Galaxy M53 5G: 108MP ಕ್ಯಾಮೆರಾದ ಗ್ಯಾಲಕ್ಸಿ M53 5G ಸ್ಮಾರ್ಟ್​​ಫೋನ್ ಖರೀದಿಸಬಹುದೇ?: ಇಲ್ಲಿದೆ ಉತ್ತರ

108MP Camera Phone: ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್​​53 5ಜಿ (Samsung Galaxy M53 5G) ಸ್ಮಾರ್ಟ್​​ಫೋನ್ ಬರೋಬ್ಬರಿ 108 ಮೆಗಾಫಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಆಕರ್ಷಕ ಕ್ಯಾಮೆರಾವನ್ನು ಹೊಂದಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ವಿಶೇಷತೆ ಏನೆಲ್ಲ ಇದೆ?, ಖರೀದಿಸಬಹುದೇ ಎಂಬುದನ್ನು ನೋಡೋಣ.

Galaxy M53 5G: 108MP ಕ್ಯಾಮೆರಾದ ಗ್ಯಾಲಕ್ಸಿ M53 5G ಸ್ಮಾರ್ಟ್​​ಫೋನ್ ಖರೀದಿಸಬಹುದೇ?: ಇಲ್ಲಿದೆ ಉತ್ತರ
Samsung Galaxy M53 5G
Follow us
TV9 Web
| Updated By: Vinay Bhat

Updated on: Apr 29, 2022 | 6:36 AM

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್‌ (Samsung) ಕಂಪನಿಯ ಗ್ಯಾಲಕ್ಸಿ M ಸರಣಿಯ ಫೋನ್​ಗಳಿಗೆ ಭಾರತದಲ್ಲಿ ಎಲ್ಲಿಲ್ಲದ ಬೇಡಿಕೆಯಿದೆ. ಈಗಾಗಲೇ ಈ ಸರಣಿಯಡಿಯಲ್ಲಿ ಕಂಪನಿ ಅನೇಕ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಪರಿಚಯಿಸಿದೆ. ಕಳೆದ ವಾರವಷ್ಟೆ ಮತ್ತೊಂದು ಬೊಂಬಾಟ್ ಫೋನನ್ನು ಭಾರತದಲ್ಲಿ ಸ್ಯಾಮ್​​ಸಂಗ್ ಬಿಡುಗಡೆ ಮಾಡಿತ್ತು. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್​​53 5ಜಿ (Samsung Galaxy M53 5G). ಅಚ್ಚರಿ ಎಂದರೆ ಇದು ಬರೋಬ್ಬರಿ 108 ಮೆಗಾಫಿಕ್ಸೆಲ್ (108MP Camera) ಸೆನ್ಸಾರ್ ಸಾಮರ್ಥ್ಯದ ಆಕರ್ಷಕ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ ಇದೀಗ ಖರೀದಿಗೆ ಸಿಗುತ್ತಿದೆ.  ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಹೊಂದಿರುವ ಈ ಫೋನ್ ಅಮೆಜಾನ್​ನಲ್ಲಿ ಸೇಲ್ ಕಾಣುತ್ತಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ವಿಶೇಷತೆ ಏನೆಲ್ಲ ಇದೆ?, ಖರೀದಿಸಬಹುದೇ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಭಾರದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 23,999 ರೂ. ನಿಗದಿ ಮಾಡಲಾಗದೆ. ಹಾಗೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 25,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಖರೀದಿಸುವವರು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು EMI ವಹಿವಾಟುಗಳಿಗೆ 2,500 ತ್ವರಿತ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇದು ನೀಲಿ ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ HD+ ಇನ್ಫಿನಿಟಿ ಒ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಸ್ಯಾಮ್‌ಸಂಗ್‌ನ ‘RAM ಪ್ಲಸ್’ ಫೀಚರ್ಸ್‌ ಹೊಂದಿರುವುದು ಮತ್ತೊಂದು ವಿಶೇಷ.

ಆಕರ್ಷಕವಾದ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಇನ್ನು ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಅಳವಡಿಸಲಾಗಿದೆ.

ಖರೀದಿಸಬಹುದೇ?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ಪ್ರಿಯರಿಗೆ ಹೇಳಿಮಾಡಿಸಿದಂತಿದೆ. ಈ ಬಾರಿ ತನ್ನ ಕ್ಯಾಮೆರಾ ಕ್ವಾಲಿಟಿಯಲ್ಲಿ ಸಾಕಷ್ಟು ಬದಲಾವಣೆ ತಂದಿದೆ. ಪ್ರಸಿದ್ಧ ವಿಮರ್ಷಕರ ಪ್ರಕಾರ ಇದರಲ್ಲಿ ನೈಟ್ ಮೋಡ್ ಫೋಟೋಗ್ರಫಿ ಕೂಡ ಅದ್ಭುತವಾಗಿದೆಯಂತೆ. ನೀವು ಕ್ಯಾಮೆರಾ ಪ್ರಿಯರಾಗಿದ್ದರೆ ಈ ಫೋನ್ ನಿಮಗೆ ಹಿಡಿಸಬಹುದು. ಹಾಗೆಯೆ ಇದರ ಡಿಸ್ ಪ್ಲೇ ಕೂಡ 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದ್ದು ಸಿನಿಮಾ ವೀಕ್ಷಣೆಗೆ, ಮೀಡಿಯಂ ರೇಂಜ್ ಇರುವ ಗೇಮಿಂಗ್​ಗೆ ಕೂಡ ಸಹಾಯವಾಗುತ್ತಿದೆ. ಒಟ್ಟಾರೆ ಮಧ್ಯಮ ಬೆಲೆಗೆ ಒಂದೊಳ್ಳೆ ಸ್ಮಾರ್ಟ್​​ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಉತ್ತಮ ಆಯ್ಕೆಯಾಗಿದೆ.

Narzo 50A Prime: 11,499 ರೂಪಾಯಿಯ ರಿಯಲ್‌ ಮಿ ನಾರ್ಜೋ 50A ಪ್ರೈಮ್ ಫೋನ್ ಇಂದಿನಿಂದ ಖರೀದಿಗೆ ಲಭ್ಯ

iQOO Z6 Pro 5G: ಭರ್ಜರಿ ಕ್ಯಾಮೆರಾ, ಬೊಂಬಾಟ್ ಬ್ಯಾಟರಿ: ದೇಶದಲ್ಲಿ ಐಕ್ಯೂ Z6 ಪ್ರೊ 5G, ಐಕ್ಯೂ Z6 4G ​​ಫೋನ್ ಬಿಡುಗಡೆ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ