Best Smartphone: ಕಡಿಮೆ ಬೆಲೆಗೆ ಬಿಗ್ ಬ್ಯಾಟರಿಯ ಬೆಸ್ಟ್ ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ ಲಿಸ್ಟ್

Best Battery Backup Smartphone: ಈ ಸ್ಟೋರಿಯಲ್ಲಿ ಬಿಗ್ ಬ್ಯಾಟರಿ ಜೊತೆಗೆ ಉತ್ತಮ ಫೀಚರ್ಸ್ ಹೊಂದಿರುವ ಬೆಸ್ಟ್ ಸ್ಮಾರ್ಟ್​ಫೋನ್​ಗಳ ಪಟ್ಟಿ ನೀಡಲಾಗಿದೆ. ಈ ಎಲ್ಲ ಫೋನ್​ಗಳು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಖರೀದಿಗೆ ಲಭ್ಯವಿದೆ.

Best Smartphone: ಕಡಿಮೆ ಬೆಲೆಗೆ ಬಿಗ್ ಬ್ಯಾಟರಿಯ ಬೆಸ್ಟ್ ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ ಲಿಸ್ಟ್
Best Battery Backup Smartphone
Follow us
TV9 Web
| Updated By: Vinay Bhat

Updated on: Feb 20, 2022 | 1:22 PM

7-8 ವರ್ಷಗಳ ಹಿಂದೆ ಸ್ಮಾರ್ಟ್​ಫೋನ್ (Smartphone) ಖರೀದಿಸಬೇಕು ಎಂದರೆ ಅದಕ್ಕೆ ಹರಸಾಹಸ ಪಡಬೇಕಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ದಿನಕ್ಕೊಂದರಂತೆ ಮೊಬೈಲ್​ಗಳು ಮಾರುಕಟ್ಟೆಗೆ ಪ್ರವೇಶ ಪಡೆಯುತ್ತಿದ್ದು, ಅದುಕೂಡ ಅತಿ ಕಡಿಮೆ ಬೆಲೆಗೆ. ಇಂದು ಸ್ಮಾರ್ಟ್​ಫೋನ್ ಇಲ್ಲದವರು ಯಾರು ಎಂದು ಹುಡುಕಿದರೆ ಬೆರಳೆಣಿಕೆಯಷ್ಟೆ ಜನರು ಸಿಗಬಹುದಷ್ಟೆ. ಹೀಗಾಗಿ ಪ್ರತಿಯೊಬ್ಬರ ಬಳಿಯೂ ಸ್ಮಾರ್ಟ್​ಫೋನ್​ಗಳಿವೆ. ಅನೇಕರು, ವಾವ್ ಕ್ಯಾಮೆರಾ ಚೆನ್ನಾಗಿದೆ, ಉತ್ತಮ ಪ್ರೊಸೆಸರ್, ಡಿಸೈನ್ ಸ್ಟೈಲಿಶ್ ಆಗಿದೆ ಎಂದು ಫೋನ್ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಬ್ಯಾಟರಿ ದೊಡ್ಡ ಮಟ್ಟದ್ದಿರುವುದಿಲ್ಲ, ಬೇಗನೆ ಕಾಲಿಯಾಗಿ ಬಿಡುತ್ತದೆ. ಫೋನ್ ಖರೀದಿ ಮಾಡುವಾಗ ನಾವು ಮುಖ್ಯವಾಗಿ ಗಮನದಲ್ಲಿರಿಸಬೇಕಾದ ಅಂಶಗಳಲ್ಲಿ ಡಿವೈಸ್ ಬ್ಯಾಟರಿ ಕೂಡ ಒಂದು. ಈ ಸ್ಟೋರಿಯಲ್ಲಿ ಬಿಗ್ ಬ್ಯಾಟರಿ (Big Battery Phone) ಜೊತೆಗೆ ಉತ್ತಮ ಫೀಚರ್ಸ್ ಹೊಂದಿರುವ ಬೆಸ್ಟ್ ಸ್ಮಾರ್ಟ್​ಫೋನ್​ಗಳ ಪಟ್ಟಿ ನೀಡಲಾಗಿದೆ. ಈ ಎಲ್ಲ ಫೋನ್​ಗಳು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ (Amazon) ಖರೀದಿಗೆ ಲಭ್ಯವಿದೆ.

ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದರ ಬೆಲೆ 14,499 ರೂ. ಆಗಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಆಕ್ಟಾ ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಫೋನಿನ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಈ ಫೋನ್ 4,500mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಅದಕ್ಕೆ ಪೂರಕವಾಗಿ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ. ಇದರ ಬೆಲೆ 24,499 ರೂ. ಆಗಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ‌ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್‌ ನೈಟ್‌, ಗ್ಲಾಸಿಲ್‌ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ. ಇದರ ಬೆಲೆ 18,2999 ರೂ. ಆಗಿದೆ.

ಒಪ್ಪೋ A74 5G ಫೋನ್ 1,080×2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದರ ಬೆಲೆ 17,990 ರೂ. ಆಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ. ಇದರ ಬೆಲೆ 14,999 ರೂ. ಆಗಿದೆ.

Oppo A76: ಸ್ನಾಪ್‌ಡ್ರಾಗನ್ ಪ್ರೊಸೆಸರ್‌, 5000mAh ಬ್ಯಾಟರಿ: ಅತಿ ಕಡಿಮೆ ಬೆಲೆಯ ಒಪ್ಪೋ A76 ಸ್ಮಾರ್ಟ್‌ಫೋನ್‌ ಬಿಡುಗಡೆ