5G Smartphone: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಬೆಸ್ಟ್ 5G ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

ರಿಯಲ್ ಮಿ 8 5G ಸ್ಮಾರ್ಟ್ ಫೋನ್ ಕೇವಲ 14,999 ರೂ. ಗೆ ಲಭ್ಯವಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

5G Smartphone: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಬೆಸ್ಟ್ 5G ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ
Best 5G Smartphone in India
Follow us
TV9 Web
| Updated By: Vinay Bhat

Updated on: Oct 17, 2021 | 3:14 PM

ಭಾರತೀಯ ಮಾರುಕಟ್ಟೆಯಲ್ಲಿ ಈಗೀಗ 5G ಸ್ಮಾರ್ಟ್ ಫೋನುಗಳ (5G Smartphone) ಹಾವಳಿ ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು 5G ಫೋನುಗಳು ಲಗ್ಗೆಯಿಟ್ಟಿವೆ. ಆದರೆ, ಅವುಗಳ ಪೈಕಿ ಹೆಚ್ಚಿನ ಮೊಬೈಲ್ ಗಳ (Mobile) ಬೆಲೆ ಗಗನದೆತ್ತರಕ್ಕಿದೆ. ಸದ್ಯ ಬಳಕೆದಾರರಲ್ಲಿ 5G ಯ ವ್ಯಾಮೋಹ ಮತ್ತು ಉಪಯುಕ್ತತೆಯಿಂದಾಗಿ ಕಂಪನಿಗಳು ಭಾರತದಲ್ಲಿ 5G ಸ್ಮಾರ್ಟ್ ಫೋನುಗಳನ್ನು ಕಡಿಮೆ ಬೆಲೆಗೆ ಬಿಡುಗಡೆ ಮಾಡಿವೆ. ಈ ಪೈಕಿ ಶಿಯೋಮಿ (Xiaomi), ಒನ್‌ಪ್ಲಸ್‌ (OnePlus), ಒಪ್ಪೋ (Oppo), ರಿಯಲ್‌ಮಿ (Realme) ಸಂಸ್ಥೆಗಳು ಈಗಾಗಲೇ ಹಲವು 5G ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿವೆ. ಈ ಫೋನುಗಳು ಕೈಗೆಟಕುವ ದರದಲ್ಲಿ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಅವುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ ನೋಡಿ

ರಿಯಲ್ ಮಿ 8 5G ಸ್ಮಾರ್ಟ್ ಫೋನ್ ಕೇವಲ 14,999 ರೂ. ಗೆ ಲಭ್ಯವಿದೆ. ಇದು 6.5-ಇಂಚಿನ ಫುಲ್‌-ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಅಳವಡಿಸಲಾಗಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಒಳಗೊಂಡಿದೆ. 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ.

ಮಾರುಕಟ್ಟೆಯಲ್ಲಿ ಲಭ್ಯವಿರುವ 5G ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್‌ ನಾರ್ಡ್‌ 2 5G ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಯ ​​6GB RAM + 128GB ಸ್ಟೋರೇಜ್ ರೂಪಾಂತರವು ಭಾರತದಲ್ಲಿ 27,999 ರೂ. ಬೆಲೆ ಹೊಂದಿದೆ.

ಶಿಯೋಮಿ ಮಿ11X 5G ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿವೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB+128GB ಆಯ್ಕೆಗೆ 27,999ರೂ, ಮತ್ತು 8GB+128GB ಸ್ಟೋರೇಜ್‌ ಆಯ್ಕೆಗೆ 28,999 ರೂ. ಬೆಲೆ ಹೊಂದಿದೆ.

ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,300mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಪ್ರಸ್ತುತ ಇದರ ಬೆಲೆ ರೂ. 29,990 ಆಗಿದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 14,999 ರೂ.ಬೆಲೆ ಹೊಂದಿದೆ. ಹಾಗೆಯೇ 6GB RAM + 128GB ಗೆ 16,999 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ.

WhatsApp Tricks: ವಾಟ್ಸ್​ಆ್ಯಪ್​ನಲ್ಲಿ ನೀವು ಆನ್​ಲೈನ್ ಇದ್ದರೂ ಯಾರಿಗೂ ಗೊತ್ತಾಗಲ್ಲ: ಹೀಗೆ ಮಾಡಿದ್ರೆ ಸಾಕು

Big Diwali Sale: ಫ್ಲಿಪ್​ಕಾರ್ಟ್​ನಲ್ಲಿ ದೀಪಾವಳಿ ಆಫರ್: ಕೇವಲ 6,499 ರೂ. ಗೆ ಖರೀದಿಸಿ ಈ ಸ್ಮಾರ್ಟ್​ಫೋನ್

(Best cheap 5G smartphones in India 2021)