Best Smartphone: 15,000 ರೂ. ಒಳಗೆ ಹೊಸ ಸ್ಮಾರ್ಟ್​ಫೋನ್ ಬೇಕಿದ್ದರೆ ಇಲ್ಲೊಮ್ಮೆ ಗಮನಿಸಿ: ಇದು ಬಜೆಟ್ ಬೆಲೆಯ ಬೆಸ್ಟ್​ ಫೋನ್

| Updated By: Vinay Bhat

Updated on: Dec 05, 2021 | 3:26 PM

Smartphones under 15,000: ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುವವರಿಗೆ ಅನೇಕ ಆಯ್ಕೆಗಳಿವೆ. ಹಾಗಾದ್ರೆ ನೀವು ಭಾರತದಲ್ಲಿ 15,000 ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಟಾಪ್‌ ಸ್ಮಾರ್ಟ್‌ಫೋನ್‌ಗಳು ಯಾವುವು? ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Best Smartphone: 15,000 ರೂ. ಒಳಗೆ ಹೊಸ ಸ್ಮಾರ್ಟ್​ಫೋನ್ ಬೇಕಿದ್ದರೆ ಇಲ್ಲೊಮ್ಮೆ ಗಮನಿಸಿ: ಇದು ಬಜೆಟ್ ಬೆಲೆಯ ಬೆಸ್ಟ್​ ಫೋನ್
Best mobile phones under 15000
Follow us on

ಭಾರತೀಯ ಸ್ಮಾರ್ಟ್​ಫೋನ್​ (Smartphone) ಮಾರುಕಟ್ಟೆಲ್ಲೀಗ ಬಜೆಟ್ ಬೆಲೆಯ ಮೊಬೈಲ್​ಗಳಿಗೆ (Mobile) ಏನೂ ಕೊರತೆಯಿಲ್ಲ. ವಾರಕ್ಕೆ ಕಡಿಮೆ ಎಂದರೂ ಎರಡರಿಂದ ಮೂರು ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುವುದು ಮಾಮೂಲಾಗಿದೆ. ಫೋನ್ (Phone) ಪ್ರಿಯರು ಕೂಡ ತಮ್ಮ ಆಯ್ಕೆಯ ಸ್ಮಾರ್ಟ್​ಫೋನ್​ಗಳನ್ನು ಖರೀದಿಸುತ್ತಿದ್ದಾರೆ. ಜೊತೆಗೆ ಸ್ವಲ್ಪ ಸಮಯ ಬಳಸಿ ಮತ್ತೊಂದು ಹೊಸ ಫೋನನ್ನು ತೆಗೆದುಕೊಳ್ಳುವ ಪ್ರಕ್ರಿಯೆ ಕೂಡ ಜೋರಾಗಿದೆ. ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲೂ ಹೊಸ ಫೋನುಗಳು ಹೆಚ್ಚಿನ ಸಂಖ್ಯೆಯಲ್ಲಿ ಲಗ್ಗೆ ಹಾಕುತ್ತಿವೆ. ಕಳೆದ ಕೆಲವು ತಿಂಗಳಿಂದ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಬಜೆಟ್ ಸ್ಮಾರ್ಟ್​ಫೋನ್​ಗಳು (Budget Price Phone) ಬಿಡುಗಡೆ ಆಗಿವೆ. ಈ ಪೈಕಿ ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುವವರಿಗೆ ಅನೇಕ ಆಯ್ಕೆಗಳಿವೆ. ಹಾಗಾದ್ರೆ ನೀವು ಭಾರತದಲ್ಲಿ 15,000 ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಟಾಪ್‌ ಸ್ಮಾರ್ಟ್‌ಫೋನ್‌ಗಳು ಯಾವುವು? (Smartphones under 15000) ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Poco M3 Pfro 5G: ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್​ಫೋನ್ ಕೇವಲ 13,999 ರೂ.ಬೆಲೆಯಲ್ಲಿ ಲಭ್ಯವಾಗುತ್ತಿದೆ.

Redmi Note 10S: ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್​ಫೋನ್ 14,999 ರೂ. ಗೆ ಮಾರಾಟವಾಗುತ್ತಿದೆ.

Realme Narzo 50A: ರಿಯಲ್‌ ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5-ಇಂಚಿನ HD+ ಡಿಸ್‌ಪ್ಲೆಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌11 ಆಧಾರಿತ Realme UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಈ ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 11,499 ರೂ.ಬೆಲೆಗೆ ಲಭ್ಯವಾಗುತ್ತದೆ.

Micromax In 1: ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್‌ಪ್ಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G80 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 10,499 ರೂ. ಬೆಲೆಯನ್ನು ಹೊಂದಿದೆ.

Realme 8i: ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ 6.6-ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೆಲೆ 13,999 ರೂ. ಆಗಿದೆ.

Vodafone Idea Disney+ Hotstar Plans: ಬೆಲೆ ಏರಿಕೆ ಶಾಕ್ ನೀಡಿದ್ದ ಏರ್ಟೆಲ್, ಜಿಯೋ, ವಿಯಿಂದ ಈಗ ಆಫರ್ ಮೇಲೆ ಆಫರ್ ಘೋಷಣೆ

Infinix Note 11: ಇನ್ಫಿನಿಕ್ಸ್‌ ಕಂಪನಿಯಿಂದ ಬರುತ್ತಿದೆ ಬಜೆಟ್ ಬೆಲೆಯ ಮತ್ತೊಂದು ಸ್ಮಾರ್ಟ್​ಫೋನ್

(best phones within a budget of Rs 15000 Here is the Best Redmi Realme Poco Smartphones)