Best Camera Phones: 50,000 ರೂ. ಒಳಗೆ ಸಿಗುತ್ತಿರುವ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

Smartphones under Rs. 50000: ನೀವು 50,000 ರೂ. ಒಳಗಡೆ ಖರೀದಿಸಬಹುದಾದ ಉತ್ತಮ ಕ್ಯಾಮೆರಾದ ಅತ್ಯುತ್ತಮ ಸ್ಮಾರ್ಟ್​​ಫೋನ್​ಗಳು ಯಾವುವು ಎಂಬುದನ್ನು ನೋಡೋಣ.

Best Camera Phones: 50,000 ರೂ. ಒಳಗೆ ಸಿಗುತ್ತಿರುವ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ
Camera Phones
Follow us
Vinay Bhat
|

Updated on: Jun 12, 2023 | 2:24 PM

ಭಾರತೀಯ ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್​ಗಳ ಬಿಡುಗಡೆ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಆಕರ್ಷಕ ಕ್ಯಾಮೆರಾ (Camera), ಉತ್ತಮ ಬ್ಯಾಟರಿ ಇರುವ ಫೋನ್ ರಿಲೀಸ್ ಆಯಿತು ಎಂದಾದರೆ ಎಗ್ಗಿಲ್ಲದೆ ಸೇಲ್ ಆಗುತ್ತದೆ. ಭಾರತದ ಮಾರ್ಕೆಟ್​ನಲ್ಲಿ 108 ಮೆಗಾಫಿಕ್ಸೆಲ್ ಸ್ಮಾರ್ಟ್​​ಫೋನ್​ಗೆ (108MP Camera Phone) ಭರ್ಜರಿ ಬೇಡಿಕೆ ಇದೆ. ಇದರ ನಡುವೆ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಫೋನ್​ಗಳು ಕೂಡ ಬಿಡುಗಡೆ ಆಗುತ್ತಿದೆ. ಹಾಗಾದ್ರೆ ನೀವು 50,000 ರೂ. ಒಳಗಡೆ ಖರೀದಿಸಬಹುದಾದ ಉತ್ತಮ ಕ್ಯಾಮೆರಾದ ಅತ್ಯುತ್ತಮ ಸ್ಮಾರ್ಟ್​​ಫೋನ್​ಗಳು ಯಾವುವು ಎಂಬುದನ್ನು ನೋಡೋಣ.

ಗೂಗಲ್ ಪಿಕ್ಸೆಲ್ 7 5G: ಅಮೆಜಾನ್​ನಲ್ಲಿ ಈ ಸ್ಮಾರ್ಟ್‌ಫೋನ್‌ ಸದ್ಯ 46,900 ರೂ. ಗೆ ಸೇಲ್ ಆಗುತ್ತಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಜೊತೆಗೆ ಕ್ಯಾಮೆರಾ ಮೂಲಕ ವಿಡಿಯೊ ರೆಕಾರ್ಡ್‌ ಮಾಡುವಾಗ ಬ್ಲರ್‌ ಎಫೆಕ್ಟ್‌ ನೀಡುವ ‘ಸಿನಿಮ್ಯಾಟಿಕ್ ಬ್ಲರ್’ ಫೀಚರ್ಸ್‌ ಪಡೆದುಕೊಂಡಿರುವುದು ವಿಶೇಷ. 4,335mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್ ಮತ್ತು ವೈಯರ್​​ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸುತ್ತದೆ.

Realme 11 Pro+ 5G: 200 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್​ಮಿ ಸೂಪರ್ ಸ್ಮಾರ್ಟ್​ಫೋನ್ ಬಿಡುಗಡೆ

ಇದನ್ನೂ ಓದಿ
Image
WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿಯ ಫೀಚರ್: ಆಂಡ್ರಾಯ್ಡ್ ಬಳಕೆದಾರರಿಗೆ ಸಂತಸದ ಸುದ್ದಿ
Image
Tech Tips: ಪೇಟಿಯಂ ಆ್ಯಪ್ ಮೂಲಕ ರೈಲು ಎಲ್ಲಿದೆ ಎಂದು ತಿಳಿಯುವುದು ಹೇಗೆ?: ಇಲ್ಲಿದೆ ಟ್ರಿಕ್
Image
Infinix Note 30 5G: ಭಾರತಕ್ಕೆ ಬರುತ್ತಿದೆ 108MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು ನೋಡಿ
Image
Tech Tips: ನಿಮ್ಮ ಫೇಸ್​ಬುಕ್ ಪ್ರೊಫೈಲ್ ಯಾರೆಲ್ಲ ನೋಡುತ್ತಿದ್ದಾರೆಂದು ತಿಳಿಯಬೇಕೆ?: ಇಲ್ಲಿದೆ ಟ್ರಿಕ್

ಸ್ಯಾಮ್​ಸಂಗ್ ಗ್ಯಾಲಕ್ಸಿ S22 ಆಲ್ಟ್ರಾ: ಈ ಫೋನಿನ 12GB RAM ಮತ್ತು 253GB ಸ್ಟೋರೇಜ್ ಆಯ್ಕೆಯ ಬೆಲೆ 1,09,999 ರೂ. ಇಷ್ಟು ಬೆಲೆ ಹೊಂದಿರುವ ಈ ಫೋನಿನ ಕ್ಯಾಮೆರಾ ಮಾತ್ರ ಅದ್ಭುತವಾಗಿದೆ. ಇದರಲ್ಲಿ 108MP+ 12MP+ 10MP+ 10MP ಸ್ಪೋರ್ಟ್ಸ್ ಕ್ವಾಡ್ ಕ್ಯಾಮೆರಾ ಸೆಟಪ್ ನೀಡಲಾಗಿದೆ. 40 ಮೆಗಾಫಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ಕೂಡ ಇದೆ. 100X ಜೂಮ್ ಫೀಚರ್ ಇದರ ಹೈಲೇಟ್ ಆಗಿದ್ದು, 5000mAh ಬ್ಯಾಟರಿ, 6.8 ಇಂಚಿನ ಡಿಸ್ ಪ್ಲೇ, ಆಕ್ಟ್ರಾಕೋರ್ ಪ್ರೊಸೆಸರ್ ಅಳವಡಿಸಲಾಗಿದೆ.

ಮೋಟೋ ಎಡ್ಜ್ 20 ಫ್ಯೂಶನ್: ಈ ಸ್ಮಾರ್ಟ್​​ಫೋನ್ 6.67 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಡೈಮನ್ಸಿಟಿ 800U ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಮುಖ್ಯವಾಗಿ 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್​ ಮತ್ತು 2 ಮೆಗಾಫಿಕ್ಸೆಲ್​ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.

ಐಫೋನ್ 13: 128GB ಸ್ಟೋರೇಜ್ ಆಯ್ಕೆಯ ಆ್ಯಪಲ್ ಐಫೋನ್ 13 ಸದ್ಯ ಫ್ಲಿಪ್​ಕಾರ್ಟ್​ನಲ್ಲಿ ಕೇವಲ 58,999 ರೂ. ಗೆ ಮಾರಾಟ ಆಗುತ್ತಿದೆ. ಇದರಲ್ಲಿರುವ ಡ್ಯುಯೆಲ್ ರಿಯರ್ ಕ್ಯಾಮೆರಾ 12 ಮೆಗಾಫಿಕ್ಸೆಲ್​ನಲ್ಲಿದೆ. ಸೆಲ್ಫೀ ಕ್ಯಾಮೆರಾ ಕೂಡ 12 ಮೆಗಾಫಿಕ್ಸೆಲ್​ನಿಂದ ಕೂಡಿದೆ. ನೀವು ಕ್ಯಾಮೆರಾ ಫೋನ್ ಹುಡುಕುತ್ತಿದ್ದರೆ ಇದೊಂದು ಅತ್ಯುತ್ತಮ ಆಯ್ಕೆಯಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್