Oppo Reno 7 Pro 5G: ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ ಒಪ್ಪೋ ರೆನೋ 7 ಪ್ರೊ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಅತಿ ಕಡಿಮೆ ಬೆಲೆಗೆ ಲಭ್ಯ

Smartphone Price Cut: ಒಪ್ಪೋ ಕಂಪನಿ ತನ್ನ ರೆನೋ 7 ಪ್ರೊ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಅತಿ ಕಡಿಮೆ ಬೆಲೆಗೆ ಈ ಸ್ಮಾರ್ಟ್​ಫೋನನ್ನು ನೀವು ಖರೀದಿಸಬಹುದು.

Oppo Reno 7 Pro 5G: ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ ಒಪ್ಪೋ ರೆನೋ 7 ಪ್ರೊ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಅತಿ ಕಡಿಮೆ ಬೆಲೆಗೆ ಲಭ್ಯ
Oppo Reno 7 Pro
Follow us
Vinay Bhat
|

Updated on:Mar 11, 2023 | 1:28 PM

ಒಪ್ಪೋ (Oppo) ಕಂಪನಿ ಬಿಡುಗಡೆ ಮಾಡುವ ಬಹುತೇಕ ಸ್ಮಾರ್ಟ್​ಫೋನ್​ಗಳಲ್ಲಿ ಕ್ಯಾಮೆರಾ ವಿಶೇಷವಾಗಿ ಇರುತ್ತದೆ. ಅದರಲ್ಲೂ ತನ್ನ ರೆನೋ ಸರಣಿಯ ಫೋನ್​ಗಳನ್ನು ಕ್ಯಾಮೆರಾ ಪ್ರಿಯರಿಗಾಗಿಯೇ ತಯಾರಿಸುತ್ತದೆ. ಇದರಲ್ಲಿ ಒಪ್ಪೋ ಸಂಸ್ಥೆ ಕಳೆದ ವರ್ಷ ಒಪ್ಪೋ ರೆನೋ 7 ಸರಣಿ ಅಡಿಯಲ್ಲಿ ರೆನೋ 7 ಮತ್ತು ರೆನೋ 7 ಪ್ರೊ (Oppo Reno 7 Pro 5G) ಎಂಬ ಎರಡು ಮೊಬೈಲ್ ಅನ್ನು ಬಿಡುಗಡೆ ಮಾಡಿತ್ತು. ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ್ದ ಈ ಫೋನ್ ಭರ್ಜರಿ ಸೇಲ್ ಆಗಿತ್ತು. ಈಗಲೂ ಈ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಟ್ರೆಂಡಿಂಗ್​ನಲ್ಲಿದೆ. ಇದರ ನಡುವೆ ಒಪ್ಪೋ ಕಂಪನಿ ತನ್ನ ರೆನೋ 7 ಪ್ರೊ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಅತಿ ಕಡಿಮೆ ಬೆಲೆಗೆ ಈ ಸ್ಮಾರ್ಟ್​ಫೋನನ್ನು (Smartphone) ನೀವು ಖರೀದಿಸಬಹುದು.

ಆಫರ್ ಏನು?:

ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ 40,990 ರೂ. ಗೆ ಅನಾವರಣಗೊಂಡಿತ್ತು. ಇದೀಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೇಜ್​ನಲ್ಲಿ ಈ ಫೋನ್ 34,899 ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಶೇ. 15 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರೊಂದಿಗೆ ಬ್ಯಾಂಕ್‌ಗಳಿಂದ ಕೆಲವು ಆಫರ್‌ ಸಹ ಲಭ್ಯವಾಗಲಿದ್ದು 1,500 ರೂ. ಡಿಸ್ಕೌಂಟ್ ಪಡೆಯಬಹುದು. ಅಂತೆಯೆ 20,000 ರೂ. ವರೆಗಿನ ಎಕ್ಸ್‌ಚೇಂಜ್ ಕೊಡುಗೆ ಸಹ ನೀಡಲಾಗಿದೆ.

ಇದನ್ನೂ ಓದಿ
Image
Redmi 12C: ಶವೋಮಿಯಿಂದ ಅತಿ ಕಡಿಮೆ ಬೆಲೆಗೆ ರೆಡ್ಮಿ 12C ಸ್ಮಾರ್ಟ್‌ಫೋನ್‌ ಬಿಡುಗಡೆ: ಎಷ್ಟು ರೂ. ಗೊತ್ತೇ?
Image
Mobile Data: ಅತಿ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆ ನೀಡುತ್ತಿರುವ ದೇಶ ಯಾವುದು ಗೊತ್ತೇ?
Image
iQOO Z7 5G: ಬಹುನಿರೀಕ್ಷಿತ ಐಕ್ಯೂ Z7 5G ಆಗಮನಕ್ಕೆ ದಿನಾಂಕ ಫಿಕ್ಸ್: ಏನಿದರ ವಿಶೇಷತೆ ನೋಡಿ
Image
OnePlus TV 65 Q2 Pro: ₹99,999 ಬೆಲೆಯ ಒನ್​ಪ್ಲಸ್ ಸ್ಮಾರ್ಟ್ ಟಿವಿ ಬಿಡುಗಡೆ

FASTag Balance Check: ನಿಮ್ಮ ಫಾಸ್ಟ್​ಟ್ಯಾಗ್​ನಲ್ಲಿ ಎಷ್ಟು ಹಣವಿದೆ ಎಂದು ನೋಡುವುದು ಹೇಗೆ?: ಇಲ್ಲಿದೆ ನೋಡಿ

ಏನಿದೆ ಫೀಚರ್ಸ್?:

ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಪಡೆದುಕೊಂಡಿದ್ದು ಗೋರಿಲ್ಲಾ ಗ್ಲಾಸ್ 5ಪ್ರೊಟೆಕ್ಷನ್‌ ನೀಡಲಾಗಿದೆ. ಬಲಿಷ್ಠವಾದ ಮೀಡಿಯಾಟೆಕ್‌ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್‌ ಒಎಸ್‌ 12 ನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ imx766 ಸೆನ್ಸಾರ್ ಅಳವಡಿಸಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ imx709 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಒಪ್ಪೋ ರೆನೋ 7 ಪ್ರೊ ಫೋನಿನ ಬ್ಯಾಟರಿ ಕೂಡ ಬಲಿಷ್ಠವಾಗಿದ್ದು 4500 mAh ಸಾಮರ್ಥ್ಯದ ಹೊಂದಿದೆ. ಇದು 65W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಈ ಫೋನನ್ನು ಸ್ಟಾರ್ಟ್ರೈಲ್ಸ್ ಬ್ಲೂ ಮತ್ತು ಸ್ಟಾರ್ಲೈಟ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Sat, 11 March 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್