Best Smartphones: ಭಾರತದಲ್ಲಿ ಕೇವಲ 6,000 ರೂ. ಒಳಗೆ ಲಭ್ಯವಿರುವ ಬೆಸ್ಟ್​ ಸ್ಮಾರ್ಟ್​​ಫೋನ್​ಗಳು ಇಲ್ಲಿದೆ ನೋಡಿ

Best Smartphones Under RS. 6000: ನೀವು 10000 ಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಕೊಂಡರೆ 6,000 ರೂಪಾಯಿಗಳಿಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಬಹುದಾಗಿದೆ. ಅವುಗಳಲ್ಲಿ ಬೆಸ್ಟ್​ ಸ್ಮಾರ್ಟ್​ಫೋನಿನ ಪಟ್ಟಿ ಇಲ್ಲಿದೆ ನೋಡಿ.

Best Smartphones: ಭಾರತದಲ್ಲಿ ಕೇವಲ 6,000 ರೂ. ಒಳಗೆ ಲಭ್ಯವಿರುವ ಬೆಸ್ಟ್​ ಸ್ಮಾರ್ಟ್​​ಫೋನ್​ಗಳು ಇಲ್ಲಿದೆ ನೋಡಿ
Smartphones
TV9kannada Web Team

| Edited By: Vinay Bhat

Jul 02, 2022 | 12:03 PM

ಸ್ಮಾರ್ಟ್​​ಫೋನ್​ಗಳೆಂದರೆ (Smartphone) ಅದರ ಬೆಲೆ ಭಾರೀ ದುಬಾರಿ ಎಂಬ ಕಾಲ ಹೋಗಾಗಿದೆ. ಇಂದು ದಿನಕ್ಕೊಂದರಂತೆ ಮೊಬೈಲ್​ಗಳು ಮಾರುಕಟ್ಟೆಯಲ್ಲಿ ಬಿಡುಗಡೆ ಆಗುತ್ತಿದೆ. ಕೈ ಗೆಟಕುವ ಬೆಲೆಯಿಂದ ಹಿಡಿದು ಹೈ ಎಂಡ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇದರಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು (Budget Smartphones) ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಈ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೆಲೆಯ ಸ್ಮಾರ್ಟ್‌ಫೋನ್‌ಗಳ ರೀತಿಯ ಕಾರ್ಯದಕ್ಷತೆ ಹೊಂದಿಲ್ಲದಿದ್ದರೂ ಮೂಲಭೂತವಾಗಿ ಬೇಕಾದ ಫೀಚರ್ಸ್‌ಗಳನ್ನು ಒಳಗೊಂಡಿರುತ್ತವೆ. ಒಂದು ವೇಳೆ ನೀವು 10000 ಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಮೊಬೈಲ್ (Mobile) ಖರೀದಿಸಬೇಕು ಎಂದು ಕೊಂಡರೆ 6,000 ರೂಪಾಯಿಗಳಿಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಬಹುದಾಗಿದೆ. ಅವುಗಳಲ್ಲಿ ಬೆಸ್ಟ್​ ಸ್ಮಾರ್ಟ್​ಫೋನಿನ ಪಟ್ಟಿ ಇಲ್ಲಿದೆ ನೋಡಿ.

ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ M01 ಕೋರ್‌ ಸ್ಮಾರ್ಟ್‌ಫೋನ್‌ ಅತಿ ಕಡಿಮೆ ಬೆಲೆ ಲಭ್ಯವಿರುವ ಬೆಸ್ಟ್ ಮೊಬೈಲ್ ಆಗಿದೆ. ಇದರ ಬೆಲೆ ಕೇವಲ 4,999 ರೂ.. ಈ ಸ್ಮಾರ್ಟ್‌ಫೋನ್‌ 5.1-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಎಂಟಿ 6739 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಗೋ 10 ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್ ಹೊಂದಿದೆ. 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌, 5 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

OnePlus Nord: ಭಾರತದಲ್ಲಿ ಬಿಡುಗಡೆಯಾಯ್ತು OnePlus Nord 2T 5G, ಬಿಡುಗಡೆಯ ವಿಶೇಷ ಕೊಡುಗೆಗಳು ಇಲ್ಲಿವೆ ನೋಡಿ

ಜಿಯೋ ಫೋನ್ ನೆಕ್ಸ್ಟ್ 4G ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಜಿಯೋ ಮತ್ತು ಗೂಗಲ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು 5.45-ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ QM215 ಪ್ರೊಸೆಸರ್‌ ಬಲವನ್ನು ಪಡೆದಿದೆ. OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. 13 ಮೆಗಾಪಿಕ್ಸೆಲ್ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇದೆ. ಜೊತೆಗೆ 3500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌  5,730 ರೂ. ಬೆಲೆಯಲ್ಲಿ ಲಭ್ಯವಾಗಲಿದೆ.

ರೆಡ್ಮಿ ಗೋ ಸ್ಮಾರ್ಟ್‌ಫೋನ್‌ ಕೂಡ ಕೈ ಗೆಟಕುವ ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ 720×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 425 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ Go ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ 3000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 5,199 ರೂ. ಬೆಲೆಯನ್ನು ಹೊಂದಿದೆ.

ಮೈಕ್ರೋಮ್ಯಾಕ್ಸ್ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ 4 ಇಂಚಿನ ಡಬ್ಲ್ಯುವಿಜಿಎ ಡಿಸ್‌ಪ್ಲೇ ಹೊಂದಿದೆ. ಕ್ವಾಡ್-ಕೋರ್ ಮೀಡಿಯಾ ಟೆಕ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 7.0 ನೌಗಾಟ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. 5 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು 1,600mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ ಕೇವಲ 3,710 ರೂ.

ಲಾವಾ Z1S ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ 4G ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 720×1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಹೊಂದಿರುವ 5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಯೂನಿಸೋಕ್‌ SC9863 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 5 ಮೆಗಾಪಿಕ್ಸೆಲ್ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 3100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 5,399 ರೂ. ಬೆಲೆಯಲ್ಲಿ ಲಭ್ಯವಾಗಲಿದೆ.

ಇದನ್ನೂ ಓದಿ

Nokia G11 Plus: ಬಜೆಟ್ ಬೆಲೆಗೆ ಬಂಪರ್ ಫೋನ್: ನೋಕಿಯಾದಿಂದ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ

Follow us on

Related Stories

Most Read Stories

Click on your DTH Provider to Add TV9 Kannada