Sign In

By signing in or creating an account, you agree with Associated Broadcasting Company's Terms & Conditions and Privacy Policy.

5G Smartphones: ಕಡಿಮೆ ಬೆಲೆಯಲ್ಲಿ ಸೂಪರ್ 5G ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ ಟಾಪ್ 5 ಫೋನ್

Best 5G Smartphones Under Rs. 25,0000: ಇಂದು ಮಾರುಕಟ್ಟೆಯಲ್ಲಿ ಆಕರ್ಷಕ 5ಜಿ ಫೋನ್​ಗಳು ಲಭ್ಯವಿದೆ. ಇದರ ಬೆಲೆ ಕೂಡ ದುಬಾರಿ ಆಗಿಲ್ಲ. 5ಜಿ ಸಂಪರ್ಕ, ಹೆಚ್ಚಿನ ರೆಸಲ್ಯೂಶನ್ ಕ್ಯಾಮೆರಾ ಮತ್ತು ವೇಗದ ಪ್ರೊಸೆಸರ್ ಹೊಂದಿರುವ 25,000 ರೂ. ಕ್ಕಿಂತ ಕಡಿಮೆ ಬೆಲೆಗೆ ಸಿಗುವ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ.

5G Smartphones: ಕಡಿಮೆ ಬೆಲೆಯಲ್ಲಿ ಸೂಪರ್ 5G ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ ಟಾಪ್ 5 ಫೋನ್
5G Smartphones
Follow us
Vinay Bhat
|

Updated on:Nov 28, 2023 | 1:54 PM

ಹಬ್ಬದ ಸೀಸನ್ ಮುಗಿದಿದೆ. ಆದಾಗ್ಯೂ, ಕೆಲವು ಕಂಪನಿಗಳು ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಡಿಸ್ಕೌಂಟ್ ದರದಲ್ಲಿ ಸ್ಮಾರ್ಟ್​ಫೋನ್​ಗಳನ್ನು (Smartphones) ಮಾರಾಟ ಮಾಡುತ್ತಿದೆ. ಹಬ್ಬದ ಸಮಯದಲ್ಲಿ ನಿಮಗೆ ಆಫರ್‌ಗಳನ್ನು ಪಡೆಯಲು ಸಾಧ್ಯವಾಗದಿದ್ದರೆ, ಈಗ ಮತ್ತೊಂದು ಅವಕಾಶವಿದೆ. ವಿಶೇಷವಾಗಿ ಜನಪ್ರಿಯ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಸ್ಮಾರ್ಟ್​ಫೋನ್‌ಗಳಿಗೆ ಅನೇಕ ಕೊಡುಗೆಗಳನ್ನು ನೀಡುತ್ತಿದೆ. 5ಜಿ ಸಂಪರ್ಕ, ಹೆಚ್ಚಿನ ರೆಸಲ್ಯೂಶನ್ ಕ್ಯಾಮೆರಾ ಮತ್ತು ವೇಗದ ಪ್ರೊಸೆಸರ್ ಹೊಂದಿರುವ ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಕೇವಲ ರೂ. 25,000 ಕ್ಕಿಂತ ಕಡಿಮೆ. ಆ ಸ್ಮಾರ್ಟ್​ಫೋನ್​ಗಳು ಯಾವುವು ಎಂಬುದನ್ನು ನೋಡೋಣ.

ಒನ್​ಪ್ಲಸ್ ನಾರ್ಡ್ CE 2 5G ಸ್ಮಾರ್ಟ್​ಫೋನ್ 8GB RAM ಮತ್ತು 128GB ಸಂಗ್ರಹಣೆಯೊಂದಿಗೆ ಬರುತ್ತದೆ. ಇದರ ಬೆಲೆ ರೂ. 24,999. ಈ ಫೋನ್ 65W ಸೂಪರ್ ವೂಕ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಶನ್ 900 ಚಿಪ್ ಸೆಟ್ ಅನ್ನು ಆಧರಿಸಿ ಕಾರ್ಯನಿರ್ವಹಿಸುತ್ತದೆ. 90Hz ಪೂರ್ಣ HD ಪ್ಲಸ್ AMOLED ಡಿಸ್ಪ್ಲೇ ಹೊಂದಿದೆ. AI ಆಧಾರಿತ ಟ್ರಿಪಲ್ ಕ್ಯಾಮೆರಾ ಸೆಟಪ್ ನೀಡಲಾಗಿದೆ.

Redmi 13C: ಭಾರತದಲ್ಲಿ ಈ ವರ್ಷದ ಕೊನೆಯ ಫೋನ್ ರಿಲೀಸ್ ಮಾಡಲು ಮುಂದಾದ ಶವೋಮಿ: ಯಾವುದು ನೋಡಿ

ಇದನ್ನೂ ಓದಿ
Image
ಐಕ್ಯೂ 11 ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬರೋಬ್ಬರಿ 13,000 ರೂ. ರಿಯಾಯಿತಿ
Image
25,000 ರೂ. ಒಳಗಿನ ಟಾಪ್ 5 ಟ್ರೆಂಡಿಂಗ್ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ
Image
ಈಗಷ್ಟೇ ತಯಾರಾಗುತ್ತಿರುವ ಐಫೋನ್ 16 ಬಗ್ಗೆ ಹೊರಬಿತ್ತು ಶಾಕಿಂಗ್ ಸುದ್ದಿ
Image
ಬಹುನಿರೀಕ್ಷಿತ ಒನ್​ಪ್ಲಸ್ 12 ಬಿಡುಗಡೆ ದಿನಾಂಕ ಬಹಿರಂಗ: ಫೀಚರ್ಸ್ ಏನಿದೆ?

ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಬೆಲೆ ರೂ. 23,999. ಇದು 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯದೊಂದಿಗೆ ಬರುತ್ತದೆ. ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7200 5G ಪ್ರೊಸೆಸರ್ ಅನ್ನು ಪ್ಯಾಕ್ ಮಾಡುತ್ತದೆ. 6.78-ಇಂಚಿನ 120Hz AMOLED ಡಿಸ್ ಪ್ಲೇ ಇದೆ. ಇದು 64MP Aura Lite OIS ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ, 4600mAh ಬ್ಯಾಟರಿಯು 66W ಫ್ಲಾಶ್ ಚಾರ್ಜ್ ಅನ್ನು ಬೆಂಬಲಿಸುತ್ತದೆ.

ಇನ್ಫಿನಿಕ್ಸ್ ಜೀರೋ 30 5G ಸ್ಮಾರ್ಟ್​ಫೋನ್ 8GB RAM ಮತ್ತು 256GB ಸಂಗ್ರಹದೊಂದಿಗೆ ಬರುತ್ತದೆ. ಇದರ ಬೆಲೆ ರೂ. 23,999. ಇದು ಫುಲ್ HD Plus ಡಿಸ್ ಪ್ಲೇ ಹೊಂದಿದೆ. ಮೀಡಿಯಾಟೆಕ್ ಡೈಮನ್ಸಿಟಿ 8020 ಪ್ರೊಸೆಸರ್, 5000mAh ಬ್ಯಾಟರಿ ಹೊಂದಿದೆ. 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಜೊತೆಗೆ 13MP ಮತ್ತು 2MP ಕ್ಯಾಮೆರಾ ಕೂಡ ಇದೆ.

ರಿಯಲ್ ಮಿ ನಾರ್ಜೊ 60 ಪ್ರೊ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯದೊಂದಿಗೆ ಬರುತ್ತದೆ. ಇದರ ಬೆಲೆ ರೂ. 23,999. ಇದು 120 ಡಿಗ್ರಿ ಬಾಗಿದ ಡಿಸ್ಪ್ಲೇ ಹೊಂದಿದೆ. 100MP ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಬ್ಯಾಟರಿಯು 5,000mAh ನಿಂದ ಕೂಡಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್​ಫೋನ್​ನ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯಕ್ಕೆ ರೂ. 21,999. ಇದು 6.5-ಇಂಚಿನ ಸೂಪರ್ AMOLED ಡಿಸ್ಪ್ಲೇ ಜೊತೆಗೆ ಪೂರ್ಣ HD ಪ್ಲಸ್ ರೆಸಲ್ಯೂಶನ್ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ ಬರುತ್ತದೆ. ಹಿಂಭಾಗದಲ್ಲಿ 50MP ಮುಖ್ಯ ಕ್ಯಾಮೆರಾ ಮತ್ತು 6000mAh ಬ್ಯಾಟರಿ ಸೆಟಪ್ ಇದೆ. ಇದು ಸ್ಯಾಮ್​ಸಂಗ್ ಎಕ್ಸಿನೊಸ್ 1280 ಆಕ್ಟಾ ಕೋರ್ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Tue, 28 November 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ