ಕೇವಲ 5,000 ರೂ. ಒಳಗೆ ಲಭ್ಯವಿರುವ ಬೆಸ್ಟ್​ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ

ಒಂದು ವೇಳೆ ನೀವು 10000 ಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಕೊಂಡರೆ 5,000 ರೂಪಾಯಿಗಳಿಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಬಹುದಾಗಿದೆ.

ಕೇವಲ 5,000 ರೂ. ಒಳಗೆ ಲಭ್ಯವಿರುವ ಬೆಸ್ಟ್​ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ
Smartphone
TV9kannada Web Team

| Edited By: Vinay Bhat

Jul 18, 2021 | 2:02 PM

ಸ್ಮಾರ್ಟ್​​ಫೋನ್​ಗಳೆಂದರೆ (Smartphone) ಅದರ ಬೆಲೆ ಭಾರೀ ದುಬಾರಿ ಎಂಬ ಕಾಲ ಹೋಗಾಗಿದೆ. ಇಂದು ದಿನಕ್ಕೊಂದರಂತೆ ಮೊಬೈಲ್​ಗಳು ಮಾರುಕಟ್ಟೆಯಲ್ಲಿ ಬಿಡುಗಡೆ ಆಗುತ್ತಿದೆ. ಈಗಂತು ಕಡಿಮ ಬೆಲೆಗೆ ಲಭ್ಯವಿರುವ ಆಕರ್ಷಕ ಸ್ಮಾರ್ಟ್​ಫೋನ್​ಗಳಿಗೆ (Budget smartphones) ಹೆಚ್ಚಿನ ಬೇಡಿಕೆ. ಇದರಲ್ಲಿ ಕೆಲವು ಫೋನುಗಳು ಯಶಸ್ಸು ಕಂಡರೆ ಇನ್ನೂ ಕೆಲವು ಸದ್ದಿಲ್ಲದೆ ಕಾಣೆಯಾಗಿ ಬಿಡುತ್ತವೆ. ಸದ್ಯ ಹೆಚ್ಚಿನ ಜನರು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸುತ್ತಾರೆ. ಅದರಲ್ಲೂ ಕೆಲವು ಸ್ಮಾರ್ಟ್‌ಫೋನ್‌ಗಳು 10,000 ರೂ. ಆಸುಪಾಸಿನ ಬೆಲೆ ಹೊಂದಿರುತ್ತವೆ.

ಒಂದು ವೇಳೆ ನೀವು 10000 ಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಕೊಂಡರೆ 5,000 ರೂಪಾಯಿಗಳಿಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಬಹುದಾಗಿದೆ. ಅವುಗಳಲ್ಲಿ ಬೆಸ್ಟ್​ ಸ್ಮಾರ್ಟ್​ಫೋನಿನ ಪಟ್ಟಿ ಇಲ್ಲಿದೆ ನೋಡಿ…

ಸ್ಯಾಮ್​ಸಂಗ್ ಗ್ಯಾಲಕ್ಸಿ M01 ಕೋರ್‌: ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ M01 ಕೋರ್‌ ಸ್ಮಾರ್ಟ್‌ಫೋನ್‌ ಅತಿ ಕಡಿಮೆ ಬೆಲೆ ಲಭ್ಯವಿರುವ ಬೆಸ್ಟ್ ಮೊಬೈಲ್ ಆಗಿದೆ. ಇದರ ಬೆಲೆ ಕೇವಲ 4,999 ರೂ.. ಈ ಸ್ಮಾರ್ಟ್‌ಫೋನ್‌ 5.1-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಎಂಟಿ 6739 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಗೋ 10 ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್ ಹೊಂದಿದೆ. 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌, 5 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಜಿಯೋನಿ ಮ್ಯಾಕ್ಸ್‌: ಜಿಯೋನಿ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಬೆಲೆ 4,999 ರೂ.ಆಗಿದೆ. ಇದು 6.1-ಇಂಚಿನ ಎಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಯುನಿಸಾಕ್ 9863 ಎ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ನೀಡಲಾಗಿದ್ದು, ಮುಖ್ಯ ಕ್ಯಾಮೆರಾ 13ಮೆಗಾಫಿಕ್ಸೆಲ್‌ ಸೆನ್ಸಾರ್‌ ಹೊಂದಿದೆ.

ಮೈಕ್ರೋಮ್ಯಾಕ್ಸ್ ಭಾರತ್ 2 ಪ್ಲಸ್: ಮೈಕ್ರೋಮ್ಯಾಕ್ಸ್ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ 4 ಇಂಚಿನ ಡಬ್ಲ್ಯುವಿಜಿಎ ಡಿಸ್‌ಪ್ಲೇ ಹೊಂದಿದೆ. ಕ್ವಾಡ್-ಕೋರ್ ಮೀಡಿಯಾ ಟೆಕ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 7.0 ನೌಗಾಟ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. 5 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು 1,600mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ ಕೇವಲ 3,710ರೂ.

ಇದರ ಜೊತೆಗೆ ಕೊಂಚ ಅಧಿಕ ಬೆಲೆಯ ಮೈಕ್ರೋಮ್ಯಾಕ್ಸ್ ಇನ್ 1ಬಿ ಸ್ಮಾರ್ಟ್​ಫೊನ್ ಇದೆ. ಇದರ ಬೆಲೆ ಕೇವಲ 6,999 ರೂಪಾಯಿ ಆಗಿದ್ದು, 6.52 ಇಂಚು ಡಿಸ್ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಹೆಲಿಯೋ ಜಿ35 ಚಿಪ್ಸೆಟ್, 32 ಜಿಬಿ ಇಂಟರ್ನಲ್ ಸ್ಟೋರೇಜ್ ಅನ್ನು ಹೊಂದಿದೆ. 13 ಮೆಗಾ ಪಿಕ್ಸಲ್ ಪ್ರೈಮರಿ ಶೂಟರನ್ನು ಒಳಗೊಂಡಿದೆ.

ಐಟೆಲ್ A25 ಪ್ರೊ: ಈ ಸ್ಮಾರ್ಟ್‌ಫೋನ್‌ 5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಡ್‌ ಕೋರ್‌ ಪ್ರೊಸೆಸರ್‌ ಅಳವಡಿಸಲಾಗಿದ್ದು, ಆಂಡ್ರಾಯ್ಡ್ 9.0 ಪೈ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. 2 GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ, 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 3,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಮಾರುಕಟ್ಟೆಯಲ್ಲಿ ಕೇವಲ 4,999 ರೂ. ಗೆ ಲಭ್ಯವಿದೆ.

ಒಪ್ಪೋದಿಂದ ಅತಿ ಕಡಿಮೆ ಬೆಲೆಯ Oppo A16 ಸ್ಮಾರ್ಟ್​ಫೋನ್ ರಿಲೀಸ್: ಏನು ವಿಶೇಷತೆ?

ಕ್ರಾಪ್ ಸರ್ವೆ ಅಪ್ಲಿಕೇಷನ್ ಬಳಸಿ ಮೊಬೈಲ್ ಮೂಲಕವೇ ಬೆಳೆ ಸಮೀಕ್ಷೆ ಮಾಡಲು ಅವಕಾಶ; ಇಲ್ಲಿದೆ ವಿವರ

(Best Mobile phones under Rs 5000 in India)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada