Oppo Reno 8: ಐಫೋನ್ 12 ಡಿಸೈನ್ ಹೊಂದಿರುವ ಬೆಸ್ಟ್ ಕ್ಯಾಮೆರಾ ಫೋನ್ ಒಪ್ಪೋ ರೆನೋ 8 ಇಂದು ಮಾರಾಟ
Oppo Reno 8 Sale: ಒಪ್ಪೋ ರೆನೋ 8 ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಸೇಲ್ ಕಾಣಲಿದೆ. ಥೇಟ್ ಐಫೋನ್ 12 ಮಾದರಿಯ ಡಿಸೈನ್ ಹೊಂದಿರುವ ಈ ಫೋನಿನ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದೆ.
ಒಪ್ಪೋ (Oppo) ಕಂಪನಿಯ ಸ್ಮಾರ್ಟ್ಫೋನ್ಗಳಿಗೆ ಭಾರತದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಇತ್ತೀಚೆಗಂತು ಆಕರ್ಷಕ ಕ್ಯಾಮೆರಾ ಫೋನ್ಗಳನ್ನೇ ಬಿಡುಗಡೆ ಮಾಡುತ್ತಿರುವ ಒಪ್ಪೋ ಕಳೆದ ವಾರ ದೇಶದಲ್ಲಿ ತನ್ನ ರೆನೋ 8 ಸರಣಿಯ ಫೋನನ್ನು ಅನಾವರಣ ಮಾಡಿತ್ತು. ಇದರಲ್ಲಿ ಒಪ್ಪೋ ರೆನೋ 8 (Oppo Reno 8) ಮತ್ತು ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ ಇದೆ. ಇದೀಗ ಒಪ್ಪೋ ರೆನೋ 8 ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಸೇಲ್ ಕಾಣಲಿದೆ. ಥೇಟ್ ಐಫೋನ್ 12 ಮಾದರಿಯ ಡಿಸೈನ್ ಹೊಂದಿರುವ ಈ ಫೋನಿನ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದೆ. ಇದು ಸೋನಿ IMX766 ಸೆನ್ಸಾರ್ ಸಾಮರ್ಥ್ಯದ ಆಕರ್ಷಕ ಕ್ಯಾಮೆರಾವನ್ನು ಹೊಂದಿದೆ. ಹಾಗಾದ್ರೆ ಒಪ್ಪೋ ರೆನೋ 8 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
- ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 8GB RAM + 128GB ಸ್ಟೋರೇಜ್ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ. ಮೊದಲ ಸೇಲ್ ಪ್ರಯುಕ್ತ ಡಿಸ್ಕೌಂಟ್, ಬ್ಯಾಂಕ್ ಆಫರ್ ಕೂಡ ನೀಡಲಾಗಿದೆ.
- ಈ ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ.
- ಆಕ್ಟಾ–ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಕಲರ್ ಒಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
- ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ನ ಸೋನಿ IMX766 ಸೆನ್ಸಾರ್ನ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಆಗಿದೆ.
- ಹಾಗೆಯೆ ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ನ ಸೋನಿ IMX355 ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
- ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಫಿಂಗರ್ಪ್ರಿಂಟ್ ಅನ್ನು ಡಿಸ್‌ಪ್ಲೇಯಲ್ಲೇ ನೀಡಲಾಗಿದೆ.
ಇದನ್ನೂ ಓದಿ