Best Camera Phone 2021: ನೀವು ಬೆಸ್ಟ್ ಕ್ಯಾಮೆರಾ, ಬ್ಯಾಟರಿ ಸಾಮರ್ಥ್ಯವಿರುವ ಫೋನ್ ಹುಡುಕುತ್ತಿದ್ದೀರಾ?: ಹಾಗಾದ್ರೆ ಇಲ್ಲೊಮ್ಮೆ ನೋಡಿ
TV9 Web | Updated By: Vinay Bhat
Updated on:
Dec 09, 2021 | 3:02 PM
Best Camera Smartphones: 108MP ಕ್ಯಾಮೆರಾ ಸ್ಮಾರ್ಟ್ಫೋನ್ ಕೂಡ ಮಾರುಕಟ್ಟೆಯಲ್ಲಿದೆ. ಆದರೆ, ಇಲ್ಲಿ ಫೋಟೋ ಕ್ಲಾರಿಟಿ ಹೇಗಿದೆ ಎಂಬುದು ಪ್ರಮುಖ ಪಾತ್ರ ವಹಿಸುತ್ತದೆ. ಅದರಂತೆ ಸದ್ಯ ಕಡಿಮೆ ಬೆಲೆಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ದೊರಕುವ ಮತ್ತು ಆಕರ್ಷಕ ಕ್ಯಾಮೆರಾ ಮತ್ತು ಬ್ಯಾಟರಿ ಸ್ಮಾರ್ಟ್ಫೋನ್ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.
1 / 8
ಇಂದು ಅನೇಕ ಭಾರತೀಯರು ಒಂದು ಉತ್ತಮ ಸ್ಮಾರ್ಟ್ಫೋನನ್ನು (Smartphone) ಅದರಲ್ಲೂ ಅತ್ಯುತ್ತಮ ಕ್ಯಾಮೆರಾ ಸೌಲಭ್ಯ ಇರುವ ಫೋನನ್ನು ಬಜೆಟ್ ಬೆಲೆಯಲ್ಲಿ ಖರೀದಿಸಬೇಕು ಎಂದುಕೊಳ್ಳುತ್ತಾರೆ. ಹಾಗಾಗಿಯೇ, ಭಾರತದಲ್ಲಿ ಬಹುತೇಕ ಎಲ್ಲಾ ಮೊಬೈಲ್ (Mobile) ಕಂಪೆನಿಗಳು ಆಕರ್ಷಕ ಕ್ಯಾಮೆರಾ ಸ್ಮಾರ್ಟ್ಫೋನ್ಗಳ ತಯಾರಿಕೆಯಲ್ಲಿ ತೊಡಗಿಕೊಂಡಿವೆ.
2 / 8
108MP ಕ್ಯಾಮೆರಾ ಸ್ಮಾರ್ಟ್ಫೋನ್ ಕೂಡ ಮಾರುಕಟ್ಟೆಯಲ್ಲಿದೆ. ಆದರೆ, ಇಲ್ಲಿ ಫೋಟೋ ಕ್ಲಾರಿಟಿ ಹೇಗಿದೆ ಎಂಬುದು ಪ್ರಮುಖ ಪಾತ್ರ ವಹಿಸುತ್ತದೆ. ಮಾರುಕಟ್ಟೆಯು ಅತ್ಯಂತ ಸೂಕ್ಷ್ಮವಾಗಿರುವಂತಹ ಭಾರತದಂತಹ ದೇಶಗಳಲ್ಲಿ ಬೆಲೆಯ ವಿಚಾರವು ಬಹಳಷ್ಟು ಮುಖ್ಯ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ.
3 / 8
ಅದರಂತೆ ಸದ್ಯ ಕಡಿಮೆ ಬೆಲೆಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ದೊರಕುವ ಮತ್ತು ಆಕರ್ಷಕ ಕ್ಯಾಮೆರಾ ಸ್ಮಾರ್ಟ್ಫೋನ್ಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.
4 / 8
ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ 6.43 ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್-ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇದರ ಬೆಲೆ 24,999 ರೂ. ಆಗಿದೆ.
5 / 8
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 6.43 ಇಂಚಿನ AMOLED ಫುಲ್ ಹೆಚ್ಡಿ ಡಿಸ್ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಬೆಲೆ 12,999 ರೂ. ಆಗಿದೆ.
6 / 8
ಸ್ಯಾಮ್ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 6.5 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್ಗಳನ್ನು ಬೆಂಬಲಿಸುತ್ತದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 11,499 ರೂ. ಆಗಿದೆ.
7 / 8
ಒಪ್ಪೋ A74 5G 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಸ್ನ್ಯಾಪ್ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್ನಲ್ಲಿವೆ. 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದರ ಬೆಲೆ 15,990 ರೂ. ಆಗಿದೆ.
8 / 8
ಒನ್ಪ್ಲಸ್ ನಾರ್ಡ್ 2 5G ಸ್ಮಾರ್ಟ್ಫೋನ್ 6.43 ಇಂಚಿನ Fluid AMOLED ಡಿಸ್ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್ಸೆಟ್ ಪ್ರೊಸೆಸರ್ ಅನ್ನು ಹೊಂದಿದೆ. ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇದರ ಬೆಲೆ 29,999 ರೂ. ಆಗಿದೆ.