Moto G42: 50MP ಕ್ಯಾಮೆರಾ, 5000mAh ಬ್ಯಾಟರಿ: ಭರ್ಜರಿ ಸೇಲ್ ಕಾಣುತ್ತಿದೆ ಕಡಿಮೆ ಬೆಲೆಯ ಮೋಟೋ G42

ಮೋಟೋರೊಲ (Motorola) ಕಂಪನಿ ಕಳೆದ ವಾರವಷ್ಟೆ ಭಾರತದಲ್ಲಿ ಮೋಟೋ ಜಿ42 (Moto G42) ಅನ್ನು ಲಾಂಚ್ ಮಾಡಿತ್ತು. ಈ ಫೋನ್ ಇಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಮೊದಲ ಸೇಲ್ ಕಾಣುತ್ತಿದೆ.

Moto G42: 50MP ಕ್ಯಾಮೆರಾ, 5000mAh ಬ್ಯಾಟರಿ: ಭರ್ಜರಿ ಸೇಲ್ ಕಾಣುತ್ತಿದೆ ಕಡಿಮೆ ಬೆಲೆಯ ಮೋಟೋ G42
Moto G42
Follow us
TV9 Web
| Updated By: Vinay Bhat

Updated on: Jul 11, 2022 | 2:45 PM

ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡಿ ವಿಶೇಷ ಸ್ಥಾನ ಸಂಪಾದಿಸಿರುವ ಮೋಟೋರೊಲ (Motorola) ಕಂಪನಿ ಕಳೆದ ವಾರವಷ್ಟೆ ಭಾರತದಲ್ಲಿ ಮೋಟೋ ಜಿ42 (Moto G42) ಅನ್ನು ಲಾಂಚ್ ಮಾಡಿತ್ತು. ಈ ಫೋನ್ ಇಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಮೊದಲ ಸೇಲ್ ಕಾಣುತ್ತಿದೆ. ಇದು ಮೋಟೋ G41 ಸ್ಮಾರ್ಟ್​​ಫೋನ್​ನ ಮುಂದಿನ ಆವೃತ್ತಿಯಾಗಿದೆ. ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿರುವ ರೆಡ್ಮಿ ನೋಟ್ 11, ರೆಡ್ಮಿ 9i (Redmi 9i), ಪೋಕೋ M4 Pro ಸ್ಮಾರ್ಟ್​​ಫೋನ್​ಗಳಿಗೆ ಮೋಟೋ G42 ಕಠಿಣ ಪೈಪೋಟಿ ನೀಡಲಿದೆ. ಅನೇಕ ಆಕರ್ಷಕ ಫೀಚರ್​ಗಳಿರುವ ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿದೆ ಎಂಬುದು ವಿಶೇಷ. ಹಾಗಾದ್ರೆ ಮೋಟೋ G42 ಸ್ಮಾರ್ಟ್​​ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್​ಗಳಿವೆ?, ಆಫರ್ ಏನು? ಎಂಬುದನ್ನು ನೋಡೋಣ.

  1. ಮೋಟೋ G42 ಸ್ಮಾರ್ಟ್​​ಫೋನ್ ಭಾರತದಲ್ಲಿ ಸದ್ಯಕ್ಕೆ ಒಂದು ಆಯ್ಕೆಯಲ್ಲಷ್ಟೆ ರಿಲೀಸ್ ಆಗಿದೆ. ಇದರ 4GB RAM + 64 GB ಸ್ಟೋರೇಜ್‌ ಸಾಮರ್ಥ್ಯಕ್ಕೆ 13,999 ರೂ. ನಿಗದಿ ಮಾಡಲಾಗಿದೆ.
  2. ಇಂದು ಮೊದಲ ಸೇಲ್ ಪ್ರಯುಕ್ತ SBI ಕಾರ್ಡ್​​ ಮೂಲಕ ಖರೀದಿಸಿದರೆ ಮೋಟೋ G42 ಮೇಲೆ 1,000 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಈ ಮೂಲಕ ಈ ಫೋನನ್ನು ನೀವು 12,999 ರೂ. ಗೆ ನಿಮ್ಮದಾಗಿಸಬಹುದು.
  3. ಈ ಸ್ಮಾರ್ಟ್‌ಫೋನ್‌ 6.4 ಇಂಚಿನ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದೆ.
  4. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್‌ 12 ನ ಇತ್ತೀಚಿನ ಆವೃತ್ತಿಯ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
  5. ಇದನ್ನೂ ಓದಿ
    Image
    Vivo V23 5G: ಕಲರ್ ಚೇಂಜ್ ಆಗುವ ವಿವೋ V23 5G ಫೋನ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್: ಆಫರ್ ಮಿಸ್ ಮಾಡ್ಬೇಡಿ
    Image
    Nothing Phone (1): ನಥಿಂಗ್ ಫೋನ್ 1 ಖರೀದಿಸುವವರಿಗೆ ಭಾರೀ ನಿರಾಸೆ: ಲೀಕ್ ಆದ ವಿಡಿಯೋದಲ್ಲಿ ಏನಿದೆ ನೋಡಿ
    Image
    WhatsApp: ವಾಟ್ಸ್​ಆ್ಯಪ್​ ಆನ್​ಲೈನ್ ಸ್ಟೇಟಸ್​​ನಲ್ಲಿ ಮಹತ್ವದ ಬದಲಾವಣೆ: ಬರುತ್ತಿದೆ ಹೊಸ ಫೀಚರ್
    Image
    Infinix Note 12 5G: ಭಾರತದಲ್ಲಿ 108MP ಕ್ಯಾಮೆರಾದ ಹೊಸ ಫೋನ್ ಬಿಡುಗಡೆ: ಬೆಲೆ ಕೇವಲ 17,999 ರೂ.
  6. ಇದು 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯವಾಗಲಿದೆ.
  7. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಒಟ್ಟಾರೆ ಬ್ಯಾಟರಿ ಕಾರ್ಯಕ್ಷಮತೆಯಲ್ಲಿ 20 ಪ್ರತಿಶತದಷ್ಟು ವರ್ಧಕವನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ.
  8. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ.
  9. ಇದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿಯೊಂದಿಗೆ ಬರುತ್ತಿರುವುದು ವಿಶೇಷ. ಜೊತೆಗೆ ಲೋ ಲೈಟ್‌ ಸ್ಟೇಟಸ್‌ನಲ್ಲಿ ಫೋಟೋಗಳನ್ನು ಕ್ಲಿಕ್ ಮಾಡಲು ನೈಟ್ ವಿಷನ್ ಮೋಡ್ ಅನ್ನು ಒಳಗೊಂಡಿದೆ. 16 ಮೆಗಾಫಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ಕೂಡ ಇದೆ.
  10. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಯನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡಾಲ್ಬಿ ಅಟ್ಮೋಸ್‌ ಬೆಂಬಲದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ