Infinix Zero 5G 2023: ಅತ್ಯಂತ ಕಡಿಮೆ ಬೆಲೆಯ 5G ಫೋನ್ ಇನ್ಫಿನಿಕ್ಸ್ ಜಿರೋ 2023 ಮಾರಾಟ ಆರಂಭ: ಎಷ್ಟು ರೂ.?
ಮೊನ್ನೆಯಷ್ಟೆ ಇನ್ಫಿನಿಕ್ಸ್ ಜಿರೋ 5ಜಿ 2023 (Infinix Zero 5G 2023) ಫೋನನ್ನು ಭಾರತದಲ್ಲಿ ಅನಾವರಣ ಮಾಡಲಾಗಿತ್ತು. ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಹಾಗಾದರೆ ಇದರ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಪಡೆದುಕೊಂಡಿದೆ ಎಂಬುದನ್ನು ನೋಡೋಣ.
ಮಾರುಕಟ್ಟೆಯಲ್ಲಿ ಹೆಚ್ಚಾಗಿ ಅಗ್ಗದ ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್ ಕಂಪನಿ ಕಳೆದ ವರ್ಷ ತನ್ನ ಇನ್ಫಿನಿಕ್ಸ್ ಜಿರೋ 5ಜಿ (Infinix Zero 5G) ಎಂಬ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಇದು ಇನ್ಫಿನಿಕ್ಸ್ನ ಚೊಚ್ಚಲ 5ಜಿ ಆಗಿದ್ದರಿಂದ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಬಳಿಕ ಮೊನ್ನೆಯಷ್ಟೆ ಈ ಫೋನಿನ ಅಪ್ಗ್ರೇಡ್ ವರ್ಷನ್ ಇನ್ಫಿನಿಕ್ಸ್ ಜಿರೋ 5ಜಿ 2023 (Infinix Zero 5G 2023) ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಇನ್ಫಿನಿಕ್ಸ್ ಜಿರೋ 5G 2023 ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು ಪವರ್ ಫುಲ್ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೆ ಸದ್ಯದ ಮಾರುಕಟ್ಟೆಯಲ್ಲಿ ಸೇಲ್ ಆಗುತ್ತಿರುವ ಕಡಿಮೆ ಬೆಲೆಯ 5ಜಿ ಫೋನ್ಗಳ (5G Phone) ಸಾಲಿಗೆ ಇದುಕೂಡ ಸೇರ್ಪಡೆಯಾಗಿದೆ.
ಬೆಲೆ ಎಷ್ಟು?:
ಈ ಸ್ಮಾರ್ಟ್‌ಫೋನ್ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8 GB RAM ಮತ್ತು 128 GB ಸ್ಟೋರೆಜ್ ಸಾಮರ್ಥ್ಯಕ್ಕೆ 17,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಈ ಫೋನ್ ಇಂದಿನಿಂದ ಸೇಲ್ ಕಾಣುತ್ತಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಘೋಷಿಸಲಾಗಿದ್ದು, ಅಮೆರಿಕನ್ ಎಕ್ಸ್ಪ್ರೆಸ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಶೇ. 10 ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದು. ಅಂತೆಯೆ ಫ್ಲಿಪ್ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ನಿಂದ ಪಡೆದುಕೊಂಡರೆ ಶೇ. 5 ರಷ್ಟು ಡಿಸ್ಕೌಂಟ್ ಇದೆ.
Realme GT Neo 5: 240W ಫಾಸ್ಟ್ ಚಾರ್ಜಿಂಗ್: ಸ್ಮಾರ್ಟ್‌ಫೋನ್ ಮಾರುಕಟ್ಟೆಯನ್ನು ದಂಗಾಗಿಸಿದ ರಿಯಲ್ GT ನಿಯೋ 5
ಏನು ಫೀಚರ್ಸ್:
ಇನ್ಫಿನಿಕ್ಸ್ ಜಿರೋ 5G 2023 ಸ್ಮಾರ್ಟ್‌ಫೋನ್ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12ನ ಮೇಲೆ XOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ ಕೂಡ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಮುಂಭಾಗ ಡ್ಯುಯೆಲ್ ಫ್ಲ್ಯಾಶ್ ಇರುವುದು ವಿಶೇಷ. 4K ವಿಡಿಯೋ ರೆಕಾರ್ಡಿಂಗ್ ಆಯ್ಕೆ ಕೂಡ ಇದೆ.
ಇನ್ಫಿನಿಕ್ಸ್ ಜಿರೋ 5G 2023 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, FM ರೆಡಿಯೋ, ಬ್ಲೂಟೂತ್, ಹಾಟ್‌ಸ್ಪಾಟ್, ಯುಎಸ್ಬಿ ಟೈಪ್-C, ವೈಫೈ, 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ. ಫಿಂಗರ್ಪ್ರಿಂಟ್ ಸೆನ್ಸಾರ್ ಆಯ್ಕೆ ಅಳವಡಿಸಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:20 pm, Sat, 11 February 23