ಏಸಸ್‌ ಜೆನ್‌ಫೋನ್‌ 10 ಜೂನ್ 29 ರಂದು ಮಾರುಕಟ್ಟೆಗೆ ಅಪ್ಪಳಿಸಲಿದೆ. ಇದು ಈ ಹಿಂದಿನ ಜೆನ್‌ಫೋನ್‌ಗಳಿಗಿಂತ ಸಾಕಷ್ಟು ಅಪ್‌ಡೇಟ್‌ ಆಗಿದ್ದು, ಆಕರ್ಷಕ ಫೀಚರ್​ಗಳಿಂದ ಕೂಡಿದೆ. ಹಾಗಾದ್ರೆ ಈ ಸ್ಮಾರ್ಟ್​​ಫೋನ್​ನ ಬೆಲೆ ಎಷ್ಟು?, ಫೀಚರ್ಸ್​ ಏನು ಎಂಬ ಕುರಿತ ಎಲ್ಲ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟಿರಬಹುದು?:

ಏಸಸ್‌ ಜೆನ್‌ಫೋನ್‌ 10 ಫೋನ್‌ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಇದರ 16GB RAM + 256GB ವೇರಿಯಂಟ್‌ಗೆ ವಿದೇಶದಲ್ಲಿ $749. ಅಂದರೆ ಭಾರತದಲ್ಲಿ ಬೆಲೆ ಅಂದಾಜು 62,000ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಈ ಫೋನ್ ಮೂನ್‌ಲೈಟ್ ವೈಟ್, ಮಿಡ್‌ನೈಟ್ ಬ್ಲಾಕ್, ಸ್ಟಾರಿ ಬ್ಲೂ ಮತ್ತು ಸನ್‌ಸೆಟ್ ರೆಡ್ ಬಣ್ಣಗಳಲ್ಲಿ ಲಭ್ಯ ಆಗಲಿದೆ ಎನ್ನಲಾಗಿದೆ.

ಇದನ್ನೂ ಓದಿ
Image
Moto G13: ಬಂಪರ್ ಆಫರ್: ಕೇವಲ 9,999 ರೂ. ಗೆ ಸೇಲ್ ಆಗುತ್ತಿದೆ ಮೋಟೋ G13 ಸ್ಮಾರ್ಟ್​ಫೋನ್
Image
ಮಗಳ ಮೊಬೈಲ್ ಗೇಮ್ ಚಟದಿಂದ ₹52 ಲಕ್ಷ ಕಳೆದುಕೊಂಡ ಅಮ್ಮ, ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಕೇವಲ ₹5
Image
iQOO Neo 7 Pro: ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ವೇದಿಕೆ ಸಜ್ಜು: ಭಾರತದಲ್ಲಿ ಯಾವಾಗ ರಿಲೀಸ್?
Image
Tech Tips: ತಪ್ಪಿ ಬೇರೆಯವರ ನಂಬರ್​ಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ ಪಡೆಯುವುದು ಹೇಗೆ?

Vivo V29 Lite 5G: ಸ್ನ್ಯಾಪ್​ಡ್ರ್ಯಾಗನ್ ಪ್ರೊಸೆಸರ್, 64 MP ಕ್ಯಾಮೆರಾ ಕ್ರೇಜಿ ಫೋನ್

ಫೀಚರ್ಸ್ ಏನಿದೆ?:

ಜೆನ್‌ಫೋನ್‌ 10 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸಲ್‌ ರೆಸಲ್ಯೂಶನ್ ಸಾಮರ್ಥ್ಯದ 6.3 ಇಂಚಿನ AMOLED ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಇದು 120Hz ರಿಫ್ರೆಶ್ ರೇಟ್​ನೊಂದಿಗೆ ಬರಲಿದ್ದು, ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಹೊಂದಿರುತ್ತದೆ. ಅತ್ಯಂತ ಬಲಿಷ್ಠವಾದ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಸಹ ಪಡೆದಿರಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿರಲಿದೆ. ಇನ್ನೊಂದು ಕ್ಯಾಮೆರಾವು ಅಲ್ಟ್ರಾ-ವೈಡ್ 12 ಮೆಗಾ ಪಿಕ್ಸಾಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿರಲಿದೆ. ಅಂತೆಯೆ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 12 ಮೆಗಾ ಪಿಕ್ಸಾಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆತರಾ ಅಳವಡಿಸಲಾಗಿದೆ.

ಏಸಸ್‌ ಜೆನ್‌ಫೋನ್‌ 10 ಫೋನಿನ ಬ್ಯಾಟರಿ 5,000mAh ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ. ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದಿರಲಿದೆ. ಉಳಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ