Kannada News Technology Best Camera Phone Oppo Reno 8 will go on sale from July 25 via Flipkart Check price
Oppo Reno 8: ಐಫೋನ್ 12 ಡಿಸೈನ್ ಹೊಂದಿರುವ ಬೆಸ್ಟ್ ಕ್ಯಾಮೆರಾ ಫೋನ್ ಒಪ್ಪೋ ರೆನೋ 8 ಇಂದು ಮಾರಾಟ
Oppo Reno 8 Sale: ಒಪ್ಪೋ ರೆನೋ 8 ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಸೇಲ್ ಕಾಣಲಿದೆ. ಥೇಟ್ ಐಫೋನ್ 12 ಮಾದರಿಯ ಡಿಸೈನ್ ಹೊಂದಿರುವ ಈ ಫೋನಿನ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದೆ.
Oppo Reno 8
Follow us on
ಒಪ್ಪೋ (Oppo) ಕಂಪನಿಯ ಸ್ಮಾರ್ಟ್ಫೋನ್ಗಳಿಗೆ ಭಾರತದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಇತ್ತೀಚೆಗಂತು ಆಕರ್ಷಕ ಕ್ಯಾಮೆರಾ ಫೋನ್ಗಳನ್ನೇ ಬಿಡುಗಡೆ ಮಾಡುತ್ತಿರುವ ಒಪ್ಪೋ ಕಳೆದ ವಾರ ದೇಶದಲ್ಲಿ ತನ್ನ ರೆನೋ 8 ಸರಣಿಯ ಫೋನನ್ನು ಅನಾವರಣ ಮಾಡಿತ್ತು. ಇದರಲ್ಲಿ ಒಪ್ಪೋ ರೆನೋ8 (Oppo Reno 8) ಮತ್ತು ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ ಇದೆ. ಇದೀಗ ಒಪ್ಪೋ ರೆನೋ 8 ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಸೇಲ್ ಕಾಣಲಿದೆ. ಥೇಟ್ ಐಫೋನ್ 12 ಮಾದರಿಯ ಡಿಸೈನ್ ಹೊಂದಿರುವ ಈ ಫೋನಿನ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದೆ. ಇದು ಸೋನಿ IMX766 ಸೆನ್ಸಾರ್ ಸಾಮರ್ಥ್ಯದ ಆಕರ್ಷಕ ಕ್ಯಾಮೆರಾವನ್ನು ಹೊಂದಿದೆ. ಹಾಗಾದ್ರೆ ಒಪ್ಪೋ ರೆನೋ 8 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 8GB RAM + 128GB ಸ್ಟೋರೇಜ್ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ. ಮೊದಲ ಸೇಲ್ ಪ್ರಯುಕ್ತ ಡಿಸ್ಕೌಂಟ್, ಬ್ಯಾಂಕ್ ಆಫರ್ ಕೂಡ ನೀಡಲಾಗಿದೆ.
ಈ ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ.
ಆಕ್ಟಾ–ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಕಲರ್ ಒಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ನ ಸೋನಿ IMX766 ಸೆನ್ಸಾರ್ನ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಆಗಿದೆ.
ಇದನ್ನೂ ಓದಿ
ಹಾಗೆಯೆ ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ನ ಸೋನಿ IMX355 ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಫಿಂಗರ್ಪ್ರಿಂಟ್ ಅನ್ನು ಡಿಸ್‌ಪ್ಲೇಯಲ್ಲೇ ನೀಡಲಾಗಿದೆ.