Moto G32: ಮೋಟೋ ಫೋನ್​ಗಳಿಗೆ ಭರ್ಜರಿ ಬೇಡಿಕೆ: ಹಳೆಯ ಮೊಬೈಲ್ ಹೊಸ ಸ್ಟೋರೇಜ್​ನಲ್ಲಿ ಬಿಡುಗಡೆ

ಕಳೆದ ವರ್ಷ ರಿಲೀಸ್ ಆದ ಮೋಟೋ ಜಿ32 (Moto G32) ಸ್ಮಾರ್ಟ್‌ಫೋನ್​ನ ಹೊಸ ಸ್ಟೋರೇಜ್ ಆಯ್ಕೆ ಇದೀಗ ಬಿಡುಗಡೆ ಆಗಿದೆ. ಆಕರ್ಷಕ ಕ್ಯಾಮೆರಾ, ಬ್ಯಾಟರಿ ಇರುವ ಈ ಫೋನಿನ ಬೆಲೆ ಎಷ್ಟು?

Moto G32: ಮೋಟೋ ಫೋನ್​ಗಳಿಗೆ ಭರ್ಜರಿ ಬೇಡಿಕೆ: ಹಳೆಯ ಮೊಬೈಲ್ ಹೊಸ ಸ್ಟೋರೇಜ್​ನಲ್ಲಿ ಬಿಡುಗಡೆ
Moto G35
Follow us
Vinay Bhat
|

Updated on: Mar 22, 2023 | 6:55 AM

ಮೋಟೋರೊಲಾ (Motorola) ಕಂಪನಿಯ ಸ್ಮಾರ್ಟ್​​ಫೋನ್​ಗಳಿಗೆ ಈಗ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಬಜೆಟ್ ಬೆಲೆಯ ಜೊತೆಗೆ ಹೈರೇಂಜ್ ಮಾದರಿಯಲ್ಲಿ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿರುವುದು ಇದಕ್ಕೆ ಕಾರಣ ಎನ್ನಬಹುದು. ಇತ್ತೀಚೆಗಷ್ಟೆ 200 ಮೆಗಾಫಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್​ಫೋನ್ ಅನ್ನು ಪರಿಚಯಿಸಿ ಭರ್ಜರಿ ಸದ್ದು ಮಾಡಿತ್ತು. ಇದರ ನಡುವೆ ಮೋಟೋರೊಲಾ ಕಂಪನಿ ಈ ಹಿಂದೆ ಬಿಡುಗಡೆ ಮಾಡಿ ಭರ್ಜರಿ ಸೇಲ್ ಕಂಡ ಫೋನುಗಳನ್ನು ಹೊಸ ವೇರಿಯಂಟ್​ನಲ್ಲಿ ಅನಾವರಣ ಮಾಡುತ್ತಿದೆ. ಅದರಂತೆ ಇದೀಗ ಕಳೆದ ವರ್ಷ ರಿಲೀಸ್ ಆದ ಮೋಟೋ ಜಿ32 (Moto G32) ಸ್ಮಾರ್ಟ್‌ಫೋನ್​ನ ಹೊಸ ಸ್ಟೋರೇಜ್ ಆಯ್ಕೆ ಬಿಡುಗಡೆ ಆಗಿದೆ. ಆಕರ್ಷಕ ಕ್ಯಾಮೆರಾ, ಬ್ಯಾಟರಿ ಇರುವ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​ ಇದೆ ಎಂಬುದನ್ನು ನೋಡೋಣ.

  1. ಮೋಟೋ G32 ಸ್ಮಾರ್ಟ್‌ಫೋನ್‌ ಆರಂಭದಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿತ್ತು. ಇದರ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆಗೆ 10,499 ರೂ. ದೆ.
  2. ಇದೀಗ ಬಿಡುಗಡೆ ಆಗಿರುವ ಹೊಸ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 11,999 ರೂ. ನಿಗದಿ ಮಾಡಲಾಗಿದೆ.
  3. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಕೂಡ ನೀಡಲಾಗಿದ್ದು, ಎಸ್​ಬಿಐ ಬ್ಯಾಂಕ್ ಕಾರ್ಡ್ ಮೂಲಕ ಪಡೆದುಕೊಂಡರೆ ಶೇ. 10 ರಷ್ಟು ರಿಯಾಯಿತಿ ಸಿಗಲಿದೆ.
  4. ಈ ಫೋನ್ 6.5 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ದ ಜೊತೆಗೆ 90Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
  5. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  6. ಮೋಟೋ G32 ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ F1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ F2.2 ಲೆನ್ಸ್‌ ಹೊಂದಿರುವ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್‌ ಹೊಂದಿದೆ.
  7. ಈ ಫೋನ್​ನಲ್ಲಿರುವ ಮೂರನೇ ಕ್ಯಾಮೆರಾ F2 ಜೊತೆಗೆ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
  8. ಬಲಿಷ್ಠವಾದ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಯುಎಸ್​ಬಿ-C ಪೋರ್ಟ್ ಅನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್